AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ

ಫಿಲ್ಮ್ ಚೇಂಬರ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಏಪ್ರಿಲ್​ 7ರವರೆಗೂ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದೆ. ಏಪ್ರಿಲ್ 7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿದೆ.

ಯುವರತ್ನನಿಗೆ ರಿಲೀಫ್: ಏಪ್ರಿಲ್ 7ರವರೆಗೂ ಥಿಯೇಟರ್​ ಹೌಸ್ ಫುಲ್​ಗೆ ಅವಕಾಶ
ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Apr 05, 2022 | 12:55 PM

Share

ಬೆಂಗಳೂರು: ಕೊರೊನಾ ನಿಯಮಾವಳಿಗಳು ಹೆಚ್ಚಾದ ಕಾರಣ ರಾಜ್ಯ ಸರ್ಕಾರ ಕಠಿಣ ಮಾರ್ಗದರ್ಶಿ ಬಿಡುಗಡೆಗೊಳಿಸಿತ್ತು. ಥಿಯೇಟರ್​ನಲ್ಲಿ ಕೇವಲ ಶೇ. 50ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸಿನಿಮಾ ರಂಗಕ್ಕೆ ಕೊನೆಗೂ ಜಯ ಸಿಕ್ಕಿದೆ. ಸರ್ಕಾರ ಕೈಗೊಂಡ ಕಠಿಣ ನಿರ್ಧಾರವನ್ನು ಏಪ್ರಿಲ್ 7ರ ವರೆಗೆ ಸಡಿಲಿಸುವುದಾಗಿ ತಿಳಿಸಿದೆ.

ಫಿಲ್ಮ್ ಚೇಂಬರ್ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ, ಏಪ್ರಿಲ್​ 7ರವರೆಗೂ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಿದೆ. ಏಪ್ರಿಲ್ 7ರ ನಂತರ ಶೇ.50ರಷ್ಟು ಭರ್ತಿಗೆ ಮಾತ್ರ ಅವಕಾಶ ನೀಡುವುದಾಗಿ ತಿಳಿಸಿದೆ. ಈ ಮೂಲಕ ಸದ್ಯದ ನಿರ್ಧಾರ ಕೆಲವು ದಿನಗಳವರೆಗೆ ಸಡಿಲಿಕೆಯಾದಂತಾಗಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಕಠಿಣ ನಿಯಮಾವಳಿಗಳನ್ನು ಹೇರಿ ರಾಜ್ಯ ಸರ್ಕಾರ ನಿನ್ನೆ (ಏಪ್ರಿಲ್ 3) ಆದೇಶ ಹೊರಡಿಸಿತ್ತು. ಅದರಂತೆ, ನಿಗದಿತ 8 ಜಿಲ್ಲೆಗಳಲ್ಲಿ ಸಿನಿಮಾ ಹಾಲ್​ಗಳಲ್ಲಿ ಕೇವಲ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅನುಮತಿ ನೀಡಬೇಕು ಎಂದು ಸೂಚನೆ ನೀಡಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಚಂದನವನದಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ಪುನೀತ್ ರಾಜ್​ಕುಮಾರ್ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಭರ್ತಿಗಷ್ಟೇ ಅವಕಾಶ ಹಿನ್ನೆಲೆಯಲ್ಲಿ, ನಟ ಪುನೀತ್ ರಾಜ್​ಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿದ್ದರು. ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡುವಂತೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ್ದರು. ತಜ್ಞರ ಜೊತೆ ಚರ್ಚಿಸಿ ಪರಿಶೀಲಿಸುವುದಾಗಿ ಸಿಎಂ ಭರವಸೆ ನೀಡಿದ್ದರು. ಆ ಬಳಿಕ, ಮೂರು ದಿನಗಳ ಕಾಲ ಶೇ. 100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗಿದೆ.

ಪುನೀತ್​ ಭೇಟಿ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ಸಿ.ನಾರಾಯಣಗೌಡ, ‘ಯುವರತ್ನ’ ನಿರ್ದೇಶಕ ಸಂತೋಷ ಆನಂದ್ ರಾಮ್, ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಉಪಸ್ಥಿತರಿದ್ದರು.

ಇದನ್ನೂ ಓದಿ: ಯುವರತ್ನ ಚಿತ್ರಕ್ಕೆ ತೊಂದರೆ: ಮೌನ ಮುರಿದ ಯಶ್​, ಶಿವರಾಜ್​ಕುಮಾರ್​!

ಇದನ್ನೂ ಓದಿ: ಯುವರತ್ನ ನೋಡಬೇಕು, ಥಿಯೇಟರ್​ ಹೌಸ್​ ಫುಲ್​ ಮಾಡೋಕೆ ಅವಕಾಶ ಕೊಡಿ; ಸಿಎಂಗೆ ಮಕ್ಕಳಿಂದ ಮನವಿ

Published On - 8:41 pm, Sat, 3 April 21

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ