AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ್-ಧನ್ಯತಾ ಮದುವೆಯ ಸರಳ, ಸುಂದರ ಲಗ್ನಪತ್ರಿಕೆ

Daali Dhananjay and Dhanyata: ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರು ಕೆಲ ವಾರಗಳ ಹಿಂದಷ್ಟೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿ ತಿಂಗಳಲ್ಲಿ ಮದುವೆ ಮಾಡಿಕೊಳ್ಳುತ್ತಿದ್ದಾರೆ. ಇಲ್ಲಿದೆ ನೋಡಿ ಡಾಲಿ ಧನಂಜಯ್ ಮತ್ತು ಧನ್ಯತಾ ಮದುವೆ ಆಮಂತ್ರಣ ಪತ್ರಿಕೆ. ಈ ಜೋಡಿಯ ಮದುವೆ ಎಲ್ಲಿ ನಡೆಯಲಿದೆ? ಎಂದು ನಡೆಯಲಿದೆ? ಇಲ್ಲಿದೆ ಮಾಹಿತಿ.

ಡಾಲಿ ಧನಂಜಯ್-ಧನ್ಯತಾ ಮದುವೆಯ ಸರಳ, ಸುಂದರ ಲಗ್ನಪತ್ರಿಕೆ
ಧನ್ಯತಾ-ಧನಂಜಯ್
ಮಂಜುನಾಥ ಸಿ.
|

Updated on:Dec 15, 2024 | 11:05 AM

Share

ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ ಮಾಡಿಕೊಳ್ಳುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ಇವರ ಮದುವೆ ಆಮಂತ್ರಣ ಪತ್ರಿಕೆ ರೆಡಿಯಾಗಿದ್ದು, ಆಮಂತ್ರಣ ಪತ್ರಿಕೆಯನ್ನು ಕ್ರಿಯಾಶೀಲವಾಗಿ ಮಾಡುವ ಜೊತೆಗೆ ಅಲ್ಲಿಯೂ ಕನ್ನಡತನ, ಸರಳತೆ ಹಾಗೂ ಮಧ್ಯಮವರ್ಗತನವನ್ನು ಡಾಲಿ ಹಾಗೂ ಧನ್ಯತಾ ಮೆರೆದಿದ್ದಾರೆ.

ಈಗೆಲ್ಲ ಬಗೆಬಗೆಯ ಮದುವೆ ಆಮಂತ್ರಣ ಪತ್ರಿಕೆಗಳು ಬಂದಿವೆ. ಎಲ್​ಇಡಿ ಹೊಂದಿರುವ ಆಮಂತ್ರಣ ಪತ್ರಿಕೆಗಳು ಸಹ ಮಾರುಕಟ್ಟೆಯಲ್ಲಿವೆ. ಪ್ರತಿ ಆಮಂತ್ರಣ ಪತ್ರಿಕೆಗೆ ಸಾವಿರಾರು ರೂಪಾಯಿ ಖರ್ಚು ಮಾಡಲಾಗುತ್ತಿದೆ. ಕರ್ನಾಟಕದಲ್ಲಿಯೂ ಸಹ ಹಲವರು ಈ ರೀತಿಯ ದುಬಾರಿ ಆಮಂತ್ರಣ ಪತ್ರಿಕೆಗಳನ್ನು ಮಾಡಿಸಿದ್ದಾರೆ. ಆದರೆ ಡಾಲಿ ಧನಂಜಯ್, ಬಹಳ ಸರಳವಾದ ಆದರೆ ಅಷ್ಟೇ ಸುಂದರವಾದ ಮತ್ತು ಬಹಳ ಆಪ್ತ ಎನಿಸುವಂಥಹಾ ಆಮಂತ್ರಣ ಪತ್ರಿಕೆಗಳನ್ನು ತಮ್ಮ ಮದುವೆಗೆ ಮಾಡಿಸಿದ್ದಾರೆ. ಡಾಲಿ-ಧನ್ಯತಾ ಆಮಂತ್ರಣ ಪತ್ರಿಕೆ ನೋಡಿದರೆ 70-80ರ ದಶಕಕ್ಕೆ ಹೋದಂತೆ ಭಾಸವಾಗುತ್ತದೆ.

ಸರಳವಾದ ಪೋಸ್ಟ್ ಕಾರ್ಡ್ ಮಾದರಿಯಲ್ಲಿ ಆಮಂತ್ರಣ ಪತ್ರಿಕೆಯನ್ನು ಡಿಸೈನ್ ಮಾಡಿದ್ದು, ಆಮಂತ್ರಣ ಪತ್ರಿಕೆಯ ಒಳಗೆ ಸ್ವತಃ ವಧು-ವರರು ಆಪ್ತವಾಗಿ ಪತ್ರ ಬರೆದಿರುವ ರೀತಿಯ ಸಾಲುಗಳನ್ನು ಬರೆಯಲಾಗಿದೆ. ‘ನಿಮ್ಮ ಪ್ರೀತಿಯ ಧನಂಜಯ ಹಾಗೂ ಧನ್ಯತಾ ಮಾಡುವ ನಮಸ್ಕಾರಗಳು. ನಾವು ಖುಷಿಯಾಗಿದ್ದೇವೆ. ನಮ್ಮ ವಿಷಯ ತಿಳಿದು ನೀವು ಸಂಭ್ರಮಿಸಿದ್ದು ನಮ್ಮ ಖುಷಿಯನ್ನು ಇಮ್ಮಡಿಗೊಳಿಸಿದೆ. ನಮ್ಮ ಮದುವೆ ಸಂಭ್ರಮವನ್ನು ನಿಮ್ಮೆಲ್ಲರ ಜೊತೆಗೂಡಿ ಆಚರಿಸಬೇಕು ಎಂಬ ಮಹದಾಸೆಯಿಂದ ಈ ಪತ್ರ ಬರೆಯುತ್ತಿದ್ದೇವೆ. ತಾವು ಎಲ್ಲಿದ್ದರೂ ಜಗದ ಯಾವುದೇ ಮೂಲೆಯಲ್ಲಿ ಇದ್ದರೂ ಕುಟುಂಬ ಸಮೇತರಾಗಿ ಬಂದು ನಮ್ಮ ಸಮಾಗಮಕ್ಕೆ ನೀವು ಆಶೀರ್ವದಿಸಬೇಕು. ಪ್ರೇಮದ ಭರವಸೆಯೇ ಬಾಳಿನ ಬೆಳಕು. ನಮ್ಮ ಪ್ರೀತಿದೀಪದ ಪ್ರಕಾಶಕ್ಕೆ ಸಾಕ್ಷಿಯಾಗಬೇಕು ಎಂಬುದು ನಮ್ಮ ಆಶಯ, ಮತ್ತೆಲ್ಲಾ ಕ್ಷೇಮವಷ್ಟೇ. ನಿಮ್ಮನ್ನು ಸ್ವಾಗತಿಸುವ ನಿರೀಕ್ಷೆಯಲ್ಲಿ ಧನಂಜಯ ಹಾಗೂ ಧನ್ಯತಾ’ ಎಂದು ಆಮಂತ್ರಣ ಪತ್ರಿಕೆಯಲ್ಲಿ ಬರೆಯಲಾಗಿದೆ. ಈ ಬರೆಹ ಸಹ ಕೈಬರಹದ ಫಾಂಟ್​ನಲ್ಲಿಯೇ ಇದೆ.

ಡಾಲಿ ಧನಂಜಯ್ ಹಾಗೂ ಧನ್ಯತಾ ಮದುವೆ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 16ರ ಭಾನುವಾರ ಬೆಳಿಗ್ಗೆ 8:30ಕ್ಕೆ ನಡೆಯಲಿದೆ. ಆರತಕ್ಷತೆ ಅದೇ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 15ರ ಸಂಜೆ 6 ಗಂಟೆಗೆ ನಡೆಯಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sun, 15 December 24

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು