AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಧ್ರುವ ಸರ್ಜಾ ವಿರುದ್ಧ ದೂರು, ಎಫ್​ಐಆರ್ ದಾಖಲಿಸುವಂತೆ ಒತ್ತಾಯ

Dhruva Sarja movie: ಕನ್ನಡದ ಜನಪ್ರಿಯ ನಟ ಧ್ರುವ ಸರ್ಜಾ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ಮಾತ್ರವೇ ಅಲ್ಲದೆ ಅವರ ಮ್ಯಾನೇಜರ್, ಚಾಲಕ ಮತ್ತು ಅಭಿಮಾನಿಗಳ ವಿರುದ್ಧವೂ ದೂರು ದಾಖಲಿಸಲಾಗಿದೆ. ದೂರುರಾದ ವ್ಯಕ್ತಿ, ಧ್ರುವ ಸರ್ಜಾ ಹಾಗೂ ಇತರರ ವಿರುದ್ಧ ಎಫ್​​ಐಆರ್ ದಾಖಲು ಮಾಡುವಂತೆ ಒತ್ತಾಯ ಮಾಡಿದ್ದಾರೆ. ಏನಿದು ಪ್ರಕರಣ?

ನಟ ಧ್ರುವ ಸರ್ಜಾ ವಿರುದ್ಧ ದೂರು, ಎಫ್​ಐಆರ್ ದಾಖಲಿಸುವಂತೆ ಒತ್ತಾಯ
Dhruva Sarja
ಮಂಜುನಾಥ ಸಿ.
|

Updated on: Oct 30, 2025 | 2:22 PM

Share

ನಟ ಧ್ರುವ ಸರ್ಜಾ (Dhruva Sarja) ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಮಾತ್ರವೇ ಅಲ್ಲದೆ ಧ್ರುವ ಸರ್ಜಾ ಮ್ಯಾನೇಜರ್, ಅವರ ಕಾರು ಚಾಲಕ ಹಾಗೂ ಅಭಿಮಾನಿಗಳ ವಿರುದ್ಧವೂ ದೂರು ದಾಖಲಾಗಿದೆ. ಧ್ರುವ ಸರ್ಜಾ ವಿರುದ್ಧ ಅವರ ನೆರೆಮನೆಯವರೇ ದೂರು ದಾಖಲು ಮಾಡಿದ್ದಾರೆ. ಅಲ್ಲದೆ ಧ್ರುವ ಸರ್ಜಾ ಹಾಗೂ ಅವರ ಮ್ಯಾನೇಜರ್, ಚಾಲಕನ ಮೇಲೆ ಎಫ್​​ಐಆರ್ ದಾಖಲು ಮಾಡುವಂತೆ ದೂರುದಾರರು ಒತ್ತಾಯಿಸಿದ್ದಾರೆ.

ಮನೋಜ್ ಎಂಬುವರು ಧ್ರುವ ಸರ್ಜಾ ವಿರುದ್ಧ ದೂರು ನೀಡಿದ್ದಾರೆ. ಮನೋಜ್ ಅವರು ಧ್ರುವ ಸರ್ಜಾ ಅವರ ನೆರೆ ಮನೆಯವರೇ ಆಗಿದ್ದು, ಧ್ರುವ ಸರ್ಜಾ ಅವರ ಅಭಿಮಾನಿಗಳ ವರ್ತನೆಯಿಂದ ಬೇಸತ್ತು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಧ್ರುವ ಸರ್ಜಾ ಅವರ ಮನೆಗೆ ಬರುವ ಅಭಿಮಾನಿಗಳು ರಸ್ತೆಯಲ್ಲಿ, ಮನೆಯ ಮುಂದೆ ಅಡ್ಡಾದಿಡ್ಡಿಯಾಗಿ ಗಾಡಿಗಳನ್ನು ಪಾರ್ಕಿಂಗ್ ಮಾಡುತ್ತಾರೆ. ಕೂಗಾಡುತ್ತಾರೆ, ಕಿರುಚಾಡುತ್ತಾರೆ ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗಿದೆ ಎಂದು ಮನೋಜ್ ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿ:ಮಹಾಲಯ ಅಮಾವಾಸ್ಯೆ: ನಟ ಧ್ರುವ ಸರ್ಜಾ ಅವರಿಂದ ವಿಶೇಷ ಪೂಜೆ

ಅಭಿಮಾನಿಗಳು ಮನೆಯ ಮುಂದೆ ಸಿಗರೇಟು ಸೇದುತ್ತಾರೆ, ಗುಟ್ಕಾ ಉಗಿಯುತ್ತಾರೆ, ಮನೆಯ ಗೋಡೆಗಳ ಮೇಲೆಯೂ ಉಗಿದಿದ್ದಾರೆ, ಗಲಾಟೆ ಮಾಡುತ್ತಾರೆ. ಈ ಬಗ್ಗೆ ನಟನ ಮ್ಯಾನೇಜರ್, ಚಾಲಕನ ಬಳಿ ಹೇಳಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಧ್ರುವ ಸರ್ಜಾ ಅವರ ಅಭಿಮಾನಿಗಳ ಉಪಟಳದಿಂದ ಸಮಸ್ಯೆ ಆಗಿದೆ ಎಂದು ಮನೋಜ್ ಹೇಳಿದ್ದಾರೆ.

ಮನೋಜ್ ನೀಡಿರುವ ದೂರು ಆಧರಿಸಿ ಪೊಲೀಸರು ಎನ್​​ಸಿಆರ್ ದಾಖಲಿಸಿದ್ದಾರೆ. ಆದರೆ ಧ್ರುವ ಸರ್ಜಾ, ಅವರ ಮ್ಯಾನೇಜರ್ ಮತ್ತು ಚಾಲಕರ ಮೇಲೆ ಎಫ್​​ಐಆರ್ ದಾಖಲು ಮಾಡಬೇಕು ಎಂದು ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಆದರೆ ಎಫ್​​ಐಆರ್ ದಾಖಲು ಮಾಡಲಾಗಿಲ್ಲ. ಬದಲಿಗೆ ಎನ್​​ಸಿಆರ್ ಅನ್ನಷ್ಟೆ ದಾಖಲು ಮಾಡಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ