
ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಇರ್ತಾರಾ ಅಥವಾ ಇಲ್ಲವಾ ಎನ್ನುವುದು ಯಕ್ಷ ಪ್ರಶ್ನೆಯಾಗಿತ್ತು. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಕಲರ್ಸ್ ಕನ್ನಡ ವಾಹಿನಿ ಬಿಗ್ ಬಾಸ್ ಪ್ರೋಮೋ ರಿಲೀಸ್ ಮಾಡಿದೆ. ಹಾಗಂತ ಈ ಪ್ರೋಮೋದಲ್ಲಿ ಸುದೀಪ್ ಅವರ ಎಂಟ್ರಿ ಆಗಿಲ್ಲ. ಆದಾಗ್ಯೂ ಸುದೀಪ್ ಅವರು ಇರುತ್ತಾರೋ ಅಥವಾ ಇಲ್ಲವೋ ಎನ್ನುವ ವಿಚಾರಕ್ಕೆ ಸ್ಪಷ್ಟನೆ ಸಿಕ್ಕಂತೆ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ.
‘ಬಿಗ್ ಬಾಸ್ ಕನ್ನಡ ಸೀಸನ್ 10’ ಯಶಸ್ಸು ಕಂಡಿತ್ತು. ನಿರೂಪಕ ಸುದೀಪ್ ಅವರ ಸಿನಿಮಾ ಕೆಲಸಗಳಿಗೆ ಈ ಶೋ ಅಡಚಣೆ ಉಂಟುಮಾಡಿತ್ತು. ಎಲ್ಲೇ ಇದ್ದರೂ ಬಿಗ್ ಬಾಸ್ಗಾಗಿ ಅವರು ಬೆಂಗಳೂರಿಗೆ ಬರಬೇಕಿತ್ತು. ಈಗ ಅವರು 2-3 ಸಿನಿಮಾಗಳನ್ನು ಒಟ್ಟೊಟ್ಟಿಗೆ ಶೂಟ್ ಮಾಡುವ ಆಲೋಚನೆಯಲ್ಲಿ ಇದ್ದಾರೆ. ಹೀಗಾಗಿ, ಅವರು ಬಿಗ್ ಬಾಸ್ನಿಂದ ಹೊರಕ್ಕೆ ನಡೆಯಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ರೀತಿ ಆಗಿಲ್ಲ. ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ ನಡೆಸಿಕೊಡಲಿದ್ದಾರೆ.
‘ಬಿಗ್ ಬಾಸ್’ ಪ್ರೋಮೋದಲ್ಲಿ ಲೋಗೋ ರಿವೀಲ್ ಮಾಡಲಾಗಿದೆ ಅಷ್ಟೇ. ಕ್ಯಾಪ್ಶನ್ನಲ್ಲಿ ‘Kichcha Sudeep’ ಹ್ಯಾಶ್ಟ್ಯಾಗ್ ಹಾಕಲಾಗಿದೆ. ಇದರಿಂದ ಸುದೀಪ್ ಅವರು ಇರೋದು ಪಕ್ಕಾ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಕ್ಕಿದೆ.
ಇದನ್ನೂ ಓದಿ: ಕಿಚ್ಚ ಸುದೀಪ್ ಹುಟ್ಟುಹಬ್ಬದ ಸೆಲೆಬ್ರೇಷನ್ಗೆ ಭರ್ಜರಿಯಾಗಿ ನಡೆದಿದೆ ಫ್ಯಾನ್ಸ್ ತಯಾರಿ
ಸುದೀಪ್ ಅವರಿಗೆ ಇಂದು (ಸೆಪ್ಟೆಂಬರ್ 2) ಜನ್ಮದಿನ. ಈ ವಿಶೇಷ ಕಾರಣಕ್ಕೆ ‘ಬಿಗ್ ಬಾಸ್’ ಪ್ರೋಮೋ ರಿಲೀಸ್ ಮಾಡಿರಬಹುದು ಎಂದು ಫ್ಯಾನ್ಸ್ ಊಹಿಸಿದ್ದಾರೆ. ಈಗಾಗಲೇ ಹೈದರಾಬಾದ್ನಲ್ಲಿ ಸುದೀಪ್ ಇರುವ ಬಿಗ್ ಬಾಸ್ನ ಪ್ರೋಮೋಶೂಟ್ ಪೂರ್ಣಗೊಂಡಿದೆಯಂತೆ. ಅದನ್ನು ಯಾವಾಗ ರಿಲೀಸ್ ಮಾಡಲಾಗುತ್ತದೆ ಎಂದು ಫ್ಯಾನ್ಸ್ ಕಾದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 6:58 am, Mon, 2 September 24