ಸದನದಲ್ಲೂ ಪುನೀತ್​ ಬಗ್ಗೆ ಮಾತು; ಕರ್ನಾಟಕ ರತ್ನ, ಪದ್ಮಶ್ರೀ ಪ್ರಶಸ್ತಿ ಬಗ್ಗೆ ಸಿಎಂ ಹೇಳಿದ್ದೇನು?

CM Basavaraj Bommai | Puneeth Rajkumar: ‘ಅಲ್ಪ ಸಮಯದಲ್ಲಿ ಒಬ್ಬ ನಟ ಇಷ್ಟು ಜನರ ಹೃದಯದಲ್ಲಿ ಸ್ಥಾನ ಗಳಿಸಬಲ್ಲ ಎಂಬುದು ಪುನೀತ್​ ರಾಜ್​ಕುಮಾರ್​ ಅವರ ನಿಧನದ ಬಳಿಕ ತಿಳಿಯಿತು. ಅವರು​ ಕೇವಲ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿ ಆಗಿರಲಿಲ್ಲ’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸದನದಲ್ಲೂ ಪುನೀತ್​ ಬಗ್ಗೆ ಮಾತು; ಕರ್ನಾಟಕ ರತ್ನ, ಪದ್ಮಶ್ರೀ ಪ್ರಶಸ್ತಿ ಬಗ್ಗೆ ಸಿಎಂ ಹೇಳಿದ್ದೇನು?
ಬಸವರಾಜ ಬೊಮ್ಮಾಯಿ, ಪುನೀತ್​ ರಾಜ್​ಕುಮಾರ್​
Follow us
| Updated By: ಮದನ್​ ಕುಮಾರ್​

Updated on: Dec 13, 2021 | 1:28 PM

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ (Karnataka Assembly Winter Session) ಆರಂಭ ಆಗಿದೆ. ವಿಧಾನಸಭೆಯಲ್ಲಿ ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಡಿ.13) ಮಾತನಾಡಿದರು. ಅಪ್ಪು ನಿಧನರಾದ ದಿನ ಪರಿಸ್ಥಿತಿ ಹೇಗಿತ್ತು ಎಂಬುದನ್ನು ಅವರು ವಿವರಿಸಿದರು. ‘ಅಂದು ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್​ ಮಾಡಿದ ಬಳಿಕ ಪುನೀತ್ ಅವರಿಗೆ ಈ ರೀತಿ ಆಗುತ್ತೆ ಎಂದು ಯಾರಿಗೂ ಅನಿಸಿರಲಿಲ್ಲ. ವಿಷಯ ತಿಳಿದು ನಾನು ಆಸ್ಪತ್ರೆಗೆ ಹೋಗುವುದಕ್ಕೂ ಮುನ್ನ ಅವರು ನಿಧನರಾಗಿದ್ದರು. ಕೂಡಲೇ ಅವರ ಕುಟುಂಬದವರ ಜತೆ ಮಾತನಾಡಿ ಸಹಕಾರ ಕೋರಿದೆವು. ಡಾ. ರಾಜ್​ಕುಮಾರ್​ ಅಂತ್ಯ ಸಂಸ್ಕಾರದ ವೇಳೆ ನಡೆದ ಅಹಿತಕರ ಘಟನೆಗಳು ಮತ್ತೆ ಸಂಭವಿಸಬಾರದು ಎಂಬುದು ನಮ್ಮ ಉದ್ದೇಶ ಆಗಿತ್ತು. ಅದಕ್ಕೆ ಪುನೀತ್​ ಕುಟುಂಬದವರ ಸಹಕಾರ ಸಿಕ್ಕಿತು’ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪುನೀತ್​ಗೆ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಈಗಾಗಲೇ ಘೋಷಿಸಲಾಗಿದೆ. ಆ ಪ್ರಶಸ್ತಿ ನೀಡುವ ದಿನಾಂಕ ಯಾವುದು ಎಂದು ತಿಳಿಯಲು ಜನರು ಕಾದಿದ್ದಾರೆ. ಆ ದಿನಾಂಕವನ್ನು ಶೀಘ್ರವೇ ಘೋಷಿಸಲಾಗುವುದು. ಪದ್ಮಶ್ರೀ ಪ್ರಶಸ್ತಿಗೆ ಅಪ್ಪು ಹೆಸರನ್ನು ಶಿಫಾರಸು ಮಾಡಲಾಗುವುದು ಬಸವರಾಜ ಬೊಮ್ಮಾಯಿ ಅವರು ಹೇಳಿದರು.

‘ಪುನೀತ್​ ರಾಜ್​ಕುಮಾರ್​ ಅವರ ಅಂತಿಮ ದರ್ಶನ ಪಡೆಯಲು ಹರಿದುಬಂದ ಜನಸಾಗರವನ್ನು ನೋಡಿ ನನಗೆ ಆಶ್ಚರ್ಯ ಆಯಿತು. ಅಲ್ಪ ಸಮಯದಲ್ಲಿ ಒಬ್ಬ ನಟ ಇಷ್ಟು ಜನರ ಹೃದಯದಲ್ಲಿ ಸ್ಥಾನ ಗಳಿಸಬಲ್ಲ ಎಂಬುದು ಅವರ ಸಾವಿನ ಬಳಿಕ ತಿಳಿಯಿತು. ಪುನೀತ್​ ಕೇವಲ ಚಿತ್ರರಂಗಕ್ಕೆ ಸಂಬಂಧಿಸಿದವರಲ್ಲ. ಸಿನಿಮಾ ಹೊರತಾಗಿಯೂ ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದರು. ಯುವಜನರಿಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಅನುಕೂಲ ಆಗುವ ರೀತಿಯಲ್ಲಿ ಆ್ಯಪ್​ ಬಿಡುಗಡೆ ಮಾಡಿದ್ದರು’ ಎಂದು ಅಪ್ಪು ಮಾಡಿದ ಕಾರ್ಯಗಳನ್ನು ಬೊಮ್ಮಾಯಿ ಶ್ಲಾಘಿಸಿದರು.

‘ಚಿಕ್ಕಂದಿನಿಂದಲೂ ನಾನು ಪುನೀತ್​ ಅವರನ್ನು ಬಲ್ಲೆ. ಅವರಿಗೆ ನಾನೊಂದು ಪ್ರಶ್ನೆ ಕೇಳಿದ್ದೆ. ನಿಮಗೆ ನಟನೆ ಇಷ್ಟು ಸರಳವಾಗಿ ಮೈಗೂಡಿಕೊಂಡಿದ್ದು ಹೇಗೆ ಎಂದು ಪ್ರಶ್ನಿಸಿದ್ದೆ. ತಮಗೆ ಅದು ಸಹಜವಾಗಿ ಬಂದಿದೆ ಅಂತ ಪುನೀತ್​ ಹೇಳಿದ್ದರು’ ಎಂದು ಬೊಮ್ಮಾಯಿ ನೆನಪಿಸಿಕೊಂಡರು.

ಪುನೀತ್​ ನಿಧನರಾದಾಗಿನಿಂದ ಅಂತಿಮ ಸಂಸ್ಕಾರ ನೆರವೇರುವವರೆಗೂ ಬಸವರಾಜ ಬೊಮ್ಮಾಯಿ ಅವರು ಡಾ. ರಾಜ್​ಕುಮಾರ್​ ಕುಟುಂಬದ ಜತೆಗೆ ನಿಂತುಕೊಂಡಿದ್ದರು. ಕಾನೂನು ಸುವ್ಯವಸ್ಥೆ ಕೆಡದ ರೀತಿಯಲ್ಲಿ, ಪುನೀತ್​ ರಾಜ್​ಕುಮಾರ್​ ಅವರನ್ನು ಗೌರವಯುತವಾಗಿ ಕಳಿಸಿಕೊಡಲು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದರು. ಅವರ ಈ ಕಾರ್ಯಕ್ಕೆ ವಿಧಾನ ಸಭೆಯಲ್ಲಿ ಎಲ್ಲರಿಂದ ಶ್ಲಾಘನೆ ವ್ಯಕ್ತವಾಯಿತು.

ಇದನ್ನೂ ಓದಿ:

ಪುನೀತ್​ ರಾಜ್​ಕುಮಾರ್​ ಭಾವಚಿತ್ರ ಹಿಡಿದುಕೊಂಡು ಶಬರಿಮಲೆ ಯಾತ್ರೆ ಮಾಡಿದ ಅಭಿಮಾನಿಗಳು

ಯಾವ ಸ್ಥಿತಿಯಲ್ಲಿದೆ ನೋಡಿ ಡಾ. ರಾಜ್​ ಬೆಳೆದ ಮನೆ; ಇದರ ಬಗ್ಗೆ ಪುನೀತ್​ ಕಂಡಿದ್ದರು ಕನಸು

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ