ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ

Dharmavati Narasimha Raju: ನಟ ನರಸಿಂಹರಾಜು ಅವರ ಪುತ್ರಿ ಧರ್ಮವತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

ಖ್ಯಾತ ಹಾಸ್ಯ ನಟ ನರಸಿಂಹ ರಾಜು ಹಿರಿಯ ಪುತ್ರಿ ಧರ್ಮವತಿ ಇನ್ನಿಲ್ಲ; ಹೃದಯಾಘಾತದಿಂದ ನಿಧನ
ಧರ್ಮವತಿ, ನರಸಿಂಹರಾಜು
Follow us
TV9 Web
| Updated By: ಮದನ್​ ಕುಮಾರ್​

Updated on:Jun 04, 2022 | 1:46 PM

ಕನ್ನಡ ಚಿತ್ರರಂಗದಲ್ಲಿ ಹಾಸ್ಯ ಚಕ್ರವರ್ತಿಯಾಗಿ ಮಿಂಚಿದವರು ನಟ ನರಸಿಂಹ ರಾಜು (Narasimha Raju). ಇಂದು (ಜೂನ್​ 4) ಅವರ ಹಿರಿಯ ಪುತ್ರಿ ಧರ್ಮವತಿ (Dharmavati Narasimha Raju) ನಿಧನರಾಗಿದ್ದಾರೆ. ಮುಂಜಾನೆ 5.30ಕ್ಕೆ ಅವರು ಕೊನೆಯುಸಿರು ಎಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ. ಧರ್ಮವತಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಮೂವರು ಮಕ್ಕಳನ್ನು ಅವರು ಅಗಲಿದ್ದಾರೆ. ಹೃದಯಾಘಾತದಿಂದ (Heart Attack) ಧರ್ಮವತಿ ನಿಧನರಾಗಿದ್ದಾರೆ ಎಂದು ಅವರ ಪುತ್ರ, ನಿರ್ದೇಶಕ ಅರವಿಂದ್​ ಮಾಹಿತಿ ನೀಡಿದ್ದಾರೆ. ಇಂದು ಸಂಜೆ 3.30ರ ಸುಮಾರಿಗೆ ಹೆಬ್ಬಾಳದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದ ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಧರ್ಮವತಿ ಅವರ ಅಗಲಿಕೆಯಿಂದ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಕನ್ನಡ ಚಿತ್ರರಂಗಕ್ಕೆ ನರಸಿಂಹ ರಾಜು ನೀಡಿದ ಕೊಡುಗೆ ಅಪಾರ. ಅವರ ಕುಟುಂಬದ ಸದ್ಯಸರು ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಪುತ್ರಿ ಸುಧಾ ನರಸಿಂಹ ರಾಜು ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಅನೇಕ ಸಿನಿಮಾಗಳಲ್ಲಿ ನಟಿಸಿ ಅವರು ಜನಪ್ರಿಯತೆ ಪಡೆದಿದ್ದಾರೆ. ಧರ್ಮವತಿ ಅವರ ಮಕ್ಕಳಾದ ಅವಿನಾಶ್​ ಮತ್ತು ಅರವಿಂದ್​ ಅವರ ಕೂಡ ಕನ್ನಡ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ.

ಧರ್ಮವತಿ ಅವರ ಹಿರಿಯ ಪುತ್ರ ಅರವಿಂದ್​ ಅವರು ನಿರ್ದೇಶಕನಾಗಿ ಸಕ್ರಿಯರಾಗಿದ್ದಾರೆ. ಅವರ ನಿರ್ದೇಶನದಲ್ಲಿ ಮೂಡಿಬಂದಿದ್ದ ‘ಲಾಸ್ಟ್​ ಬಸ್​’ ಸಿನಿಮಾ ಗಮನ ಸೆಳೆದಿತ್ತು. ಕಿರಿಯ ಪುತ್ರ ಅವಿನಾಶ್​ ನರಸಿಂಹ ರಾಜು ಅವರು ನಟನಾಗಿ ಗುರುತಿಸಿಕೊಂಡಿದ್ದಾರೆ. ‘ಲಾಸ್ಟ್​ ಬಸ್​’, ‘ಚೇಸ್​’ ಮುಂತಾದ ಸಿನಿಮಾ ಮಾತ್ರವಲ್ಲದೇ ಕೆಲವು ಮ್ಯೂಸಿಕ್​ ವಿಡಿಯೋದಲ್ಲೂ ಅವರು ನಟಿಸಿದ್ದಾರೆ.

ಇದನ್ನೂ ಓದಿ
Image
ಯೋಗರಾಜ್ ಭಟ್ ಮಾವ, ಸ್ಯಾಂಡಲ್​ವುಡ್ ಕಲಾವಿದ ಸತ್ಯ ನಾರಾಯಣ್ ಹೃದಯಾಘಾತದಿಂದ ನಿಧನ
Image
Uday Huttinagadde: ಚಂದನವನದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾವಂತ ನಟ ಉದಯ್​ ಹುತ್ತಿನಗದ್ದೆ ನಿಧನ
Image
Edava Basheer Death: ಹಾಡುವಾಗಲೇ ವೇದಿಕೆಯಲ್ಲಿ ಕುಸಿದು ಬಿದ್ದು ಆರ್ಕೆಸ್ಟ್ರಾ ಗಾಯಕ ಎಡವ ಬಶೀರ್​ ನಿಧನ; ವಿಡಿಯೋ ವೈರಲ್​
Image
Anekal Balaraj Death: ‘ಕರಿಯ’ ಸಿನಿಮಾ ನಿರ್ಮಾಪಕ ಆನೇಕಲ್​ ಬಾಲರಾಜ್​ ಇನ್ನಿಲ್ಲ; ಬೆಂಗಳೂರಿನಲ್ಲಿ ಅಪಘಾತದಿಂದ ನಿಧನ

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:18 pm, Sat, 4 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ