ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ

TV9 Digital Desk

| Edited By: Rajesh Duggumane

Updated on:Nov 16, 2021 | 5:10 PM

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ; ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ

ಪುನೀತ್​ ರಾಜ್​ಕುಮಾರ್​ ಅವರನ್ನು ಕಳೆದುಕೊಂಡು ಚಿತ್ರರಂಗ ಸಾಕಷ್ಟು ನೋವನ್ನು ಅನುಭವಿಸುತ್ತಿದೆ. ಇಂದು ಅವರನ್ನು ನೆನಪಿಸಿಕೊಳ್ಳೋಕೆ ‘ಪುನೀತ ನಮನ ಕಾರ್ಯಕ್ರಮ’ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್​ ಅವರನ್ನು ನೆನಪಿಸಿಕೊಳ್ಳುವ ಕಾರ್ಯ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಘೋಷಣೆ ಒಂದನ್ನು ಮಾಡಿದ್ದಾರೆ. ಪುನೀತ್ ರಾಜ್​ಕುಮಾರ್​ಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಅವರು ತಿಳಿಸಿದ್ದಾರೆ.

‘ಪುನೀತ್​ ನಮ್ಮೆಲ್ಲರಿಗೂ ಆತ್ಮೀಯ. ಅವನನ್ನು ನಾನು ಬಾಲ್ಯದಿಂದ ಬಲ್ಲೆ. ಬಾಲ್ಯದಲ್ಲಿಯೇ ಪ್ರತಿಭೆಯ ಚಿಲುಮೆ ಹೊಂದಿದ ವ್ಯಕ್ತಿ. ಬಾಲ ನಟನಾಗಿ ರಾಷ್ಟ್ರ ಪ್ರಶಸ್ತಿ ಗಳಿಸಿದ ಕರ್ನಾಟಕದ ಏಕೈಕ ಬಾಲಕ ಪುನೀತ್​. ಸಣ್ಣ ವಯಸ್ಸಿನಲ್ಲೇ ಆತ ಅದ್ಭುತವಾಗಿ ನಟಿಸುತ್ತಿದ್ದ. ಅಷ್ಟು ಸಣ್ಣ ವಯಸ್ಸಿನಲ್ಲಿ ಹಾಗೆ ನಟಿಸೋದು ಸುಲಭವಲ್ಲ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಪುನೀತ್​ ಅವರನ್ನು ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ಮಾಡಲಾಗಿದೆ. ಅಪ್ಪು ಅವರ ಹೆಸರನ್ನು ರಸ್ತೆಗೆ, ಪಾರ್ಕ್​​ಗೆ ಇಡಲು ಅನೇಕ ಆಗ್ರಹ ಬಂದಿತ್ತು. ಇದೇ ಉದ್ದೇಶ ಸರ್ಕಾರದ್ದೂ ಹೌದು ಎನ್ನುವ ಮಾತನ್ನು ಸಿಎಂ ಹೇಳಿದರು. ‘ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಲಾಗುತ್ತದೆ. ಇದರ ಜತೆಗೆ ಪುನೀತ್​ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಘೋಷಣೆ ಮಾಡುತ್ತಿದ್ದೇನೆ’  ಎಂದರು ಅವರು.

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ. ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ. ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಇದನ್ನೂ ಓದಿ: Ashwini Puneeth: ನಿಂತಿಲ್ಲ ಅಶ್ವಿನಿ, ಶಿವಣ್ಣನ​ ಕಣ್ಣೀರು; ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅತ್ತ ಪುನೀತ್​ ಕುಟುಂಬ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada