Puneeth Rajkumar Road: ಪುನೀತ್​ ಜೀವನ ಚರಿತ್ರೆ ಸಾರುವ ಸ್ಮಾರಕ ನಿರ್ಮಾಣಕ್ಕೆ ಸಿಎಂ ಭರವಸೆ; ರಸ್ತೆ ಉದ್ಘಾಟನೆ ವೇಳೆ ಘೋಷಣೆ

Basavaraj Bommai | Puneeth Rajkumar Memorial: ‘ಸಾವಿನ ನಂತರವೂ ಪುನೀತ್​ ರಾಜ್​ಕುಮಾರ್​ ನಮ್ಮ ನಡುವೆ ಬದುಕುತ್ತಿದ್ದಾರೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಬೇಕು ಎಂಬುದು ಜನರ ಒತ್ತಾಸೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Puneeth Rajkumar Road: ಪುನೀತ್​ ಜೀವನ ಚರಿತ್ರೆ ಸಾರುವ ಸ್ಮಾರಕ ನಿರ್ಮಾಣಕ್ಕೆ ಸಿಎಂ ಭರವಸೆ; ರಸ್ತೆ ಉದ್ಘಾಟನೆ ವೇಳೆ ಘೋಷಣೆ
ಪುನೀತ್​ ರಾಜ್​ಕುಮಾರ್​, ಬಸವರಾಜ ಬೊಮ್ಮಾಯಿ
Follow us
ಮದನ್​ ಕುಮಾರ್​
|

Updated on:Feb 07, 2023 | 10:37 PM

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಪುನೀತ್​ ರಾಜ್​ಕುಮಾರ್​ ರಸ್ತೆ’ (Puneeth Rajkumar Road) ಅನಾವರಣ ಮಾಡಿದ್ದಾರೆ. ಅಪ್ಪು ಫೋಟೋ ಇರುವ ಬಲೂನ್​ ಗುಚ್ಛವನ್ನು ಬಾನಂಗಳಕ್ಕೆ ಹಾರಿಬಿಡುವ ಮೂಲಕ ಇಂದು (ಫೆ.7) ಈ ರಸ್ತೆಯನ್ನು ಅವರು ಉದ್ಘಾಟಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಡಾ. ರಾಜ್​ಕುಮಾರ್​ ಕುಟುಂಬದ ಸದಸ್ಯರು, ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು, ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಭಾಗಿಯಾಗಿದ್ದಾರೆ. ಈ ವೇಳೆ ಪುನೀತ್​ ಬಗ್ಗೆ ಬಸವರಾಜ ಬೊಮ್ಮಾಯಿ ಅನೇಕ ವಿಷಯಗಳನ್ನು ಹಂಚಿಕೊಂಡಿದ್ದಾರೆ. ‘ಅಣ್ಣಾವ್ರ ಕುಟುಂಬದ ಜೊತೆ ನನಗೆ ಹಲವು ವರ್ಷಗಳ ಒಡನಾಟ ಇದೆ. ಎಲ್ಲರನ್ನೂ ನಗುವಿನಿಂದ ಮತ್ತು ಹೃದಯ ಶ್ರೀಮಂತಿಕೆಯಿಂದ ಗೆದ್ದ ವ್ಯಕ್ತಿ ನಮ್ಮ ಅಪ್ಪು. ಚಿಕ್ಕ ವಯಸ್ಸಿನಲ್ಲಿ ದೊಡ್ಡ ಸಾಧನೆ ಮಾಡಿದ ಹಲವರು ನಮ್ಮನ್ನ ಬಿಟ್ಟು ಹೋಗಿದ್ದಾರೆ’ ಎಂದು ಬೊಮ್ಮಾಯಿ (CM Basavaraj Bommai) ಹೇಳಿದ್ದಾರೆ.

‘ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಜನಸಾಗರವೇ ಸೇರಿತು. ಹೆಚ್ಚಿನ ಜನರಿಗೆ ಅಂತಿಮ ದರ್ಶನಕ್ಕೆ ನಾವು ವ್ಯವಸ್ಥೆ ಮಾಡಿದೆವು. ಜನರ ಕಣ್ಣೀರು ನೋಡಿದಾಗ ಒಬ್ಬ ವ್ಯಕ್ತಿ ಎಷ್ಟು ಪ್ರೀತಿ ಗಳಿಸಬಹುದು ಅಂತ ಅನಿಸಿತು. ಹಿರಿಯರು-ಕಿರಿಯರು ಎಂಬ ಯಾವುದೇ ಭೇದ ಭಾವ ಇಲ್ಲದೇ ಅವರು ಎಲ್ಲರಿಗೂ ಪ್ರೀತಿ ತೋರಿಸಿದ್ದರು. ರಾಜ್ಯದ ಎಲ್ಲ ಭಾಗದಲ್ಲೂ ಪುನೀತ್​ ಅವರಿಗೆ ಅಭಿಮಾನಿಗಳಿದ್ದಾರೆ’ ಎಂದಿದ್ದಾರೆ ಬಸವರಾಜ ಬೊಮ್ಮಾಯಿ.

ಇದನ್ನೂ ಓದಿ
Image
Puneeth Rajkumar: ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಪುನೀತ್​ ರಾಜ್​ಕುಮಾರ್​ ಜೀವನದ ವಿವರ: ಫ್ಯಾನ್ಸ್​ಗೆ ಹೆಮ್ಮೆ
Image
Puneeth Rajkumar: ನಟಿ ಆಶಾರಾಣಿ ಸೀರೆ ಮೇಲೆ ಪುನೀತ್​ ಭಾವಚಿತ್ರ; ಇದು ಅಭಿಮಾನದ ಡಿಸೈನ್​
Image
Kantara: ‘ಕಾಂತಾರ’ ಶಿವನ ಪಾತ್ರದಲ್ಲಿ ಪುನೀತ್​; ಹೇಗಿದೆ ನೋಡಿ ಅಭಿಮಾನಿ ಕಲ್ಪನೆಯಲ್ಲಿ ಮೂಡಿದ ಪೋಸ್ಟರ್​
Image
Puneeth Rajkumar: ಪುನೀತ್​ ಮೇಲೆ RSS ಕಾರ್ಯಕರ್ತೆ ಗಂಭೀರ ಆರೋಪ; ಮೌನ ಮುರಿಯಬೇಕಿದೆ ರಿಷಬ್​ ಶೆಟ್ಟಿ

ಇದನ್ನೂ ಓದಿ: ಪುನೀತ್​ ರಸ್ತೆ ನಾಮಕರಣ ಕಾರ್ಯಕ್ರಮ ಫ್ಲೆಕ್ಸ್​ನಲ್ಲಿ ಅಪ್ಪು ಫೋಟೋನೇ ಇಲ್ಲ; ರಾರಾಜಿಸಿದ ರಾಜಕೀಯ ನಾಯಕರು

‘ಸಾವಿನ ನಂತರವೂ ಅಪ್ಪು ನಮ್ಮ ನಡುವೆ ಬದುಕುತ್ತಿದ್ದಾರೆ. ಹಾಗಾಗಿ ಪ್ರತಿ ದಿನ ನಾವು ಅವರನ್ನು ನೆನಪಿಸಿಕೊಳ್ಳುತ್ತಿದ್ದೇವೆ. ಅವರ ಹೆಸರಿನಲ್ಲಿ ಸ್ಮಾರಕ ಮಾಡಬೇಕು ಎಂಬುದು ಜನರ ಒತ್ತಾಸೆ. ಸಮಾಧಿ ಸ್ಥಳದಲ್ಲಿ ಅವರ ಮತ್ತು ಡಾ. ರಾಜ್​ಕುಮಾರ್​ ಜೀವನ ಚರಿತ್ರೆ ಹೇಳುವಂತಹ ಅದ್ಭುತವಾದ ಸ್ಮಾರಕವನ್ನು ನಮ್ಮ ಸರ್ಕಾರದ ವತಿಯಿಂದ ನಿರ್ಮಾಣ ಮಾಡುತ್ತೇವೆ. ಅಪ್ಪು ಅವರ ಸ್ಮಾರಕ ಮಾಡುವ ಭಾಗ್ಯ ನನ್ನದು. ಅಲ್ಲದೇ ಅವರಿಗೆ ಕರ್ನಾಟಕ ರತ್ನ ಕೊಡುವಂತಹ ಭಾಗ್ಯ ಕೂಡ ನನ್ನದಾಗಿತ್ತು’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವೇದಿಕೆಯಲ್ಲಿ ತೇಜಸ್ವಿ ಸೂರ್ಯ, ಆರ್​. ಅಶೋಕ್​, ರಾಘವೇಂದ್ರ ರಾಜ್​ಕುಮಾರ್​, ಅಭಿಷೇಕ್​ ಅಂಬರೀಷ್​ ಮುಂತಾದ ಗಣ್ಯರು ಮಾತನಾಡಿ ಪುನೀತ್​ ರಾಜ್​ಕುಮಾರ್​ಗೆ ನುಡಿ ನಮನ ಸಲ್ಲಿಸಿದ್ದಾರೆ. ಚಂದನವನದ ಸೆಲೆಬ್ರಿಟಿಗಳು ಮನರಂಜನಾ ಕಾರ್ಯಕ್ರಮ ನೀಡಿದ್ದಾರೆ. ಕರ್ನಾಟಕ ಸರ್ಕಾರಕ್ಕೆ ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:37 pm, Tue, 7 February 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ