‘ಕಾಮಿಡಿ ಕಿಲಾಡಿಗಳು’ ಹಾಸ್ಯ ಕಲಾವಿದ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’

‘ಸರ್ವೇ ನಂಬರ್ 45’ ಎಂಬ ಡಿಫರೆಂಟ್​ ಶೀರ್ಷಿಕೆ ಇರುವ ಈ ಸಿನಿಮಾದಲ್ಲಿ ಗಿಲ್ಲಿ ನಟ, ರಿಯಾ ಭಾಸ್ಕರ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡುತ್ತಿದ್ದಾರೆ. ಅದ್ದೂರಿಯಾಗಿ ಈ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಶೀಘ್ರದಲ್ಲೇ ಈ ಚಿತ್ರಕ್ಕೆ ಶೂಟಿಂಗ್​ ಆರಂಭ ಆಗಲಿದೆ. ಶಿವಕುಮಾರ್ ಎಂ. ಶೆಟ್ಟಿಹಳ್ಳಿ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

‘ಕಾಮಿಡಿ ಕಿಲಾಡಿಗಳು’ ಹಾಸ್ಯ ಕಲಾವಿದ ಗಿಲ್ಲಿ ನಟನ ಹೊಸ ಸಿನಿಮಾ ‘ಸರ್ವೇ ನಂಬರ್ 45’
‘ಸರ್ವೇ ನಂಬರ್ 45’ ಸಿನಿಮಾ ಮುಹೂರ್ತ
Follow us
ಮದನ್​ ಕುಮಾರ್​
|

Updated on: Aug 29, 2024 | 10:48 PM

ಕನ್ನಡದ ಕಿರುತೆರೆಯಲ್ಲಿ ಗಿಲ್ಲಿ ನಟ ಫೇಮಸ್​ ಆಗಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲೂ ಅವರು ಸಖತ್​ ಖ್ಯಾತಿ ಹೊಂದಿದ್ದಾರೆ. ಅವರ ಹೊಸ ಸಿನಿಮಾಗೆ ‘ಸರ್ವೇ ನಂಬರ್ 45’ ಎಂದು ಶೀರ್ಷಿಕೆ ಇಡಲಾಗಿದೆ. ಹೊಸಬರೇ ಸೇರಿಕೊಂಡು ಈ ಸಿನಿಮಾವನ್ನು ಸಿದ್ಧಪಡಿಸುತ್ತಿದ್ದಾರೆ. ‘ಸರ್ವೇ ನಂಬರ್ 45’ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಬಂಡಿ ಮಹಾಕಾಳಿ ದೇವಸ್ಥಾನದಲ್ಲಿ ಅದ್ದೂರಿಯಾಗಿ ಜರುಗಿತು. ಬಳಿಕ ಮಾತನಾಡಿದ ಚಿತ್ರತಂಡದವರು ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡರು.

‘ಸರ್ವೇ ನಂಬರ್ 45’ ಸಿನಿಮಾದ ಮೊದಲ ದೃಶ್ಯಕ್ಕೆ ಹಿರಿಯ ನಿರ್ದೇಶಕ ಹೆಚ್. ವಾಸು ಅವರು ಕ್ಲ್ಯಾಪ್ ಮಾಡಿದ್ದಾರೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‌ ಬಣಕಾರ್ ಅವರು ಕ್ಯಾಮೆರಾ ಚಾಲನೆ ಮಾಡುವ ಮೂಲಕ ಶುಭ ಕೋರಿದರು. ಇದೇ ವೇಳೆ ವಿಧಾನ ಪರಿಷತ್ ಸದಸ್ಯ ಶರವಣ ಕೂಡ ಉಪಸ್ಥಿತರಿದ್ದರು. ವರನಂದಿ ಸಿನಿ ಸಂಸ್ಥೆಯ ಮೂಲಕ ‘ಸರ್ವೇ ನಂಬರ್ 45’ ಸಿನಿಮಾ ನಿರ್ಮಾಣ ಆಗುತ್ತಿದೆ.

ಹಿರಿಯ ನಿರ್ದೇಶಕರಾದ ಹೆಚ್. ವಾಸು ಹಾಗೂ ಕೆ. ರಾಘವ ಅವರ ಬಳಿ ಕೆಲಸ ಕಲಿತ ಪಿರಿಯಾಪಟ್ಟಣದ ಶಿವಕುಮಾರ್ ಎಂ. ಶೆಟ್ಟಿಹಳ್ಳಿ ಅವರು ಈ ಮೊದಲು ಮಹದೇಶ್ವರ ಭಕ್ತಿ ಗೀತೆಗಳಿಗೆ ಸಾಹಿತ್ಯ ರಚಿಸಿದ್ದಾರೆ. ಇದರ ಅನುಭವದಿಂದಲೇ ಈ ಸಿನಿಮಾಗೆ ಕತೆ, ಚಿತ್ರಕಥೆ ಹಾಗೂ ಮೂರು ಹಾಡುಗಳನ್ನು ಬರೆದು ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಮೈಸೂರು, ಮಂಡ್ಯ, ಹಾಸನ ಮುಂತಾದ ಕಡೆ 2 ಹಂತಗಳಲ್ಲಿ ಶೂಟಿಂಗ್​ ನಡೆಯಲಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಚಿತ್ರೀಕರಣ ಶುರುವಾಗಲಿದೆ.

ಇದನ್ನೂ ಓದಿ: ‘ವೈಕುಂಠ ಸಮಾರಾಧನೆ’: ಇದು ಹೊಸ ಕನ್ನಡ ಸಿನಿಮಾದ ಶೀರ್ಷಿಕೆ, ಪೋಸ್ಟರ್​!

ಜಾಗಕ್ಕೆ ಸರ್ವೇ ನಂಬರ್ ಎಂದು ಸರ್ಕಾರ ನೀಡುತ್ತದೆ. ಇದರಿಂದ ರೈತನೊಬ್ಬನಿಗೆ ಹಲವು ಕಷ್ಟಗಳು ಬರುತ್ತವೆ. ಅದನ್ನು ಆತ ಚಾಣಾಕ್ಷತನದಿಂದ ಹೇಗೆ ಪರಿಹಾರ ಮಾಡಿಕೊಳ್ಳುತ್ತಾನೆ ಎಂಬುದನ್ನು ಸಿನಿಮಾದಲ್ಲಿ ತೋರಿಲಾಗುವುದು. ನಿರ್ದೇಶಕರು ತಾವು ಕಂಡ ಒಂದಷ್ಟು ಘಟನೆಗಳಿಗೆ ಕಾಲ್ಪನಿಕ ಅಂಶಗಳನ್ನು ಸೇರಿಸಿ ಕೆಲವು ಸನ್ನಿವೇಶಗಳನ್ನು ಸೃಷ್ಟಿಸಿದ್ದಾರೆ. ಜೊತೆಗೆ ಒಂದು ಸಂದೇಶವನ್ನೂ ನೀಡಲಾಗುತ್ತಿದೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ.

ಇದನ್ನೂ ಓದಿ: ‘ಪ್ರಕರಣ ತನಿಖಾ ಹಂತದಲ್ಲಿದೆ’ ಎನ್ನುತ್ತ ಶೀರ್ಷಿಕೆ ಗೀತೆ ಬಿಡುಗಡೆ ಮಾಡಿದ ಹೊಸಬರ ತಂಡ

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಗಿಲ್ಲಿ ನಟ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲನಟಿಯಾಗಿ ಫೇಮಸ್​ ಆಗಿದ್ದ ರೀಯಾ ಭಾಸ್ಕರ್ ಅವರು ಗೌಡರ ಮಗಳ ಪಾತ್ರದಲ್ಲಿ ನಟಿಸಿದ್ದಾರೆ. ಜಗದೀಶ್ ಕೊಪ್ಪ, ಮುನಿ, ಸಂಜಯ್ ಪಾಟೀಲ್, ಟೋನಿತಾ, ಮೈತ್ರಿ, ರಾಜವ್ ಬಾಲೆ, ತೇಜು ಮೈಸೂರು, ಪ್ರಕಾಶ್ ಬಾನಾಳು, ಸುರೇಶ್ ಕೋಲಾರ, ರಂಗರಾಜು ಹುಲಿದುರ್ಗ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಚಕ್ರಿ ಕಿರಿಸಾವೆ ಸಂಭಾಷಣೆ ಬರೆದಿದ್ದಾರೆ. ವಿಶಾಲ್ ಆಲಾಪ್ ಅವರು ಸಂಗೀತ ನೀಡುತ್ತಿದ್ದಾರೆ. ದೀಪಕ್ ಕುಮಾರ್ ಜಿ.ಕೆ. ಅವರು ಛಾಯಾಗ್ರಹಣದ ಜವಾಬ್ದಾರಿ ಹೊತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು