AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಚಾರ ಮಾಡಲಿರುವ ‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾ ಟೀಮ್

‘ಕಂಗ್ರಾಜುಲೇಷನ್ಸ್ ಬ್ರದರ್’ ಎಂಬ ಶೀರ್ಷಿಕೆ ಮೂಲಕ ಈ ಚಿತ್ರತಂಡ ಕುತೂಹಲ ಮೂಡಿಸಿದೆ. ಪ್ರಚಾರಕ್ಕಾಗಿ ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಲು ಈಗ ಚಿತ್ರತಂಡ ತಯಾರಿ ಮಾಡಿಕೊಂಡಿದೆ. ವಿಶೇಷ ವಾಹನದಲ್ಲಿ ಬೀದರ್​ನಿಂದ ಚಾಮರಾಜನಗರ ತನಕ ಭೇಟಿ ನೀಡಿ ಯುವ ಜನರ ಜೊತೆ ತಂಡ ಮಾತನಾಡಲಿದೆ.

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಪ್ರಚಾರ ಮಾಡಲಿರುವ ‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾ ಟೀಮ್
Congratulations Brother Movie Cast
ಮದನ್​ ಕುಮಾರ್​
|

Updated on: Oct 26, 2025 | 6:06 PM

Share

ಸಿನಿಮಾ ತಂಡಗಳಿಗೆ ಪ್ರಚಾರ ಬಹಳ ಮುಖ್ಯ. ಅದಕ್ಕಾಗಿ ಹೊಸ ಹೊಸ ಮಾರ್ಗಗಳನ್ನು ಹುಡುಕಲಾಗುತ್ತಿದೆ. ಜನರನ್ನು ತಲುಪಲು ಅನೇಕ ರೀತಿಯಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ಅದಕ್ಕೆ ಲೇಟೆಸ್ಟ್ ಉದಾಹರಣೆ ‘ಕಂಗ್ರಾಜುಲೇಷನ್ಸ್ ಬ್ರದರ್’ (Congratulations Brother) ಸಿನಿಮಾ ತಂಡ. ಹೌದು, ಈ ಸಿನಿಮಾ ಈಗ ತೆರೆಕಾಣಲು ಸಿದ್ಧವಾಗಿದೆ. ನವೆಂಬರ್ 21ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ವಿಶೇಷ ಏನೆಂದರೆ, ಕರ್ನಾಟಕದ ಪ್ರತಿಯೊಂದು ಜಿಲ್ಲೆಯಲ್ಲೂ ಪ್ರಚಾರ ಮಾಡಲು ‘ಕಂಗ್ರಾಜುಲೇಷನ್ಸ್ ಬ್ರದರ್’ ಚಿತ್ರತಂಡ ಸಜ್ಜಾಗಿದೆ.

‘ಕಂಗ್ರಾಜುಲೇಷನ್ಸ್ ಬ್ರದರ್’ ಎಂಬುದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಜನಪ್ರಿಯವಾದ ಡೈಲಾಗ್. ಅದನ್ನೇ ಶೀರ್ಷಿಕೆಯಾಗಿಸಿಕೊಂಡು ಈ ಸಿನಿಮಾ ಮಾಡಲಾಗಿದೆ. ‘ಕಲ್ಲೂರ್ ಸಿನಿಮಾಸ್’, ‘ಪೆನ್ ಎನ್ ಪೇಪರ್ ಸ್ಟುಡಿಯೋಸ್’ ಮತ್ತು ‘ಸ್ಕ್ರೀನ್ ಫಸ್ಟ್ ಪ್ರೊಡಕ್ಷನ್’ ಮೂಲಕ ಪ್ರಶಾಂತ್ ಕಲ್ಲೂರ್ ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಪ್ರತಾಪ್ ಗಂಧರ್ವ ಅವರು ನಿರ್ದೇಶನ ಮಾಡಿದ್ದಾರೆ.

ಈ ಸಿನಿಮಾಗೆ ಖ್ಯಾತ ನಿರ್ದೇಶಕ ಹರಿ ಸಂತೋಷ್ ಅವರು ಕಥೆ ಬರೆದು ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಹೊಸ ನಟ ರಕ್ಷಿತ್ ನಾಗ್ ಹೀರೋ ಆಗಿ ನಟಿಸಿದ್ದಾರೆ. ಸಂಜನಾ ದಾಸ್ ಅವರು ನಾಯಕಿಯಾಗಿದ್ದಾರೆ. ಹರೀಶ್ ರೆಡ್ಡಿ ಅವರು ಸಹ-ನಿರ್ಮಾಣ ಮಾಡಿದ್ದಾರೆ. ಬೀದರ್​​ನಿಂದ ಚಾಮರಾಜನಗರ ತನಕ ಕರ್ನಾಟಕದ ಪ್ರತಿಯೊಂದು ಜಿಲ್ಲೆಗಳಿಗೂ ಚಿತ್ರತಂಡ ಭೇಟಿ ನೀಡಲಿದೆ.

ಇದಕ್ಕಾಗಿ ನೂತನ ಪ್ರಚಾರದ ವಾಹನ ಸಿದ್ಧವಾಗಿದೆ. ಚಿತ್ರದ ಪ್ರಚಾರ ಕಾರ್ಯಕ್ಕೆ ಕನ್ನಡಪರ ಹೋರಾಟಗಾರ ಸಾ.ರಾ‌. ಗೋವಿಂದು ಅವರು ಇತ್ತೀಚೆಗೆ ಚಾಲನೆ ನೀಡಿದರು. ಬೆಂಗಳೂರಿನ ವೀರೇಶ್ ಚಿತ್ರಮಂದಿರದ ಬಳಿ ಚಿತ್ರತಂಡದ ಸದಸ್ಯರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಿತು. ಈ ವೇಳೆ ಸಾರಾ ಗೋವಿಂದು ಮಾತನಾಡಿದರು. ‘ಸಂತು ಅವರು ಒಪ್ಪಿಕೊಂಡ ಕೆಲಸ ಅಚ್ಚುಕಟ್ಟಾಗಿ ಮಾಡುತ್ತಾರೆ. ಈ ಕಾರ್ಯಕ್ರಮದಲ್ಲಿ ಚಿತ್ರತಂಡ ಎಲ್ಲ ಕಲಾವಿದರು ಭಾಗಿಯಾಗಿರುವುದು ನೋಡಿ ಖುಷಿಯಾಗಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಟ್ರೇಲರ್ ಮೂಲಕ ಗಮನ ಸೆಳೆದ ಪ್ರಣವ್ ಮೋಹನ್​ಲಾಲ್​ ನಟನೆಯ ಹಾರರ್ ಚಿತ್ರ ‘ಡೀಯಸ್ ಈರೇ’

‘ನವೆಂಬರ್ 21ಕ್ಕೆ ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಅದರ ಪೂರ್ವಭಾವಿಯಾಗಿ ಕಲಾವಿದರು ಎಲ್ಲ ಜಿಲ್ಲೆಗಳಿಗೂ ತೆರಳಿ ಅಲ್ಲಿನ ಜನರನ್ನು, ವಿಶೇಷವಾಗಿ ಯುವ ಜನತೆಯನ್ನು ಭೇಟಿ ಮಾಡಲಿದ್ದಾರೆ‌. ಈ ವಿನೂತನ ಪ್ರಚಾರ ಕಾರ್ಯಕ್ಕೆ ಇಂದು ಹಿರಿಯರಿಂದ ಚಾಲನೆ ಸಿಕ್ಕಿದೆ. ಮುನೀಂದ್ರ ಅವರು ನಮ್ಮ ಸಿನಿಮಾ ವಿತರಣೆ ಮಾಡುತ್ತಿದ್ದಾರೆ’ ಎಂದು ಹರಿ ಸಂತೋಷ್ ಮಾಹಿತಿ ನೀಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಚೆನ್ನೈ ಮೆಟ್ರೋದಲ್ಲಿ ಪ್ರಧಾನಿ ಮೋದಿ–ಸಿಎಂ ವಿಜಯ್ ಪ್ರಯಾಣ
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
ಮಾಗಡಿ ಮಾರುಕಟ್ಟೆಯಲ್ಲಿ ರಾಶಿ ರಾಶಿ ಕಸ ಕಂಡು ಗರಂ ಆದ್ರು ಸಚಿವ ಬಾಲಕೃಷ್ಣ!
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
Live: ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಮೈಸೂರು ದಸರಾಗೆ ಕ್ಷಣಗಣನೆ: ಗವಿಸಿದ್ದೇಶ್ವರ ಶ್ರೀಗಳಿಂದ ನಾಡಹಬ್ಬಕ್ಕೆ ಚಾಲನೆ
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಎವರೆಸ್ಟ್ ಶಿಖರದ ಮೇಲೆ ಕನ್ನಡ ಧ್ವಜ ಹಾರಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗರು!
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಉಕ್ರೇನ್‌ಗೆ ಕೈಕೊಟ್ಟ ಅಮೆರಿಕ: ಝೆಲೆನ್‌ಸ್ಕಿ ವಿರುದ್ಧ ಟ್ರಂಪ್ ಆಕ್ರೋಶ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಗಜಪಡೆಗೆ ಮಜ್ಜನದೊಂದಿಗೆ ಸಂಭ್ರಮದ ಸಿದ್ಧತೆಗಳಿಗೆ ಚಾಲನೆ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರು ದಸರಾ: ಅರಮನೆ ಆವರಣದಲ್ಲಿ ದಸರಾ ಗಜಪಡೆಗೆ ಮಜ್ಜನ
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!
ಮೈಸೂರಿನಲ್ಲಿ ಈ ಬಾರಿ ದಸರಾ ಸಡಗರ ಹೇಗಿದೆ ನೋಡಿ!