AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daali Dhananjay: ಫೆ.5ಕ್ಕೆ ‘ಹೊಯ್ಸಳ’ ಸಿನಿಮಾದ ಟೀಸರ್​ ಬಿಡುಗಡೆ; ಡಾಲಿ ಅಭಿಮಾನಿಗಳಿಗೆ ಹೆಚ್ಚಿತು ಕಾತರ

Hoysala Movie Teaser: ಡಾಲಿ ಧನಂಜಯ್ ನಟನೆಯ 25ನೇ ಚಿತ್ರವಾಗಿ ‘ಹೊಯ್ಸಳ’ ಮೂಡಿಬರುತ್ತಿದೆ. ಈ ಸಿನಿಮಾದ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ.

Daali Dhananjay: ಫೆ.5ಕ್ಕೆ ‘ಹೊಯ್ಸಳ’ ಸಿನಿಮಾದ ಟೀಸರ್​ ಬಿಡುಗಡೆ; ಡಾಲಿ ಅಭಿಮಾನಿಗಳಿಗೆ ಹೆಚ್ಚಿತು ಕಾತರ
ಡಾಲಿ ಧನಂಜಯ್
ಮದನ್​ ಕುಮಾರ್​
|

Updated on:Feb 03, 2023 | 3:30 PM

Share

ನಟ ಡಾಲಿ ಧನಂಜಯ್​ (Daali Dhananjay) ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ಪಾತ್ರಗಳನ್ನು ಪ್ರಯತ್ನಿಸುತ್ತಾರೆ. ಬಹುನಿರೀಕ್ಷಿತ ‘ಹೊಯ್ಸಳ’ (Hoysala Movie) ಸಿನಿಮಾದಲ್ಲಿ ಅವರಿಗೆ ಪೊಲೀಸ್​ ಪಾತ್ರವಿದೆ. ಈ ಸಿನಿಮಾಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಚಿತ್ರತಂಡದಿಂದ ಈಗೊಂದು ಅಪ್​ಡೇಟ್​ ಸಿಕ್ಕಿದೆ. ಪೋಸ್ಟರ್​ಗಳ ಮೂಲಕ ಗಮನ ಸೆಳೆದಿರುವ ಈ ಸಿನಿಮಾದ ಟೀಸರ್​ ಬಿಡುಗಡೆಗೆ ದಿನಾಂಕ ನಿಗದಿ ಆಗಿದೆ. ಫೆಬ್ರವರಿ 5ರಂದು ಬೆಳಗ್ಗೆ 9.27ಕ್ಕೆ ಟೀಸರ್​ ಅನಾವರಣ ಮಾಡುವುದಾಗಿ ನಿರ್ಮಾಣ ಸಂಸ್ಥೆಯಾದ ‘ಕೆಆರ್​ಜಿ ಸ್ಟುಡಿಯೋಸ್​’ ಮಾಹಿತಿ ನೀಡಿದೆ. ‘ಹೊಯ್ಸಳ’ ಚಿತ್ರದಲ್ಲಿ ಡಾಲಿ ಧನಂಜಯ್​ ಅವರಿಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್​ (Amrutha Iyengar) ನಟಿಸುತ್ತಿದ್ದಾರೆ. ಈ ಕಾರಣದಿಂದಲೂ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ.

ಡಾಲಿ ನಟನೆಯ 25ನೇ ಸಿನಿಮಾ ‘ಹೊಯ್ಸಳ’:

ಯಾವುದೇ ನಟರಿಗೆ ಮೈಲುಗಲ್ಲಿನ ಸಿನಿಮಾಗಳು ತುಂಬ ಮುಖ್ಯವಾಗುತ್ತವೆ. ಡಾಲಿ ಧನಂಜಯ್ ಅವರು ನಟಿಸುತ್ತಿರುವ 25ನೇ ಸಿನಿಮಾ ‘ಹೊಯ್ಸಳ’. ಹಾಗಾಗಿ ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ವಿಶೇಷವಾದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಅವರು ಪೊಲೀಸ್​ ಆಗಿ ಕಾಣಿಸಿಕೊಳ್ಳುತ್ತಿರುವುದರಿಂದ ಕೌತುಕ ಜೋರಾಗಿದೆ. ಈ ಹಿಂದೆ ‘ಸಲಗ’ ಚಿತ್ರದಲ್ಲೂ ಧನಂಜಯ್​ ಅವರು ಪೊಲೀಸ್​ ಪಾತ್ರ ಮಾಡಿ ಗಮನ ಸೆಳೆದಿದ್ದರು.

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ನನಗೆ ಏನು ಅಂದ್ರೆ ಏನೂ ಗೊತ್ತಿಲ್ಲ ಎಂದ ಡಾಲಿ ಧನಂಜಯ
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
‘ಕ್ಷೇತ್ರಪತಿ’ ಆದ ನವೀನ್​ ಶಂಕರ್​ಗೆ ಶುಭ ಕೋರಿದ ಡಾಲಿ ಧನಂಜಯ; ಮೋಷನ್​ ಪೋಸ್ಟರ್​ ರಿಲೀಸ್​
Image
‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ

ಇದನ್ನೂ ಓದಿ: ‘ಈ ಥರ ಮದುವೆ ಆದ್ರೆ ಖುಷಿ’: ಸಿಂಹಪ್ರಿಯಾ ವಿವಾಹಕ್ಕೆ ಡಾಲಿ ಜತೆ ಬಂದ ಅಮೃತಾ ಹೇಳಿಕೆ

ಡಾಲಿ ಧನಂಜಯ್​, ಅಮೃತಾ ಅಯ್ಯಂಗಾರ್ ಮಾತ್ರವಲ್ಲದೇ  ಅಚ್ಯುತ್​ ಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ, ನಾಗಭೂಷಣ್ ಮುಂತಾದ ಪ್ರತಿಭಾವಂತ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತಾಂತ್ರಿಕ ಬಳಗದಲ್ಲಿ ಅನುಭವಿಗಳು ಕೆಲಸ ಮಾಡುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಕಾರ್ತಿಕ್ ಎಸ್. ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಹಾಗೂ ಮಾಸ್ತಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸಿದ್ದಾರೆ.

ಮಾರ್ಚ್​ 30ಕ್ಕೆ ‘ಹೊಯ್ಸಳ’ ಬಿಡುಗಡೆ:

ಕೆ.ಆರ್.ಜಿ. ಸ್ಟುಡಿಯೋಸ್ ನಿರ್ಮಾಣದ ‘ಹೊಯ್ಸಳ’ ಚಿತ್ರವನ್ನು ವಿಜಯ್ ಕಿರಗಂದೂರು ಅವರು ಅರ್ಪಿಸುತ್ತಿದ್ದಾರೆ. ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ಅವರ ನಿರ್ಮಾಣದಲ್ಲಿ, ವಿಜಯ್ ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಮಾರ್ಚ್ 30ರಂದು ‘ಹೊಯ್ಸಳ’ ಬಿಡುಗಡೆ ಆಗಲಿದೆ.

ಕನ್ನಡ ಚಿತ್ರರಂಗದಲ್ಲಿ ಡಾಲಿ ಧನಂಜಯ ಮತ್ತು ನಟಿ ಅಮೃತಾ ಅಯ್ಯಂಗಾರ್​ ಉತ್ತಮ ಜೋಡಿ ಎನಿಸಿಕೊಂಡಿದ್ದಾರೆ. ‘ಪಾಪ್​ ಕಾರ್ನ್​ ಮಂಕಿ ಟೈಗರ್​’ ಮತ್ತು ‘ಬಡವ ರಾಸ್ಕಲ್​’ ಸಿನಿಮಾಗಳಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡ ಈ ಜೋಡಿಯನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಇಬ್ಬರ ನಟನೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಈಗ ಅವರು ‘ಹೊಯ್ಸಳ’ ಸಿನಿಮಾದಲ್ಲಿ ಮೂರನೇ ಬಾರಿ ಜೊತೆಯಾಗಿ ನಟಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:30 pm, Fri, 3 February 23

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
ಗಾನವಿಯ ಟಾರ್ಗೆಟ್ ಮಾಡಿದರೇ ಮನೆ ಮಂದಿ: ವಿಡಿಯೋ ನೋಡಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
Live Video: ಸಿಎಂ ಡಿಕೆ ಶಿವಕುಮಾರ್ ಮಹತ್ವದ ಸುದ್ದಿಗೋಷ್ಠಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
‘ಇಷ್ಟು ಗಲೀಜು ಆಟ ಆಡಬೇಡಿ’; ಕಾವ್ಯಾಗೆ ನೇರವಾಗಿ ಹೇಳಿದ ಗಾನವಿ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ
ಎಸ್​ಐಆರ್​ನಲ್ಲಿ 1.7 ಕೋಟಿ ಹೆಸರು ತೆಗೆದಿದ್ದಾರೆ: ಸಚಿವ ರಿಜ್ವಾನ್ ಆರೋಪ