AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಟಿ ಲೈಟ್ಸ್’ ಸಿನಿಮಾ ಟ್ರೇಲರ್ ರಿಲೀಸ್; ಸಿಕ್ತು ಹ್ಯಾಟ್ರಿಕ್ ಹೀರೋ ಮೆಚ್ಚುಗೆ

ಹಾಡುಗಳ ಮೂಲಕ ಸದ್ದು ಮಾಡಿದ ಬಳಿಕ, ‘ಸಿಟಿ ಲೈಟ್ಸ್’ ಚಿತ್ರದಿಂದ ಈಗ ಟ್ರೇಲರ್ ಅನಾವರಣ ಮಾಡಲಾಗಿದೆ. ಶಿವರಾಜ್​ಕುಮಾರ್ ಅವರು ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ. ಮೋನಿಷಾ ವಿಜಯ್ ಕುಮಾರ್, ಉಮಾಶ್ರೀ, ವಿನಯ್ ರಾಜ್​ಕುಮಾರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆ.18ಕ್ಕೆ ‘ಸಿಟಿ ಲೈಟ್ಸ್’ ತೆರೆಕಾಣಲಿದೆ.

‘ಸಿಟಿ ಲೈಟ್ಸ್’ ಸಿನಿಮಾ ಟ್ರೇಲರ್ ರಿಲೀಸ್; ಸಿಕ್ತು ಹ್ಯಾಟ್ರಿಕ್ ಹೀರೋ ಮೆಚ್ಚುಗೆ
Monisha Vijya Kumar, Vinay Rajkumar
ಮದನ್​ ಕುಮಾರ್​
|

Updated on: Sep 13, 2026 | 1:35 PM

Share

ದುನಿಯಾ ವಿಜಯ್ ಅವರು ನಿರ್ದೇಶನ ಮಾಡಿರುವ ‘ಸಿಟಿ ಲೈಟ್ಸ್’ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಹಾಗೂ ವಿನಯ್ ರಾಜ್​ಕುಮಾರ್ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ಟ್ರೇಲರ್ ನೋಡಿದ ಬಳಿಕ ನಟ ಶಿವರಾಜ್​ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 18ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಕಥಾಹಂದರ ಏನು ಎಂಬುದರ ಝಲಕ್ ಈ ಟ್ರೇಲರ್​ನಲ್ಲಿ ಕಾಣಿಸಿದೆ.

ಟ್ರೇಲರ್ ಬಿಡುಗಡೆ ಬಳಿಕ ಶಿವರಾಜ್​ಕುಮಾರ್ ಅವರು ಮಾತನಾಡಿದರು. ‘ಈ ಟ್ರೇಲರ್ ನೋಡಿ ನನಗೆ ಖುಷಿ ಆಯಿತು. ಭೂಗತ ಜಗತ್ತಿನ ಸಿನಿಮಾ ಎಂದರೆ ಶಿವಣ್ಣ ನೆನಪಾಗ್ತಾರೆ ಅಂತ ಜನರು ಹೇಳುತ್ತಾರೆ. ಇನ್ಮೇಲೆ ಶಿವಣ್ಣ ಜೊತೆಯಲ್ಲಿ ವಿಜಯ್ ಕೂಡ ನೆನಪಾಗುತ್ತಾನೆ ಅಂತ ಹೇಳ್ತೀನಿ. ನನ್ನ ತಮ್ಮನ ಮಗ ಎಂಬ ಕಾರಣಕ್ಕೆ ನಾನು ಬೆಂಬಲ ನೀಡುತ್ತಿಲ್ಲ. ಅವನಲ್ಲಿ ಪ್ರತಿಭೆ ಇದೆ’ ಎಂದು ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ.

ಸಿಟಿ ಲೈಟ್ಸ್ ಸಿನಿಮಾದ ಟ್ರೇಲರ್:

‘ನಾನು ಈ ಸಿನಿಮಾಗಾಗಿ ಕಾಯುತ್ತಿದ್ದೇನೆ. ಖಂಡಿತವಾಗಿಯೂ ಈ ಚಿತ್ರ ಹಿಟ್ ಆಗುತ್ತದೆ. ಮಾಸ್ತಿ ಅವರ ಸಂಭಾಷಣೆ ಚೆನ್ನಾಗಿದೆ. ವಿಜಯ್ ಅವರು ಸಲಗ ಚಿತ್ರದಿಂದ, ಭೀಮ ಚಿತ್ರದಿಂದ ಸಿಟಿ ಲೈಟ್ಸ್ ತನಕ ತಾಂತ್ರಿಕವಾಗಿ ತುಂಬ ಚೆನ್ನಾಗಿ ಸಿನಿಮಾ ಮಾಡುತ್ತಾ ಬಂದಿದ್ದಾರೆ. ಹೊಸಬರಿಗೆ ಅವಕಾಶ ಕೊಡುತ್ತಿರುವುದು ನನಗೆ ಹೆಚ್ಚು ಖುಷಿ ನೀಡುತ್ತಿದೆ. ಇಂಥ ಒಳ್ಳೆಯ ಸಿನಿಮಾ ಮಾಡಿದ್ದಕ್ಕೆ ಧನ್ಯವಾದಗಳು’ ಎಂದಿದ್ದಾರೆ ಶಿವಣ್ಣ.

‘ಈ ಚಿತ್ರದಲ್ಲಿ ಮೋನಿಷಾ ಚೆನ್ನಾಗಿ ಕಾಣುತ್ತಾರೆ ಹಾಗೂ ಚೆನ್ನಾಗಿ ಅಭಿನಯಿಸಿದ್ದಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ’ ಎಂದು ಶಿವರಾಜ್​ಕುಮಾರ್ ಅವರು ಶುಭ ಹಾರೈಸಿದ್ದಾರೆ. ‘ಈ ಚಿತ್ರ ಕೂಡ ಓಂ ಸಿನಿಮಾ ರೀತಿ ಆಗುತ್ತದೆ ಅಂತ ನನಗೆ ಅನಿಸುತ್ತದೆ. ವಿನಯ್​ನ ಈ ಸಿನಿಮಾದಲ್ಲಿ ಬೇರೆ ರೀತಿ ತೋರಿಸಿದ್ದಾರೆ’ ಎಂದು ಗೀತಾ ಶಿವರಾಜ್​ಕುಮಾರ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಂಜಿತ್ ಹೆಗಡೆ ಕಂಠದಲ್ಲಿ ಮೂಡಿಬಂತು ‘ಸಿಟಿ ಲೈಟ್ಸ್’ ಚಿತ್ರದ ‘ಕಂದಮ್ಮ’ ಹಾಡು

‘ನನ್ನನ್ನು ನಂಬಿ ಇಷ್ಟು ದೊಡ್ಡ ಪಾತ್ರ ಕೊಟ್ಟಿದ್ದಕ್ಕೆ ನಮ್ಮ ತಂದೆಗೆ, ನಿರ್ದೇಶಕರಿಗೆ ಧನ್ಯವಾದ ಹೇಳುತ್ತೇನೆ. ನಮ್ಮ ತಂದೆಗೆ ಪ್ರೀತಿ ನೀಡಿದ ರೀತಿಯಲ್ಲೇ ನನಗೂ ಪ್ರೀತಿ ನೀಡಿ’ ಎಂದು ಮೋನಿಷಾ ಅವರು ಹೇಳಿದರು. ನಟ ವಿನಯ್ ರಾಜ್​ಕುಮಾರ್ ಅವರು ಮಾತನಾಡಿ, ‘ಹಾಡು, ಟ್ರೇಲರ್ ಹೇಗಿದೆ ಎಂಬುದನ್ನು ಜನರು ನೋಡಿದ್ದಾರೆ. ಈಗ ಸಿನಿಮಾ ಹೇಗಿದೆ ಅಂತ ಜನರು ನೋಡಿ ಹೇಳಬೇಕು. ಈ ಸಿನಿಮಾ ಮಾಡಿದ ಮೇಲೆ ಬೆಂಗಳೂರಿನಲ್ಲಿ ಕಷ್ಟಪಟ್ಟು ಜೀವನ ಮಾಡುತ್ತಿರುವ ಪ್ರತಿಯೊಬ್ಬರ ಮೇಲೆ ನನಗೆ ಗೌರವ ಹೆಚ್ಚಾಗಿದೆ’ ಎಂದು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!