ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆದ ಹಾಸ್ಯ ನಟ ಟೆನ್ನಿಸ್ ಕೃಷ್ಣ; ಯಾವ ಪಕ್ಷಕ್ಕೆ ಸೇರ್ಪಡೆ?

ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ.

ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆದ ಹಾಸ್ಯ ನಟ ಟೆನ್ನಿಸ್ ಕೃಷ್ಣ; ಯಾವ ಪಕ್ಷಕ್ಕೆ ಸೇರ್ಪಡೆ?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 03, 2022 | 8:28 PM

ಹಾಸ್ಯ ನಟ ಟೆನ್ನಿಸ್ ಕೃಷ್ಣ (Tennis Krishna) ಅವರು ತೆರೆಮೇಲೆ ಸಾಕಷ್ಟು ನಗಿಸಿದ್ದಾರೆ. ಹಲವು ಭಿನ್ನ ಪಾತ್ರಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ನಟನೆಯಿಂದ ದೂರ ಉಳಿದುಕೊಂಡಿರುವ ಅವರು ಈಗ ರಾಜಕೀಯಕ್ಕೆ ಎಂಟ್ರಿ ಕೊಡಲು ರೆಡಿ ಆಗಿದ್ದಾರೆ. ಆಗಸ್ಟ್ 4ರದು ಅವರು ಆಪ್​ ಪಕ್ಷಕ್ಕೆ (AAP Party) ಸೇರ್ಪಡೆ ಆಗುತ್ತಿದ್ದಾರೆ. ಮುಂಜಾನೆ 10.30ಕ್ಕೆ ಬೆಂಗಳೂರಿನಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಈ ವೇಳೆ ಅವರು ಅಧಿಕೃತವಾಗಿ ಆಪ್​ ಪಕ್ಷ ಸೇರಿಕೊಳ್ಳಲಿದ್ದಾರೆ. ಅವರು ರಾಜಕೀಯದಲ್ಲಿ ಯಶಸ್ಸು ಕಾಣುತ್ತಾರಾ ಅನ್ನೋದು ಸದ್ಯದ ಕುತೂಹಲ.

2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅದಕ್ಕೆ ಎಲ್ಲಾ ಪಕ್ಷಗಳು ಈಗಾಗಲೇ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇತ್ತೀಚೆಗೆ ಪಂಜಾಬ್ ಚುನಾವಣೆಯಲ್ಲಿ ಗೆದ್ದು, ಸರ್ಕಾರ ರಚಿಸಿರುವ ಆಪ್ ಪಕ್ಷ ಈಗ ಕರ್ನಾಟಕದಲ್ಲೂ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಈ ಕಾರಣಕ್ಕೆ ಪಕ್ಷವನ್ನು ಇಲ್ಲಿ ಬಲಪಡಿಸುವ ಕಾರ್ಯ ಆಗುತ್ತಿದೆ. ಈಗ ಹಾಸ್ಯ ನಟ ಟೆನ್ನಿಸ್ ಕೃಷ್ಣ ಅವರು ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವುದರಿಂದ ಕರ್ನಾಟಕದಲ್ಲಿ ಆಪ್​ ಪಕ್ಷದ ಬಲ ಹೆಚ್ಚಲಿದೆ.

ಟೆನ್ನಿಸ್ ಕೃಷ್ಣ ಅವರು 90ರ ದಶಕದಿಂದಲೇ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದರು. ದೊಡ್ಡಣ್ಣ ಸೇರಿ ಸಾಕಷ್ಟು ನಟರ ಜತೆ ಅವರು ತೆರೆ ಹಂಚಿಕೊಳ್ಳುವ ಮೂಲಕ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. 2012ರಿಂದ ಈಚೆಗೆ ಅವರಿಗೆ ಬೇಡಿಕೆ ಕಡಿಮೆ ಆಗಿದೆ. ಈ ಕಾರಣಕ್ಕೆ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದಾರೆ. ಈಗ ಅವರು ರಾಜಕೀಯಕ್ಕೆ ಎಂಟ್ರಿ ಕೊಡುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.

ಇದನ್ನೂ ಓದಿ
Image
‘ಪಾಸ್​ಪೋರ್ಟ್​ನಲ್ಲಿ ನನ್ನ ಹೆಸರು ಹೀಗಿಲ್ಲ’; ಅಸಲಿ ಹೆಸರು ರಿವೀಲ್ ಮಾಡಿದ ಶಿವರಾಜ್​ಕುಮಾರ್
Image
ಶಕ್ತಿಧಾಮದ ಮಕ್ಕಳ ಜತೆ ‘ಬೈರಾಗಿ’ ಹಾಡಿಗೆ ಡ್ಯಾನ್ಸ್ ಮಾಡಿದ ಶಿವರಾಜ್​ಕುಮಾರ್
Image
ವಿಷ್ಣು-ಅಂಬರೀಷ್ ಜೀವದ ಗೆಳೆಯರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ

ಇದನ್ನೂ ಓದಿ: ವಿಷ್ಣು-ಅಂಬರೀಷ್ ಜೀವದ ಗೆಳೆಯರು: ಖ್ಯಾತ ಹಾಸ್ಯನಟ ಟೆನ್ನಿಸ್‌ ಕೃಷ್ಣ

ಚಿತ್ರರಂಗಕ್ಕೂ ರಾಜಕೀಯಕ್ಕೂ ಈ ಮೊದಲಿನಿಂದಲೂ ಒಳ್ಳೆಯ ನಂಟಿದೆ. ಚಿತ್ರರಂಗದಲ್ಲಿ ಯಶಸ್ಸು ಕಂಡ ಬಳಿಕ ರಾಜಕೀಯದಲ್ಲಿ ಗೆಲುವು ಕಂಡ ಅನೇಕ ಸೆಲೆಬ್ರಿಟಿಗಳು ಇದ್ದಾರೆ. ಆ ಸಾಲಿಗೆ ಟೆನ್ನಿಸ್​ ಕೃಷ್ಣ ಕೂಡ ಸೇರ್ಪಡೆ ಆಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ