ಐತಿಹಾಸಿಕ ಸಿನಿಮಾನಲ್ಲಿ ನಟಿಸಲಿದ್ದಾರೆ ನಟ ಡಾಲಿ ಧನಂಜಯ್

ಡಾಲಿ ಧನಂಜಯ್ ತಮ್ಮ ಹತ್ತು ವರ್ಷದ ನಟನಾ ವೃತ್ತಿಯಲ್ಲಿ ಹಲವು ಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇದೀಗ ಐತಿಹಾಸಿಕ ಕತೆಯುಳ್ಳ ಸಿನಿಮಾನಲ್ಲಿ ನಟಿಸಲಿದ್ದಾರೆ. ಸಿನಿಮಾದ ಕತೆ ಕರ್ನಾಟಕದ ಸಮುದಾಯವೊಂದರ ವೀರಾವೇಷದ ಹೋರಾದ ಕತೆ ಒಳಗೊಂಡಿದೆ.

ಐತಿಹಾಸಿಕ ಸಿನಿಮಾನಲ್ಲಿ ನಟಿಸಲಿದ್ದಾರೆ ನಟ ಡಾಲಿ ಧನಂಜಯ್
ಡಾಲಿ ಧನಂಜಯ್
Follow us
ಮಂಜುನಾಥ ಸಿ.
|

Updated on: May 19, 2024 | 6:52 PM

ಡಾಲಿ ಧನಂಜಯ್ (Daali Dhananjay) ತಮ್ಮ 10 ವರ್ಷದ ನಟನಾ ವೃತ್ತಿಯಲ್ಲಿ ಹಲವು ರೀತಿಯ ಭಿನ್ನ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕ, ವಿಲನ್, ಪೊಲೀಸ್, ಧಾರ್ಮಿಕ ಕತೆಯುಳ್ಳ ಸಿನಿಮಾ, ಜನಪದ ಶೈಲಿಯ ಸಿನಿಮಾ, ಹಾಸ್ಯ ಎಲ್ಲವನ್ನೂ ಸಹ ಡಾಲಿ ಧನಂಜಯ್ ಪ್ರಯತ್ನ ಮಾಡಿದ್ದಾರೆ. ಇದೀಗ ಡಾಲಿ ಧನಂಜಯ್ ಐತಿಹಾಸಿಕ ಕತೆಯುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಅಲ್ಲಮ’ ಸಿನಿಮಾನಲ್ಲಿ ಅಲ್ಲಮನಾಗಿ ನಟಿಸಿದ್ದ ಡಾಲಿ ಧನಂಜಯ್ ಈಗ ಹಲಗಲಿ ಬೇಡರ ಗುಂಪಿನ ವ್ಯಕ್ತಿಯ ಪಾತ್ರದಲ್ಲಿ ಮಿಂಚಲಿದ್ದಾರೆ.

ಈ ಹಿಂದೆ ‘ಕೃಷ್ಣ-ತುಳಸಿ’ ಸಿನಿಮಾ ನಿರ್ದೇಶನ ಮಾಡಿದ್ದ ಸುಕೇಶ್ ನಿರ್ದೇಶನ ಮಾಡುತ್ತಿರುವ ಐತಿಹಾಸಿಕ ಸಿನಿಮಾನಲ್ಲಿ ಡಾಲಿ ಧನಂಜಯ್ ನಾಯಕ ನಟನಾಗಿ ನಟಿಸಲಿದ್ದಾರೆ. ಸಿನಿಮಾವು ಹಲಗಲಿ ಬೇಡರ ಕುರಿತಾದ ಕತೆ ಒಳಗೊಂಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹಲಗಲಿ ಬೇಡರು ತಮ್ಮ ಅದ್ಭುತವಾದ ಭೇಟೆ ತಂತ್ರಗಳಿಂದ ಬ್ರಿಟೀಷರನ್ನು ಹೇಗೆ ಕಂಗಾಲುಗೊಳಿಸಿದ್ದರು. ಹೇಗೆ ಗೊರಿಲ್ಲ ವಾರ್ ಫೇರ್ ಮೂಲಕ ಬ್ರಿಟೀಷರ ಎದೆಯಲ್ಲಿ ಭೀತಿ ಹುಟ್ಟಿಸಿದ್ದರು ಎಂಬುದೇ ಈ ಸಿನಿಮಾದ ಕತೆ. ಬಾಗಲಕೋಟೆ ಜಿಲ್ಲೆ, ಮುಧೋಳದ ಹಲಗಲಿಯ ಬೇಡರು ಬ್ರಿಟೀಷರ ವಿರುದ್ಧ ಹೋರಾಟ ಮಾಡಿದ್ದರು. ಅದೇ ಕತೆಯನ್ನು ಈಗ ಸಿನಿಮಾ ಮಾಡಲಾಗುತ್ತಿದೆ.

ಈ ಸಿನಿಮಾವನ್ನು ಭಾರಿ ಬಜೆಟ್​ನಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂಪಾಯಿ ಹಣವನ್ನು ಈ ಸಿನಿಮಾದ ಮೇಲೆ ಹೂಡಿಕೆ ಮಾಡಲಾಗುತ್ತಿದೆ. ಭಾರಿ ದೊಡ್ಡ ಸೆಟ್​ಗಳು, ಹೆಚ್ಚು ಸಂಖ್ಯೆಯ ನಟ-ನಟಿಯರು, ವಿದೇಶಿ ನಟ-ನಟಿಯರು, ಸಾಹಸ ಕಲಾವಿದರ ಜೊತೆಗೆ ದೊಡ್ಡ ಪ್ರಮಾಣದ ಸಿಜಿಐ, ಗ್ರಾಫಿಕ್ಸ್ ಬಳಕೆ ಸಹ ಈ ಸಿನಿಮಾದಲ್ಲಿ ಆಗಲಿದೆ. ಸಿನಿಮಾವನ್ನು ಬಹು ಅದ್ಧೂರಿಯಾಗಿ ನಿರ್ಮಾಣ ಮಾಡುವ ಯೋಜನೆ ಚಿತ್ರತಂಡದ್ದಾಗಿದ್ದು, ಅದಕ್ಕಾಗಿ ತಯಾರಿ ಆರಂಭವಾಗಿದೆ. ಸಿನಿಮಾದ ಕೆಲವು ಭಾಗಗಳ ಚಿತ್ರೀಕರಣ ಸಹ ಈಗಾಗಲೇ ಆಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ಧನಂಜಯ್ ರಾಯಭಾರಿ

ಡಾಲಿ ಧನಂಜಯ್ ಪ್ರಸ್ತುತ ಪರಭಾಷೆ ಸಿನಿಮಾಗಳಾದ ‘ಪುಷ್ಪ 2’, ‘ಜೀಬ್ರಾ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ‘ಕೋಟಿ’, ‘ಅಣ್ಣ ಫ್ರಂ ಮೆಕ್ಸಿಕೋ’, ‘ಉತ್ತರಕಾಂಡ’ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದರ ಜೊತೆಗೆ ‘ಕೆಂಪೇಗೌಡ’ ಹೆಸರಿನ ಸಿನಿಮಾವನ್ನು ಸಹ ಧನಂಜಯ್ ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾದಲ್ಲಿ ಡಾಲಿ, ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ. ಇದೆಲ್ಲದರ ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಿಂದ ಕೆಲವು ಹೊಸಬರ ಸಿನಿಮಾಗಳನ್ನು ನಿರ್ಮಾಣ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!