ವಿಶೇಷವಾಗಿ ಬಿಡುಗಡೆ ಆಯ್ತು ‘ಕೆರೆಬೇಟೆ’ ಟೀಸರ್​; ಸಾಥ್​ ನೀಡಿದ ಡಾಲಿ, ದಿನಕರ್​ ತೂಗುದೀಪ

ನಿರ್ದೇಶಕ ರಾಜ್‌ಗುರು ಅವರು ‘ಕೆರೆಬೇಟೆ’ ಚಿತ್ರದಲ್ಲಿ ಒಂದು ವಿಶೇಷವಾದ ಕಥೆ ಹೇಳಲಿದ್ದಾರೆ. ಗೌರಿ ಶಂಕರ್​ ಅವರು ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಟೀಸರ್​ ಬಿಡುಗಡೆ ಕಾರ್ಯಕ್ರಮಕ್ಕೆ ಚಂದನವನದ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಟೀಸರ್​ ನೋಡಿದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಶೇಷವಾಗಿ ಬಿಡುಗಡೆ ಆಯ್ತು ‘ಕೆರೆಬೇಟೆ’ ಟೀಸರ್​; ಸಾಥ್​ ನೀಡಿದ ಡಾಲಿ, ದಿನಕರ್​ ತೂಗುದೀಪ
‘ಕೆರೆಬೇಟೆ’ ಟೀಸರ್​ ಬಿಡುಗಡೆ ಕಾರ್ಯಕ್ರಮ

Updated on: Jan 03, 2024 | 5:28 PM

ಅಪ್ಪಟ ಕನ್ನಡದ ಮಣ್ಣಿನ ಕಥೆಯನ್ನು ಇಟ್ಟುಕೊಂಡ ಬಂದ ಸಿನಿಮಾಗಳಿಗೆ ಪ್ರೇಕ್ಷಕರು ಮನಸೋಲುತ್ತಿದ್ದಾರೆ. ‘ಕೆರೆಬೇಟೆ’ (Kerebete) ಸಿನಿಮಾದಲ್ಲಿ ಕೂಡ ಅಂಥ ದೇಸಿ ಕಥೆ ಇರಲಿದೆ. ಅದರ ಝಲಕ್​ ತೋರಿಸಲು ಇಂದು (ಜನವರಿ 3) ಟೀಸರ್​ ಬಿಡುಗಡೆ ಮಾಡಲಾಗಿದೆ. ಮಲೆನಾಡಿನಲ್ಲಿ ಮೀನು ಬೇಟಿಯಾಡುವ ಪದ್ಧತಿ ಇದೆ. ಅದನ್ನೇ ಕೇಂದ್ರವಾಗಿ ಇಟ್ಟುಕೊಂಡು ‘ಕೆರೆಬೇಟೆ’ ಸಿನಿಮಾ ಮಾಡಲಾಗಿದೆ. ಚಿತ್ರದ ಕಾನ್ಸೆಪ್ಟ್​ಗೆ ತಕ್ಕಂತೆಯೇ ವಿಶೇಷವಾಗಿ ಬೆಂಗಳೂರಿನ ಮಲ್ಲತ್ತಹಳ್ಳಿ ಕೆರೆಯ ದಂಡೆಯಲ್ಲಿ ಸುದ್ದಿಗೋಷ್ಠಿ ನಡೆಸಿ, ಟೀಸರ್​ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಗೌರಿ ಶಂಕರ್​ (Gowri Shankar) ಅವರು ಹೀರೋ ಆಗಿ ನಟಿಸಿದ್ದಾರೆ. ರಾಜ್​ಗುರು ನಿರ್ದೇಶನ ಮಾಡಿದ್ದಾರೆ.

‘ಕೆರೆಬೇಟೆ’ ಸಿನಿಮಾದ ಟೀಸರ್​ ಬಿಡುಗಡೆ ಕಾರ್ಯಕ್ರಮಕ್ಕೆ ಚಂದನವನದ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಡಾಲಿ ಧನಂಜಯ ಹಾಗೂ ದಿನಕರ್ ತೂಗುದೀಪ್ ಅವರು ಟೀಸರ್ ಅನಾವರಣ ಮಾಡಿದ್ದಾರೆ. ನಿರ್ದೇಶಕರಾದ ಪವನ್​ ಪಡೆಯರ್​, ಗುರು ದೇಶಪಾಂಡೆ, ಜಡೇಶ್ ಅವರು ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್​ ನೋಡಿದ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ‘ಜೋಕಾಲಿ’ ಮತ್ತು ‘ರಾಜಹಂಸ’ ಚಿತ್ರಗಳಲ್ಲಿ ಹೀರೋ ಆಗಿ ನಟಿಸಿದ್ದ ಗೌರಿ ಶಂಕರ್ ಅವರು ಈಗ ‘ಕೆರೆಬೇಟೆ’ ಚಿತ್ರದ ಮೂಲಕ ಡಿಫರೆಂಟ್​ ಪಾತ್ರದೊಂದಿಗೆ ಜನರ ಎದುರು ಬರಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ‘ಕೆರೆಬೇಟೆ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿರುವ ಹೊಸ ನಟಿ ಬಿಂದು ಶಿವರಾಮ್​

ಪವನ್ ಒಡೆಯರ್ ಜೊತೆ ಹಲವು ಚಿತ್ರಗಳಲ್ಲಿ ಕೆಲಸ ಮಾಡಿ ಅನುಭವ ಪಡೆದಿರುವ ನಿರ್ದೇಶಕ ರಾಜ್‌ಗುರು ಅವರು ‘ಕೆರೆಬೇಟೆ’ ಚಿತ್ರದಲ್ಲಿ ಒಂದು ವಿಶೇಷವಾದ ಕಥೆ ಹೇಳಲಿದ್ದಾರೆ. ‘ನಮ್ಮ ನೆಲದ ಸಿನಿಮಾ ಕೆರೆಬೇಟೆ. ಇಂಥ ಚಿತ್ರಗಳು ಎಂದಿಗೂ ಸೋಲಲ್ಲ. ಎಷ್ಟೋ ಜನರಿಗೆ ಕೆರೆಬೇಟೆ ಬಗ್ಗೆ ಗೊತ್ತಿಲ್ಲ. ಈ ಚಿತ್ರದ ಮೂಲಕ ಎಲ್ಲರಿಗೂ ಗೊತ್ತಾಗಲಿದೆ’ ಎಂದಿದ್ದಾರೆ ಡಾಲಿ ಧನಂಜಯ್​. ‘ನಾನು ಈಗಾಗಲೇ ಈ ಸಿನಿಮಾ ನೋಡಿದ್ದೇನೆ. ಬಹಳ ಚೆನ್ನಾಗಿದೆ. ಇದು ಖಂಡಿತ ಗೆಲ್ಲುತ್ತದೆ’ ಎಂದು ದಿನಕರ್​ ತೂಗುದೀಪ ಹೇಳಿದ್ದಾರೆ.

Kerebete Teaser | Gowrishankar SRG | Rajguru B | Jaishankar Patel | Gagan Baderiya | A2 Music

‘ಕೆರೆಬೇಟೆ’ ಸಿನಿಮಾಗೆ ಶೂಟಿಂಗ್​ ಮುಗಿದಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ. ಸಿಗಂದೂರು, ಸೊರಬ ಮುಂತಾದ ಕಡೆಗಳಲ್ಲಿ ಶೂಟಿಂಗ್ ಮಾಡಲಾಗಿದೆ. ಸಿನಿಮಾದ ಬಿಡುಗಡೆ ದಿನಾಂಕದ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ‘ನಾವು ಶ್ರದ್ಧೆಯಿಂದ ಸಿನಿಮಾ ಮಾಡಿದ್ದೇವೆ. ಎಲ್ಲರೂ ಈ ಚಿತ್ರ ನೋಡಬೇಕು’ ಎಂದಿದ್ದಾರೆ ಗೌರಿ ಶಂಕರ್​. ಈ ಸಿನಿಮಾದಲ್ಲಿ ನಾಯಕಿಯಾಗಿ ಬಿಂದು ನಟಿಸಿದ್ದಾರೆ. ಇದು ಅವರಿಗೆ ಚೊಚ್ಚಲ ಸಿನಿಮಾ. ಸಂಪತ್, ಗೋಪಾಲ್ ದೇಶಪಾಂಡೆ, ಹರಿಣಿ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ಗಗನ್ ಬಡೇರಿಯಾ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಜನಮನ ಸಿನಿಮಾ’ ಸಂಸ್ಥೆಯ ಮೂಲಕ ಜೈ ಶಂಕರ್ ಪಟೇಲ್ ಹಾಗೂ ಗೌರಿ ಶಂಕರ್ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us