AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆರೆಬೇಟೆ’ ಬಳಿಕ ‘ಕಾಮನ್ ಮ್ಯಾನ್’: ಓಂ ಸಾಯಿ ಪ್ರಕಾಶ್ ಜೊತೆ ಗೌರಿ ಶಂಕರ್ ಸಿನಿಮಾ

‘ಕಾಮನ್ ಮ್ಯಾನ್’ ಸಿನಿಮಾದಲ್ಲಿ ಗೌರಿ ಶಂಕರ್ ಹೀರೋ ಆಗಿದ್ದು, ನಾಯಕಿಯಾಗಿ ಸೋನಾ ಲದ್ವಾ ನಟಿಸಿದ್ದಾರೆ. ಓಂ ಸಾಯಿ ಪ್ರಕಾಶ್ ನಿರ್ದೇಶನ ಮಾಡುತ್ತಿದ್ದು, ವಿನಯ ಚಂದ್ರ ಸಂಗೀತ ನೀಡುತ್ತಿದ್ದಾರೆ. ಜೆ‌.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ ಈ ಸಿನಿಮಾಗಿದೆ. ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಮಾಡಿದ್ದಾರೆ.

‘ಕೆರೆಬೇಟೆ’ ಬಳಿಕ ‘ಕಾಮನ್ ಮ್ಯಾನ್’: ಓಂ ಸಾಯಿ ಪ್ರಕಾಶ್ ಜೊತೆ ಗೌರಿ ಶಂಕರ್ ಸಿನಿಮಾ
Common Man Movie Team
ಮದನ್​ ಕುಮಾರ್​
|

Updated on: Apr 28, 2026 | 7:52 PM

Share

ನಟ ಗೌರಿ ಶಂಕರ್ (Gowri Shankar) ಅವರು ‘ಕೆರೆಬೇಟೆ’ ಸಿನಿಮಾ ಮೂಲಕ ಗಮನ ಸೆಳೆದಿದ್ದರು. ಆ ಬಳಿಕ ಸಣ್ಣ ಬ್ರೇಕ್ ತೆಗೆದುಕೊಂಡ ಅವರು ಈಗ ಹೊಸ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಜೊತೆ ಗೌರಿ ಶಂಕರ್ ಸಿನಿಮಾ ಮಾಡುತ್ತಿದ್ದಾರೆ. ಇದು ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 106ನೇ ಸಿನಿಮಾ. ಈ ಚಿತ್ರಕ್ಕೆ ‘ಕಾಮನ್ ಮ್ಯಾನ್’ (Common Man) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು.

‘ಕಾಮನ್ ಮ್ಯಾನ್’ ಸಿನಿಮಾದ ಕಥೆ ಏನು ಎಂಬ ಬಗ್ಗೆ ಚಿತ್ರತಂಡದವರು ಮಾಹಿತಿ ನೀಡಿದರು. ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತದೆ? ಈ ಎಳೆಯನ್ನು ಇಟ್ಟುಕೊಂಡು ಎನ್. ನರಸಿಂಹಮೂರ್ತಿ ಅವರು ಕಥೆ ಬರೆದು ‘ಸುರಭಿ ಫಿಲ್ಮ್ಸ್’ ಮೂಲಕ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಬಿಡುಗಡೆ ಮಾಡಲಾಯಿತು.

ಸುದ್ದಿಗೋಷ್ಠಿಯಲ್ಲಿ ಓಂ ಸಾಯಿ ಪ್ರಕಾಶ್ ಅವರು ಮಾತನಾಡಿದರು. ‘ಜೀವನದಲ್ಲಿ ಪ್ರತಿಯೊಬ್ಬರಿಗೂ ಏನಾದರೂ ಆಸೆ ಇರುತ್ತೆ. ಈ ಕಥೆಯಲ್ಲಿ ನಾಯಕ ಒಬ್ಬ ಲಾಯರ್. ಅನಿರೀಕ್ಷಿತವಾಗಿ ಅವನು ಮುಖ್ಯಮಂತ್ರಿ ಆಗುತ್ತಾನೆ. ನಂತರ ಅವನು ಏನೇನು ಮಾಡಬಹುದು ಎಂಬುದನ್ನು ಕುತೂಹಲಕರವಾಗಿ ತೋರಿಸುವ ಪ್ರಯತ್ನ ಮಾಡಿದ್ದೇನೆ. ಕಥೆ ಕೇಳಿದ ಕೂಡಲೇ ಇದು ಶೇಕಡ 100ರಷ್ಟು ಓಪನಿಂಗ್ ತೆಗೆದುಕೊಳ್ಳುತ್ತದೆ ಎನಿಸಿತು. ಇದು ಕಂಟೆಂಟ್ ಸಿನಿಮಾ, ಜಾತ್ರೆ ಸಿನಿಮಾ ಅಲ್ಲ’ ಎಂದು ಅವರು ಹೇಳಿದರು.

ರಂಗಭೂಮಿ ನಂಟು ಹೊಂದಿರುವ ನಿರ್ಮಾಪಕ ಎನ್. ನರಸಿಂಹಮೂರ್ತಿ ಮಾತನಾಡಿ, ‘ಈ ಮೊದಲು ಎರಡು ಚಿತ್ರಗಳನ್ನು ನಿರ್ಮಾಣ ಮಾಡಿದ್ದೆ. ಅದರಿಂದ ಸಾಕಷ್ಟು ಪಾಠವನ್ನೂ ಕಲಿತೆ. ಇದು ನನ್ನ ಮೂರನೇ ಸಿನಿಮಾ. ಇಂಥ ನಿರ್ದೇಶಕರ ಜತೆ ಎಷ್ಟು ಸಿನಿಮಾ ಬೇಕಾದರೂ ಮಾಡಬಹುದು‌. ಮಾತಿನ ಭಾಗ 40 ದಿನ ಚಿತ್ರೀಕರಣ ಎಂದಿದ್ದರು. ಆದರೆ 32 ದಿನಕ್ಕೇ ಮುಗಿಸಿದರು. ಚಿತ್ರದಲ್ಲಿ ನಾನು ಒಬ್ಬ ಮುಖ್ಯಮಂತ್ರಿಯ ಪಾತ್ರ ಮಾಡಿದ್ದೇನೆ’ ಎಂದರು.

ಇದನ್ನೂ ಓದಿ: ‘ಕೆರೆಬೇಟೆ 100 ಪರ್ಸೆಂಟ್​ ಚೆನ್ನಾಗಿದೆ’; ಗೆಳೆಯನ ಸಿನಿಮಾ ನೋಡಿ ಮೆಚ್ಚಿದ ಧ್ರುವ ಸರ್ಜಾ

ಓಂ ಸಾಯಿ ಪ್ರಕಾಶ್ ನಿರ್ದೇಶನದ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಗೌರಿ ಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿದರು. ‘ರಾಜಹಂಸ, ಕೆರೆಬೇಟೆ ನಂತರ ನನ್ನ ಅಭಿನಯದ 3ನೇ ಚಿತ್ರವಿದು. ನಿರ್ದೇಶಕರು ಹಾಕಿಕೊಂಡ ಪ್ಲಾನ್ ಪ್ರಕಾರವೇ ಸಿನಿಮಾ ಮಾಡಿ ಮುಗಿಸಿದ್ದಾರೆ. ಕೆರೆಬೇಟೆ ಬಳಿಕ ಒಳ್ಳೆಯ ಕಥೆಗಾಗಿ ಕಾಯುತ್ತಿದ್ದೆ. ಬಯಸಿದಂತಹ ಪಾತ್ರವೇ ಹುಡುಕಿಕೊಂಡು ಬಂತು’ ಎಂದು ಗೌರಿ ಶಂಕರ್ ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ಇಂಡಿಗೋ ವಿಮಾನದೊಳಗೆ ಎಸಿ, ಕರೆಂಟ್ ಇಲ್ಲದೆ ಒದ್ದಾಡಿದ ಪ್ರಯಾಣಿಕರು
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ನಾರ್ವೆಯಲ್ಲಿ ಭಾರತೀಯ ವಲಸಿಗರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!