ಒಬ್ಬ ಹುಡುಗನಿಗೆ ಇಬ್ಬರು ಹುಡುಗಿಯರು ಸಿಕ್ಕಾಗ; ‘ಕಂಗ್ರಾಜುಲೇಷನ್ಸ್ ಬ್ರದರ್’

|

Updated on: Mar 21, 2025 | 3:46 PM

ಸೀರಿಯಲ್​ಗಳಲ್ಲಿ ನಟಿಸಿ ಅನುಭವ ಹೊಂದಿರುವ ರಕ್ಷಿತ್ ನಾಗ್ ಅವರು ‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾದಲ್ಲಿ ಹೀರೋ ಆಗಿದ್ದಾರೆ. ಈ ಚಿತ್ರದಲ್ಲಿ ಸಂಜನಾ ದಾಸ್, ಅನುಶಾ ಅವರು ನಾಯಕಿಯಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾ ತಂಡದ ಬಗ್ಗೆ ಇಲ್ಲಿದೆ ಮಾಹಿತಿ..

ಒಬ್ಬ ಹುಡುಗನಿಗೆ ಇಬ್ಬರು ಹುಡುಗಿಯರು ಸಿಕ್ಕಾಗ; ‘ಕಂಗ್ರಾಜುಲೇಷನ್ಸ್ ಬ್ರದರ್’
Anusha, Rakshith Nag, Sanjana Das
Follow us on

ಇದು ಸೋಶಿಯಲ್ ಮೀಡಿಯಾ ಜಮಾನ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವಿಷಯಗಳು ಹೆಚ್ಚು ಜನರನ್ನು ತಲುಪುತ್ತವೆ. ಸಿನಿಮಾ ಟೈಟಲ್​ ಕೂಡ ಆಗುತ್ತವೆ! ಹೌದು, ವೈರಲ್ ವಿಡಿಯೋ ಮೂಲಕ ‘ಕಂಗ್ರಾಜುಲೇಷನ್ಸ್ ಬ್ರದರ್’ (Congratulations Brother) ಎಂಬ ಡೈಲಾಗ್ ಹೆಚ್ಚು ಫೇಮಸ್ ಆಗಿತ್ತು. ಈಗ ಅದೇ ಮಾತು ಹೊಸ ಸಿನಿಮಾಗೆ ಟೈಟಲ್ ಆಗಿದೆ. ಈ ಸಿನಿಮಾದಲ್ಲಿ ರಕ್ಷಿತ್ ನಾಗ್ (Rakshith Nag), ಸಂಜನಾ ದಾಸ್, ಅನುಶಾ, ಶಶಿಕುಮಾರ್ ಮುಂತಾದವರು ನಟಿಸಿದ್ದಾರೆ. ಇತ್ತೀಚೆಗೆ ‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾದ ಶೂಟಿಂಗ್ ಮುಕ್ತಾಯ ಆಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಸುದ್ದಿಗೋಷ್ಠಿ ನಡೆಸಿತು.

ಕೆಲವೇ ತಿಂಗಳ ಹಿಂದೆ ‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾ ಘೋಷಣೆ ಆಗಿತ್ತು. ಅಂದುಕೊಂಡ ಸಮಯದಲ್ಲೇ ಶೂಟಿಂಗ್ ಮುಕ್ತಾಯ ಮಾಡಲಾಗಿದೆ. ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಸದ್​ಯದಲ್ಲೇ ಈ ಸಿನಿಮಾದ ಮೊದಲ ಹಾಡನ್ನು ದುಬೈನಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಲಾಗಿದೆ. ಈ ಚಿತ್ರದಲ್ಲಿ ಬಹುತೇಕ ಹೊಸ ಕಲಾವಿದರು ನಟಿಸಿದ್ದಾರೆ. ಅವರಿಗೆ ಹಿರಿಯ ನಟ ಶಶಿಕುಮಾರ್ ಸಾಥ್ ನೀಡಿದ್ದಾರೆ.

‘ಕಂಗ್ರಾಜುಲೇಷನ್ಸ್ ಬ್ರದರ್’ ಎಂಬ ಶೀರ್ಷಿಕೆಯೇ ಕೌತುಕ ಮೂಡಿಸಿದೆ. ಈ ಸಿನಿಮಾವನ್ನು ‘ಕಲ್ಲೂರ್ ಸಿನಿಮಾಸ್’ ಹಾಗೂ ‘ಪೆನ್ ಎನ್ ಪೇಪರ್ ಸ್ಟುಡಿಯೋಸ್’ ಮೂಲಕ ನಿರ್ಮಾಣ ಮಾಡಲಾಗುತ್ತಿದೆ. ಪ್ರಶಾಂತ್ ಕಲ್ಲೂರ್ ಅವರು ಬಂಡವಾಳ ಹೂಡಿದ್ದಾರೆ. ಪ್ರತಾಪ್ ಗಂಧರ್ವ ಅವರು ನಿರ್ದೇಶನ ಮಾಡಿದ್ದಾರೆ. ಖ್ಯಾತ ನಿರ್ದೇಶಕ ಹರಿ ಸಂತೋಷ್ ಅವರು ಕಥೆ ಬರೆದು, ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ
‘ಸ್ಯಾಂಡಲ್​​ವುಡ್ ಸಣ್ಣ ಇಂಡಸ್ಟ್ರಿ ಆಗಿತ್ತು, ಈಗ ಹೇಗೆ ಬೆಳೆದಿದೆ ನೋಡಿ’
ಸಿನಿಮಾ ರಂಗದವರಿಗೆ ಡಿಕೆ ಶಿವಕುಮಾರ್ ಎಚ್ಚರಿಕೆ ಉಮಾಪತಿ ಹೇಳಿದ್ದೇನು?
4 ಚಿತ್ರಮಂದಿರ, 23 ಸಿನಿಮಾ ಸ್ಕ್ರೀನ್​, ಡಿಸಿಎಂ ಡಿಕೆಶಿಯ ಸಿನಿಮಾ ನಂಟು
‘ನೆಟ್ಟು, ಬೋಲ್ಟ್ ಟೈಟ್ ಮಾಡುವೆ’: ನಟರಿಗೆ ನೇರ ಎಚ್ಚರಿಕೆ ಕೊಟ್ಟ ಡಿಕೆಶಿ

ಹರೀಶ್ ರೆಡ್ಡಿ ಅವರು ‘ಕಂಗ್ರಾಜುಲೇಷನ್ಸ್ ಬ್ರದರ್’ ಚಿತ್ರಕ್ಕೆ ಸಹ ನಿರ್ಮಾಪಕರಾಗಿದ್ದಾರೆ. ಶ್ರೀಕಾಂತ್ ಕಶ್ಯಪ್ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಸಿನಿಮಾದ ಟೈಟಲ್ ಮತ್ತು ಕಥೆಯ ಬಗ್ಗೆ ಹರಿ ಸಂತೋಷ್ ಅವರು ಮಾತನಾಡಿದರು. ‘ಹುಡುಗರಿಗೆ ಹುಡುಗಿಯರು ಸಿಗದೇ ಇರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಂಥ ಸಂದರ್ಭದಲ್ಲಿ ಒಬ್ಬ ಹುಡುಗನಿಗೆ ಇಬ್ಬರು ಹುಡುಗಿಯರು ಸಿಕ್ಕಾಗ ಎಲ್ಲರೂ ಕಂಗ್ರಾಜುಲೇಷನ್ಸ್ ಬ್ರದರ್ ಎನ್ನುತ್ತಾರೆ. ಅಂಥದ್ದೇ ಕಥೆ ಈ ಸಿನಿಮಾದಲ್ಲಿದೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಷ್ಟಕ್ಕೆ ತಳ್ಳಿದ ಕಾರು ಅಪಘಾತ; ಶಶಿಕುಮಾರ್ ಬದುಕಿನಲ್ಲಿ ಅಂದು ನಡೆದಿದ್ದು ಏನು?

ಶಶಿಕುಮಾರ್ ಅವರು ಹೀರೋ ತಂದೆಯ ಪಾತ್ರದಲ್ಲಿ ನಟಿಸಿದ್ದಾರೆ. ಕಾರವಾರ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಒಟ್ಟು 45 ದಿನಗಳ ಕಾಲ ಶೂಟಿಂಗ್ ಮಾಡಲಾಗಿದೆ. ರಕ್ಷಿತ್ ಕಾಪು, ಸುದರ್ಶನ್, ಚೇತನ್ ದುರ್ಗ ಮುಂತಾದವರು ಕೂಡ ನಟಿಸಿದ್ದಾರೆ. ಗುರು ಅವರ ಛಾಯಾಗ್ರಹಣ , ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಈ ಸಿನಿಮಾಗಿದೆ.

Congratulations Brother Movie Team

ಧಾರಾವಾಹಿಗಳಲ್ಲಿ ಅಭಿನಯಿಸಿ ಅನುಭವ ಪಡೆದಿರುವ ನಟ ರಕ್ಷಿತ್ ನಾಗ್ ಅವರಿಗೆ ‘ಕಂಗ್ರಾಜುಲೇಷನ್ಸ್ ಬ್ರದರ್’ ಮೊದಲ ಸಿನಿಮಾ. ನಟಿ ಸಂಜನಾ ದಾಸ್ ಅವರು ಬೋಲ್ಡ್ ಹಾಗೂ ಇಂಡಿಪೆಂಡೆಂಟ್ ಹುಡುಗಿಯ ಪಾತ್ರ ಮಾಡಿದ್ದಾರೆ. ನಟಿ ಅನುಶಾ ಅವರು ಆಡಿಷನ್ ಮೂಲಕ ಈ ಸಿನಿಮಾಗೆ ಆಯ್ಕೆ ಆಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಜೂನ್ ತಿಂಗಳಲ್ಲಿ ಚಿತ್ರ ರಿಲೀಸ್ ಆಗಲಿದೆ.

ಇದನ್ನೂ ಓದಿ: ‘ಕಾದಾಡಿ’ ಸಿನಿಮಾದ ಐಟಂ ಸಾಂಗ್​ನಲ್ಲಿ ಆದಿತ್ಯ ಶಶಿಕುಮಾರ್, ಸೋನಿ ಸಖತ್ ಡ್ಯಾನ್ಸ್

ಸುದ್ದಿಗೋಷ್ಠಿಯಲ್ಲಿ ನಟ ಶಶಿಕುಮಾರ್ ಮಾತನಾಡಿದರು. ‘ಸಿನಿಮಾ ಮಾಡುವಾಗ ಪಕ್ಕಾ ಪ್ಲ್ಯಾನ್ ಹಾಕಿಕೊಳ್ಳುವುದು ಮುಖ್ಯ. ಅಂದುಕೊಂಡ ಅವಧಿಯಲ್ಲೇ ಶೂಟಿಂಗ್ ಮುಗಿಸಿದರೆ ನಿರ್ಮಾಪಕರಿಗೆ ಅನುಕೂಲ ಆಗುತ್ತದೆ. ನಾವೆಲ್ಲ ಚಿತ್ರರಂಗಕ್ಕೆ ಬಂದಾಗ ಆ ರೀತಿ ಪ್ಲಾನಿಂಗ್ ಮಾಡಿಕೊಂಡು ಕೆಲಸ ಮಾಡುತ್ತಿದ್ದೆವು’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.