AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಶಿವರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ

ಅಮೆರಿಕದ ಮಿಯಾಮಿ ಕ್ಯಾನ್ಸರ್ ಇನ್ಸ್​ಟಿಟ್ಯೂಟ್​ಗೆ ನಟ ಶಿವರಾಜ್​ಕುಮಾರ್​ ದಾಖಲಾಗಿದ್ದಾರೆ. ಇಂದು (ಡಿ.24) ಸಂಜೆ 6 ಗಂಟೆ ಸುಮಾರಿಗೆ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಆ ನಂತರ ವಿಶ್ರಾಂತಿ ಪಡೆಯಲು ಸೂಚನೆ ನೀಡಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವರಾಜ್​ಕುಮಾರ್​ ಜೊತೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ಅಮೆರಿಕದಲ್ಲಿ ಶಿವರಾಜ್​ಕುಮಾರ್​ಗೆ ಶಸ್ತ್ರ ಚಿಕಿತ್ಸೆ; ದೂರವಾಣಿ ಮೂಲಕ ಮಾತಾಡಿದ ಸಿಎಂ
Siddaramaiah Shivarajkumar
ಮದನ್​ ಕುಮಾರ್​
|

Updated on: Dec 24, 2024 | 6:18 PM

Share

ನಟ ಶಿವರಾಜ್​ಕುಮಾರ್​ ಅವರಿಗೆ ಅಮೆರಿಕದಲ್ಲಿ ಇಂದು (ಡಿಸೆಂಬರ್​ 24) ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಅನೇಕರು ಹಾರೈಸಿದ್ದಾರೆ. ಅವರ ಆರೋಗ್ಯಕ್ಕಾಗಿ ಹಲವು ಕಡೆಗಳಲ್ಲಿ ಹೋಮ, ಪೂಜೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಶಿವರಾಜ್​ಕುಮಾರ್​ ಜೊತೆ ಮಾತನಾಡಿ ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಅವರು ‘ಎಕ್ಸ್’ (ಟ್ವಿಟರ್​) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

‘ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್​ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ. ನನಗೆ ತಿಳಿದಂತೆ ಶಿವರಾಜ್​ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

‘ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜ್​ಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜ್​ಕುಮಾರ್ ಅವರ ಜೊತೆಗಿದ್ದು ಅವರನ್ನು‌ ಕಾಪಾಡಲಿದೆ’ ಎಂದು ಸಿದ್ದರಾಮಯ್ಯ ಅವರು ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಶಿವಣ್ಣನಿಗೆ ಸರ್ಜರಿ ಯಶಸ್ಸು ಕಾಣಲೆಂದು ಅಭಿಮಾನಿಗಳಿಂದ ಪೂಜೆ ಪುನಸ್ಕಾರ

ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಉದ್ದೇಶದಿಂದ ಶಿವರಾಜ್​ಕುಮಾರ್​ ಅವರು ಸಿನಿಮಾದ ಕೆಲಸಗಳಿಗೆ ಬ್ರೇಕ್ ನೀಡಿದ್ದಾರೆ. ಅಮೆರಿಕದಲ್ಲಿ ಅವರು ಒಂದು ತಿಂಗಳಿಗೂ ಹೆಚ್ಚು ಕಾಲ ಇರಲಿದ್ದಾರೆ. ಬಳಿಕ ಭಾರತಕ್ಕೆ ಮರಳಲಿದ್ದಾರೆ. ಶಿವಣ್ಣ ಅಮೆರಿಕಕ್ಕೆ ತೆರಳುವುದಕ್ಕೂ ಮುನ್ನ ಅವರನ್ನು ಆಪ್ತರು ಭೇಟಿಯಾಗಿದ್ದರು. ಅಭಿಮಾನಿಗಳು ಕೂಡ ಮನೆ ಬಳಿ ಬಂದು ಧೈರ್ಯ ತುಂಬಿದ್ದರು. ‘ಭೈರತಿ ರಣಗಲ್’ ಸಿನಿಮಾದ ಯಶಸ್ಸಿನ ಬಳಿಕ ಶಿವಣ್ಣ ಶಸ್ತ್ರಚಿಕಿತ್ಸೆ ಪಡೆಯಲು ಮುಂದಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.