ಕಾಫಿ ನಾಡು ಚಂದು ಬಗ್ಗೆ ಬಹುತೇಕರಿಗೆ ಗೊತ್ತಿರುತ್ತದೆ. ‘ನಾನು ಶಿವಣ್ಣ, ಪುನೀತಣ್ಣನವರ ಅಭಿಮಾನಿ’ ಎನ್ನುತ್ತಲೇ ವಿಡಿಯೋ ಆರಂಭಿಸೋ ಅವರು ಸೋಶಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಸೃಷ್ಟಿ ಮಾಡಿದ್ದರು. ಆಟೋ ಚಾಲನೆ ಮಾಡುತ್ತಾ ಜೀವನ ನಡೆಸುತ್ತಿದ್ದ ಅವರಿಗೆ ಭರ್ಜರಿ ಬೇಡಿಕೆ ಬಂದಿದೆ. ಅವರು ಸುದೀಪ್ ನಿರ್ಮಾಣದ ಧಾರಾವಾಹಿಯಲ್ಲಿ ನಟಿಸಿದ್ದರು ಎಂಬ ವಿಚಾರ ಗೊತ್ತೇ? ಆರು ವರ್ಷಗಳ ಹಿಂದೆ ಬಂದ ಸುದೀಪ್ ನಿರ್ಮಾಣದ ಧಾರಾವಾಹಿಯಲ್ಲಿ ಅವರು ಸಣ್ಣ ಪಾತ್ರ ಮಾಡಿದ್ದರು.
2018ರಲ್ಲಿ ನಟ ಕಿಚ್ಚ ಸುದೀಪ್ ಅವರ ನಿರ್ಮಾಣ ಸಂಸ್ಥೆ ‘ಕಿಚ್ಚ ಕ್ರಿಯೇಷನ್ಸ್’ನಿಂದ ‘ವಾರಸ್ದಾರ’ ಧಾರಾವಾಹಿ ನಿರ್ಮಾಣ ಆಗಿತ್ತು. ಜೀ ಕನ್ನಡದಲ್ಲಿ ಧಾರಾವಾಹಿ ಪ್ರಸಾರ ಆಗಿತ್ತು. ಈ ಧಾರಾವಾಹಿಯಲ್ಲಿ ಹಳ್ಳಿ ಮನೆಯ ಕಥೆ ಇತ್ತು. ಇದರ ಶೂಟಿಂಗ್ ಚಿಕ್ಕಮಗಳೂರು ಜಿಲ್ಲೆಯ ಬೈಗೂರು ಗ್ರಾಮದಲ್ಲಿ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಕಾಫಿ ನಾಡು ಚಂದು ಕೂಡ ಒಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಚಂದು ಅವರು ಚಿಕ್ಕಮಗಳೂರಿನವರು. ಅವರಿಗೆ ಮೊದಲಿನಿಂದಲೂ ನಟನೆಯಲ್ಲಿ ಆಸಕ್ತಿ. ಹೀಗಾಗಿ, ಅವರು ಕೂಡ ಒಂದು ದೃಶ್ಯದಲ್ಲಿ ಇದ್ದರು. ಜೂನಿಯರ್ ಆರ್ಟಿಸ್ಟ್ ಆಗಿ ನಟಿಸಿದ್ದರು. ಆ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ.
ಇದನ್ನೂ ಓದಿ: ‘ಜಮಾಲಿ ಗುಡ್ಡ’ ವೇದಿಕೆ ಮೇಲೆ ಕಾಫಿ ನಾಡು ಚಂದು ಸ್ಟೈಲ್ನಲ್ಲಿ ಅದಿತಿಗೆ ವಿಶ್ ಮಾಡಿದ ಅನುಶ್ರೀ
‘ವಾರಸ್ದಾರ’ ಧಾರಾವಾಹಿ ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ‘ವಾರಸ್ದಾರ’ ಧಾರಾವಾಹಿ ಶೂಟಿಂಗ್ಗೆ ದೀಪಕ್ ಮಯೂರ್ ಎಂಬುವವರ ಮನೆಯನ್ನು ಬಾಡಿಗೆಗೆ ಪಡೆಯಲಾಗಿತ್ತು. ಆದರೆ ಧಾರಾವಾಹಿ ಶೂಟಿಂಗ್ ವೇಳೆ ತಮ್ಮ ಕಾಫಿ ತೋಟಕ್ಕೆ ಹಾನಿ ಆಗಿದೆ, ತೋಟದಲ್ಲಿದ್ದ ಮರ, ಗಿಡಗಳನ್ನು ಕಡಿಯಲಾಗಿದೆ. ಅರವತ್ತರಿಂದ ಎಪ್ಪತ್ತು ಲಕ್ಷ ರೂಪಾಯಿ ನಷ್ಟವಾಗಿದೆ ಅಲ್ಲದೆ ಮನೆಗೆ ಬಾಡಿಗೆ ನೀಡುವುದಾಗಿ ಹೇಳಿದ್ದ ಸುದೀಪ್ ಬಾಡಿಗೆ ಹಣದಲ್ಲಿ ಸಹ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಮನೆ ಮಾಲೀಕರು, 2019ರ ಜನವರಿಯಲ್ಲಿ ನಟನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದರು. ನಂತರ ವಾದ ಪ್ರತಿ ವಾದ ಮಂಡಿಸಿದ ಬಳಿಕ ಸುದೀಪ್ ವಿರುದ್ಧ ಕೇಸ್ನ ಕೋರ್ಟ್ ವಜಾ ಮಾಡಿತ್ತು. ಆ ಬಳಿಕ ಸುದೀಪ್ ಅವರು ರಿಲೀಫ್ ಆಗಿತ್ತು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 7:50 am, Thu, 2 January 25