Ramya: ರಮ್ಯಾ ಕಂಬ್ಯಾಕ್​ ಸಿನಿಮಾ ‘ಉತ್ತರಕಾಂಡ’; ಡಾಲಿ ಜೊತೆ ಸ್ಯಾಂಡಲ್​ವುಡ್​ ಕ್ವೀನ್​ ನಟನೆ

Ramya | Uttarakaanda: ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ ‘ಉತ್ತರಕಾಂಡ’ ಚಿತ್ರ ಮೂಡಿಬರಲಿದೆ. ಆ ಭಾಗದಲ್ಲಿಯೇ ಪೂರ್ತಿ ಚಿತ್ರೀಕರಣ ನಡೆಯಲಿದೆ. 2023ರ ಜನವರಿಯಲ್ಲಿ ಈ ಸಿನಿಮಾದ ಶೂಟಿಂಗ್​ ಆರಂಭ ಆಗಲಿದೆ.

Ramya: ರಮ್ಯಾ ಕಂಬ್ಯಾಕ್​ ಸಿನಿಮಾ ‘ಉತ್ತರಕಾಂಡ’; ಡಾಲಿ ಜೊತೆ ಸ್ಯಾಂಡಲ್​ವುಡ್​ ಕ್ವೀನ್​ ನಟನೆ
‘ಉತ್ತರಕಾಂಡ’ ಚಿತ್ರತಂಡ
Follow us
TV9 Web
| Updated By: ಮದನ್​ ಕುಮಾರ್​

Updated on:Nov 06, 2022 | 9:15 PM

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಮೂಲಕ ನಟಿ ರಮ್ಯಾ (Ramya Divya Spandana) ಅವರು ಕಂಬ್ಯಾಕ್​ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ಆ ಚಿತ್ರದ ನಟನೆಯಿಂದ ಹಿಂದೆ ಸರಿದರು. ಹಾಗಾದರೆ ರಮ್ಯಾ ಯಾವ ಸಿನಿಮಾ ಮೂಲಕ ದೊಡ್ಡ ಪರದೆಗೆ ಮರಳುತ್ತಾರೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಕೊರೆಯುತ್ತಿತ್ತು. ಅದಕ್ಕೆ ಅಂತೂ ಇಂತೂ ಉತ್ತರ ಸಿಕ್ಕಿದೆ. ಡಾಲಿ ಧನಂಜಯ್​ (Daali Dhananjay) ನಟನೆಯ ‘ಉತ್ತರಕಾಂಡ’ ಸಿನಿಮಾವೇ ರಮ್ಯಾ ಅವರ ಕಂಬ್ಯಾಕ್​ ಸಿನಿಮಾ ಆಗಲಿದೆ. ಹಲವು ವರ್ಷಗಳಿಂದ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದರು. ಈಗ ‘ಉತ್ತರಕಾಂಡ’ (Uttarakaanda) ಚಿತ್ರಕ್ಕಾಗಿ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ. ಸದ್ಯ ಈ ಚಿತ್ರಕ್ಕೆ ಪೂಜೆ ನೆರವೇರಿಸಲಾಗಿದೆ.

‘ಉತ್ತರಕಾಂಡ’ ಸಿನಿಮಾವನ್ನು ವಿಜಯ್ ಕಿರಗಂದೂರು ಅರ್ಪಿಸುತ್ತಿದ್ದಾರೆ. ಕೆ.ಆರ್.ಜಿ. ಸಂಸ್ಥೆ ನಿರ್ಮಾಣ ಮಾಡುತ್ತಿದ್ದು, ರೋಹಿತ್ ಪದಕಿ ನಿರ್ದೇಶಿಸುತ್ತಿದ್ದಾರೆ. ಇಂದು (ನ.6) ಮಧ್ಯಾಹ್ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಈ ಚಿತ್ರಕ್ಕೆ ಮುಹೂರ್ತ ನೆರವೇರಿದೆ. ‘ರತ್ನನ್ ಪ್ರಪಂಚ’ ಯಶಸ್ಸಿನ ನಂತರ ನಿರ್ದೇಶಕ ರೋಹಿತ್ ಪದಕಿ, ನಿರ್ಮಾಪಕರಾದ ಕಾರ್ತಿಕ್ ಗೌಡ ಹಾಗೂ ಯೋಗಿ ಜಿ. ರಾಜ್ ಮತ್ತೊಮ್ಮೆ ಒಂದಾಗಿದ್ದಾರೆ.

ಈ ಚಿತ್ರಕ್ಕಾಗಿ ರಮ್ಯಾ ಅವರು ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ‘ರತ್ನನ್​ ಪ್ರಪಂಚ’ ಚಿತ್ರದಲ್ಲಿ ರಮ್ಯಾ ನಟಿಸಬೇಕಿತ್ತು. ಕಾರಣಾಂತರಗಳಿಂದ ಸಾಧ್ಯವಾಗಿರಲಿಲ್ಲ. ಈಗ ಡಾಲಿ ಧನಂಜಯ್​ ಜೊತೆ ಅಭಿನಯಿಸಲು ಕಾಲ ಕೂಡಿಬಂದಿದೆ. ಈ ಬಗ್ಗೆ ರಮ್ಯಾ ಮಾತನಾಡಿದ್ದಾರೆ. ‘ಇಂತಹ ಒಳ್ಳೆಯ ತಂಡದ ಜೊತೆ ಕೈ ಜೋಡಿಸಿ ಬೆಳ್ಳಿಪರದೆಗೆ ಹಿಂದಿರುಗುತ್ತಿರುವುದು ಸಂತೋಷ ತಂದಿದೆ. ಇತ್ತೀಚಿನ ದಿನಗಳಲ್ಲಿ ಈ ತಂಡದ ಜೊತೆಗಿನ ಒಡನಾಟ ಚೆನ್ನಾಗಿದೆ. ತಂಡದವರೆಲ್ಲರೂ ನನ್ನ ಮೇಲೆ ತೋರುತ್ತಿರುವ ಅಭಿಮಾನ ಹಾಗು ಬಾಂಧವ್ಯ ನೋಡಿದರೆ ಒಂದು ಒಳ್ಳೆಯ ಜಾಗದಲ್ಲಿದ್ದೀನಿ ಅನ್ನೋ ಭಾವನೆ ಕೊಟ್ಟಿದೆ’ ಎಂದು ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ
Image
‘ಪುಷ್ಪ 2’ ಬಗ್ಗೆ ನನಗೆ ಏನು ಅಂದ್ರೆ ಏನೂ ಗೊತ್ತಿಲ್ಲ ಎಂದ ಡಾಲಿ ಧನಂಜಯ
Image
ಡಾಲಿ ಧನಂಜಯ್​-ಅಮೃತಾ ಅಯ್ಯಂಗಾರ್​ ನಡುವೆ ಏನು ನಡೆಯುತ್ತಿದೆ? ನೇರ ಉತ್ತರ ನೀಡಿದ ನಟಿ
Image
‘ಕ್ಷೇತ್ರಪತಿ’ ಆದ ನವೀನ್​ ಶಂಕರ್​ಗೆ ಶುಭ ಕೋರಿದ ಡಾಲಿ ಧನಂಜಯ; ಮೋಷನ್​ ಪೋಸ್ಟರ್​ ರಿಲೀಸ್​
Image
‘ನೀನೇ ಬೇಕು ನೀನೇ ಬೇಕು ಎನ್ನುವಂತಾಗಲಿ’: ವಸಿಷ್ಠ ಸಿಂಹ, ಡಾಲಿ ಧನಂಜಯಗೆ ಹಂಸಲೇಖ ಹಾರೈಕೆ

ರಮ್ಯಾ ಜೊತೆ ನಟಿಸುವ ಅವಕಾಶ ಸಿಕ್ಕಿದ್ದಕ್ಕೆ ಡಾಲಿ ಧನಂಜಯ್​ ಖುಷಿ ಆಗಿದ್ದಾರೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಸೊಗಡಿನಲ್ಲಿ, ಭಾಷೆಯಲ್ಲಿ ಮೂಡಿಬರಲಿದೆ. ಅಲ್ಲಿಯೇ ಪೂರ್ತಿ ಚಿತ್ರೀಕರಣ ಆಗಲಿದೆ. 2023ರ ಜನವರಿಯಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭ ಆಗಲಿದೆ. ಅರವಿಂದ ಕಶ್ಯಪ್ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ಸಂಯೋಜನೆ, ದೀಪು ಎಸ್. ಕುಮಾರ್ ಸಂಕಲನ ಮಾಡಲಿದ್ದಾರೆ. ‘ಉತ್ತರ ಕಾಂಡ’ ಚಿತ್ರದಲ್ಲಿ ಇನ್ನೂ ಅನೇಕ ಕಲಾವಿದರು ನಟಿಸಲಿದ್ದು, ಅವರ ಬಗ್ಗೆ ನಂತರದ ದಿನಗಳಲ್ಲಿ ಮಾಹಿತಿ ನೀಡಲಿದೆ ಚಿತ್ರತಂಡ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:15 pm, Sun, 6 November 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ