‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದು ಏಕೆ? ಕಾರಣ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನ ಒರಾಯನ್ ಮಾಲ್​ನ ಪಿವಿಆರ್​​ನಲ್ಲಿ ‘777 ಚಾರ್ಲಿ’ ಚಿತ್ರವನ್ನು ಬೊಮ್ಮಾಯಿ ನೋಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್​​. ಅಶೋಕ್, ಬಿ.ಸಿ. ನಾಗೇಶ್​, ಶಾಸಕ ರಘುಪತಿ ಭಟ್, ನಾಯಕ ರಕ್ಷಿತ್ ಶೆಟ್ಟಿ ಮೊದಲಾದವರು ಹಾಜರಿ ಹಾಕಿದ್ದರು.

‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದು ಏಕೆ? ಕಾರಣ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ
‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jun 13, 2022 | 10:13 PM

‘777 ಚಾರ್ಲಿ’ ಸಿನಿಮಾ (777 Charlie Movie) ಜೂನ್​ 10ರಂದು ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಈ ಚಿತ್ರದಿಂದ ನಟನಾಗಿ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ (Rakshit Shetty) ಯಶಸ್ಸು ಕಂಡಿದ್ದಾರೆ. ಈಗ ಚಿತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (Basavaraj Bommai) ವೀಕ್ಷಿಸಿದ್ದಾರೆ. ಇವರಿಗೆ ಅನೇಕ ಸಚಿವರು, ಶಾಸಕರು ಸಾತ್​ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಅವರು ಈ ಮೊದಲಿನಿಂದಲೂ ಚಿತ್ರರಂಗಕ್ಕೆ ಬೆಂಬಲ ನೀಡುತ್ತಾ ಬಂದವರು. ಸಾಕಷ್ಟು ಸಿನಿಮಾ ಕಾರ್ಯಕ್ರಮಗಳಿಗೆ ಮುಖ್ಯ ಅತಿಥಿಯಾಗಿ ತೆರಳಿದ್ದರು. ಈಗ ‘777 ಚಾರ್ಲಿ’ ಚಿತ್ರವನ್ನು ಅವರು ವೀಕ್ಷಿಸಿದ್ದಾರೆ. ಇದರಿಂದ ರಕ್ಷಿತ್ ಆ್ಯಂಡ್ ಟೀಮ್ ಖುಷಿಪಟ್ಟಿದೆ.

ಬೆಂಗಳೂರಿನ ಒರಾಯನ್ ಮಾಲ್​ನ ಪಿವಿಆರ್​​ನಲ್ಲಿ ‘777 ಚಾರ್ಲಿ’ ಚಿತ್ರವನ್ನು ಬೊಮ್ಮಾಯಿ ನೋಡಿದ್ದಾರೆ. ಈ ಸಂದರ್ಭದಲ್ಲಿ ಸಚಿವರಾದ ಆರ್​​. ಅಶೋಕ್, ಬಿ.ಸಿ. ನಾಗೇಶ್​, ಶಾಸಕ ರಘುಪತಿ ಭಟ್, ನಾಯಕ ರಕ್ಷಿತ್ ಶೆಟ್ಟಿ ಮೊದಲಾದವರು ಹಾಜರಿ ಹಾಕಿದ್ದರು. ‘777 ಚಾರ್ಲಿ’ ಸಿನಿಮಾ ಮನುಷ್ಯ ಹಾಗೂ ಶ್ವಾನದ ನಡುವಿನ ಕಥೆಯನ್ನು ಒಳಗೊಂಡಿದೆ. ಚಿಕ್ಕ ಮಕ್ಕಳಿಂದ ಹಿಡಿದು, ವಯಸ್ಸಾದವರಿಗೂ ಈ ಸಿನಿಮಾ ಕಣ್ಣೀರು ತರಿಸುತ್ತದೆ. ಸಿಎಂ ಕೂಡ ಇದಕ್ಕೆ ಹೊರತಾಗಿಲ್ಲ. ‘777 ಚಾರ್ಲಿ ಸಿನಿಮಾ ನೋಡಿದ ನಂತರ ಅವರು ಭಾವುಕರಾಗಿದ್ದಾರೆ.

ಸಿನಿಮಾ ಬಗ್ಗೆ ಮಾತನಾಡಿರುವ ಅವರು, ‘ನಾನು ಶ್ವಾನಪ್ರಿಯ. ಈ ಸಿನಿಮಾ ನೋಡಿದಾಗ ಸತ್ತ ನನ್ನ ನಾಯಿ ನೆನಪಾಯಿತು. ಈಗ ದಿಯಾ ಹೆಸರಿನ ನಾಯಿ ಸಾಕಿದ್ದೇನೆ. ನಾನು ಮನೆಗೆ ಬಂದಾಗ ಚಾರ್ಲಿ ರೀತಿಯೇ ದಿಯಾ ನನ್ನನ್ನು ತಬ್ಬಿಕೊಳ್ಳುತ್ತದೆ’ ಎಂದಿದ್ದಾರೆ ಅವರ.

ಇದನ್ನೂ ಓದಿ
Image
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ ಸಿಎಂ ಬಸವರಾಜ ಬೊಮ್ಮಾಯಿ
Image
ಬಾಕ್ಸ್ ಆಫೀಸ್​ನಲ್ಲಿ ‘777 ಚಾರ್ಲಿ’ ಓಟ; ವಾರಾಂತ್ಯಕ್ಕೆ ರಕ್ಷಿತ್ ಸಿನಿಮಾ ಗಳಿಸಿದ್ದೆಷ್ಟು? ಇಲ್ಲಿದೆ ವಿವರ
Image
777 Charlie Review: ಪ್ರಾಣಿಪ್ರಿಯರನ್ನು ನಗಿಸಿ, ಅಳಿಸುವ ಧರ್ಮ-ಚಾ​ರ್ಲಿಯ ಎಮೋಷನಲ್​ ಜರ್ನಿ; ಇಲ್ಲಿದೆ ವಿಮರ್ಶೆ
Image
ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ನೋಡಿ ಮೆಚ್ಚಿಕೊಂಡ ನಟಿ ರಮ್ಯಾ ಹೇಳಿದ್ದೇನು?

‘ಚಾರ್ಲಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬಂದಿದೆ. ಸಿನಿಮಾದಲ್ಲಿ ನಾಯಿ ಪಾತ್ರ ಮೆಚ್ಚುವಂಥದ್ದು. ನಟ ರಕ್ಷಿತ್ ಶೆಟ್ಟಿ ಕೂಡ ತುಂಬ ಚೆನ್ನಾಗಿ ನಟಿಸಿದ್ದಾರೆ. ಈ ಸಿನಿಮಾದ ಟ್ರೈಲರ್ ನೋಡಿದ್ದೆ. ರಕ್ಷಿತ್ ಆಹ್ವಾನವೂ ಇತ್ತು. ಅದಕ್ಕಾಗಿ ಈ ಸಿನಿಮಾ ನೋಡಿದೆ’ ಎಂದಿದ್ದಾರೆ ಬೊಮ್ಮಾಯಿ.

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ‘777 ಚಾರ್ಲಿ’ ಓಟ; ವಾರಾಂತ್ಯಕ್ಕೆ ರಕ್ಷಿತ್ ಸಿನಿಮಾ ಗಳಿಸಿದ್ದೆಷ್ಟು? ಇಲ್ಲಿದೆ ವಿವರ

‘777 ಚಾರ್ಲಿ, ಕೆಜಿಎಫ್ ಹೀಗೆ ಹಲವು ಕನ್ನಡ ಸಿನಿಮಾಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುತ್ತಿವೆ. ಇದು ಹೆಮ್ಮೆಯ ವಿಚಾರ. ಮೈಸೂರಿನಲ್ಲಿ ಫಿಲ್ಮ್​​ ಸಿಟಿ ಮಾಡಲು ಸರ್ಕಾರ ರೆಡಿ ಇದೆ. ಕೇವಲ ಸರ್ಕಾರವೊಂದೇ ಫಿಲ್ಮ್ ಸಿಟಿ ಮಾಡಲು ಆಗುವುದಿಲ್ಲ. ಸಿನಿ ತಾಂತ್ರಿಕರು ಮುಂದೆ ಬರಬೇಕು’ ಎಂಬುದು ಅವರ ಮಾತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:06 pm, Mon, 13 June 22

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ