ಬೆಂಗಳೂರು: ಕೊರೊನಾ ವೈರಸ್ ಮಿತಿಮೀರಿ ಹರಡುತ್ತಿದೆ. ಚಿತ್ರರಂಗದ ಕೆಲಸಗಳು ಸ್ಥಗಿತವಾಗಿದ್ದು ಒಂದು ಕಡೆಯಾದರೆ, ಕೊರೊನಾದಿಂದ ನಿರ್ದೇಶಕರು, ನಟರು ಮೃತಪಡುತ್ತಿರುವುದು ಮತ್ತೊಂದು ಕಡೆ. ಈಗ ಸ್ಯಾಂಡಲ್ವುಡ್ ನಟಿ ಮಾಲಾಶ್ರೀ ಅವರ ಗಂಡ, ಖ್ಯಾತ ನಿರ್ಮಾಪಕ ಕೋಟಿ ರಾಮು (52) ಕೊರೊನಾದಿಂದ ನಿಧನ ಹೊಂದಿದ್ದಾರೆ.
ರಾಮು ಅವರಿಗೆ ಕಳೆದವಾರ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಮೂರು ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಅವರಿಗೆ ವೈದ್ಯರು ನಿರಂತರವಾಗಿ ಚಿಕಿತ್ಸೆ ನೀಡುತ್ತಲೇ ಇದ್ದರು. ಆದರೆ, ಚಿಕಿತ್ಸೆ ಫಲಿಸಲಿಲ್ಲ. ಹೀಗಾಗಿ, ಅವರು ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ರಾಮು ಸ್ಯಾಂಡಲ್ವುಡ್ನಲ್ಲಿ ಖ್ಯಾತ ನಿರ್ಮಾಪಕರು. ಕನ್ನಡದಲ್ಲಿ ಅವರು ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ. ಲಾಕಪ್ಡೆತ್, AK-47, ರಾಕ್ಷಸ, ಕಲಾಸಿಪಾಳ್ಯ, ಅರ್ಜುನ್ ಗೌಡ ಸೇರಿ ಹಲವು ಚಿತ್ರ ನಿರ್ಮಾಣ ಮಾಡಿದ್ದರು.ಕೋಟಿ ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ದೂರಿ ಚಿತ್ರಗಳನ್ನು ರಾಮು ನಿರ್ಮಾಣ ಮಾಡುತ್ತಿದ್ದರು. ಅವರು ಕೋಟಿ ರಾಮು ಎಂದೇ ಖ್ಯಾತರಾಗಿದ್ದರು.
ರಾಮು ನಿಧನಕ್ಕೆ ಸ್ಯಾಂಡಲ್ವುಡ್ ಶೋಕ ವ್ಯಕ್ತಪಡಿಸಿದೆ. ಅವರನ್ನು ನಾವು ಇಷ್ಟು ಬೇಗನೆ ಕಳೆದುಕೊಳ್ಳಬಾರದಿತ್ತು ಎಂದು ಸ್ಯಾಂಡಲ್ವುಡ್ ಮಂದಿ ಮರುಗಿದ್ದಾರೆ.
ಕೊರೊನಾ ಕಾರಣದಿಂದಲೂ ಚಿತ್ರರಂಗದ ಅನೇಕರು ಸಾವಿನ ಹಾದಿ ಹಿಡಿಯುತ್ತಿದ್ದಾರೆ. ಕೆಲವೇ ದಿನಗಳ ಹಿಂದೆ ಹಿರಿಯ ನಟ ಕಿಶೋರ್ ನಂದಲಸ್ಕರ್ ಅವರು ಕೊವಿಡ್ನಿಂದ ಮೃತರಾದರು. ಗುರುವಾರ (ಏ.22) ರಾತ್ರಿ ಹಿರಿಯ ಸಂಗೀತ ನಿರ್ದೇಶಕ ಶ್ರವಣ್ ರಾಥೋಡ್ ನಿಧನರಾದರು.
ಇದನ್ನೂ ಓದಿ: Amit Mistry Death: ‘ಬಂದಿಶ್ ಬ್ಯಾಂಡಿಟ್ಸ್’ ಖ್ಯಾತಿಯ ನಟ ಅಮಿತ್ ಮಿಸ್ತ್ರೀ ಹೃದಯಾಘಾತದಿಂದ ನಿಧನ
Published On - 8:38 pm, Mon, 26 April 21