Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ

ನಟ ಧನಂಜಯ್ ಹೊಸ ಚಿತ್ರವನ್ನು ಘೋಷಿಸಿದ್ದಾರೆ. ಈ ಚಿತ್ರ ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ತಯಾರಾಗಲಿದೆ.

Dhananjay: ಧನಂಜಯ್ ಬತ್ತಳಿಕೆ ಸೇರಿತು ಹೊಸ ಸಿನಿಮಾ; ಕುತೂಹಲ ಮೂಡಿಸುವ ಪೋಸ್ಟರ್ ಇಲ್ಲಿದೆ
ಧನಂಜಯ್ ನೂತನ ಚಿತ್ರ '21 Hours' ಪೋಸ್ಟರ್
Follow us
TV9 Web
| Updated By: shivaprasad.hs

Updated on:Aug 22, 2021 | 2:43 PM

ಪ್ರಸ್ತುತ ಚಂದನವನದಲ್ಲಿ ಅತ್ಯಂತ ಬ್ಯುಸಿ ಇರುವ ನಟ ಯಾರು ಎಂಬ ಪ್ರಶ್ನೆ ಬಂದರೆ ನಿಸ್ಸಂಶಯವಾಗಿ ಡಾಲಿ ಧನಂಜಯ್ ಹೆಸರು ಕಣ್ಮುಂದೆ ಬರುತ್ತದೆ. ನಾಯಕ ನಟನಾಗಿ, ಖಳ ನಾಯಕನಾಗಿ ಕನ್ನಡ ಸೇರಿದಂತೆ, ಇತರ ಚಿತ್ರರಂಗಗಳಲ್ಲೂ ಧನಂಜಯ್ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಾಳೆ(ಆಗಸ್ಟ್ 23) ಅವರ ಜನ್ಮದಿನ. ಈ ಪ್ರಯುಕ್ತ ಅವರ ಇನ್ನೂ ಕೆಲವು ಚಿತ್ರಗಳು ಘೋಷಣೆಯಾಗುತ್ತಿದ್ದು, ಅವರ ಬತ್ತಳಿಕೆಯಲ್ಲಿ ಚಿತ್ರಗಳ ಪಟ್ಟಿ ಬೆಳೆಯತ್ತಾ ಸಾಗಿದೆ. ಸದ್ಯ ಬಂದಿರುವ ಹೊಸ ಅಪ್ಡೇಟ್ ಪ್ರಕಾರ, ಡಾಲಿ ಮಲಯಾಳಂಗೂ ಕಾಲಿಡಲಿದ್ದಾರೆ. ಹೌದು. ಕನ್ನಡ ಮತ್ತು ಮಲಯಾಳಂನಲ್ಲಿ ಏಕಕಾಲದಲ್ಲಿ ತಯಾರಾಗುತ್ತಿರುವ ‘21 ಅವರ್ಸ್’(21 Hours) ಚಿತ್ರದಲ್ಲಿ ಡಾಲಿ ಧನಂಜಯ್ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.

ಈ ಚಿತ್ರವನ್ನು ಜೈಶಂಕರ್ ಪಂಡಿತ್ ನಿರ್ದೇಶನ ಮಾಡುತ್ತಿದ್ದು, ಮಲಯಾಳಂನ ಖ್ಯಾತ ನಟ ಸುದೇವ್ ನಾಯರ್, ದುರ್ಗಾ ಕೃಷ್ಣ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಲಿದ್ದಾರೆ. ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಮಾಡಿರುವ ಚಿತ್ರತಂಡ ಚಿತ್ರಕ್ಕೆ ವಿಭಿನ್ನವಾಗಿ ‘ಟ್ವೆಂಟಿ ಒನ್ ಅವರ್ಸ್’(21 Hours) ಎಂದು ನಾಮಕರಣ ಮಾಡಿದೆ.

ಚಿತ್ರದ ಪೋಸ್ಟರ್ ಇಲ್ಲಿದೆ:

 ‘ಹೆಡ್​ಬುಷ್’ ಮೊದಲ ಟೀಸರ್ ಇಂದು ಬಿಡುಗಡೆ:

ಅಗ್ನಿ ಶ್ರೀಧರ್ ಕತೆ ಆಧಾರಿತ ಶೂನ್ಯ ನಿರ್ದೇಶನ ಮಾಡುತ್ತಿರುವ ‘ಹೆಡ್​ಬುಷ್’ ಚಿತ್ರದ ಟೀಸರ್ ಬಿಡುಗಡೆ ಮಾಡುತ್ತಿರುವುದಾಗಿ ಚಿತ್ರತಂಡ ತಿಳಿಸಿದೆ. ಜಯರಾಜ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಧನಂಜಯ್​ ಜನ್ಮದಿನಕ್ಕೆ, ಟೀಸರ್ ಮುಖಾಂತರ ಅಭಿಮಾನಿಗಳಿಗೆ ಉಡುಗೊರೆ ನೀಡಲು ಚಿತ್ರತಂಡ ಸಜ್ಜಾಗಿದೆ. ಈ ಚಿತ್ರದಲ್ಲಿ ಪಾಯಲ್ ರಜಪೂತ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಾದರಿಯ ಚಿತ್ರವಾದ ಹೆಡ್​ಬುಷ್, ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ತೆರೆಕಾಣಲಿದೆ. ಈ ಚಿತ್ರವು ಸರಣಿಯಲ್ಲಿ ಮೂಡಿಬರಲಿದ್ದು, ಈಗ ಮೊದಲ ಭಾಗದ ಚಿತ್ರೀಕರಣ ನಡೆಯುತ್ತಿದೆ. ಚಿತ್ರದ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದ್ದು, ಚರಣ್ ರಾಜ್ ಸಂಗೀತ ಸಂಯೋಜಿಸಿದ್ದಾರೆ.

ಈ ಕುರಿತು ಆನಂದ್ ಆಡಿಯೊ ಹಂಚಿಕೊಂಡ ಮಾಹಿತಿ:

ಚಂದನವನದ ಭರವಸೆಯ ನಟ ಡಾಲಿ ಧನಂಜಯ್ ಕೈಯಲ್ಲಿ ಹಲವಾರು ಚಿತ್ರಗಳಿವೆ. ‘ಪುಷ್ಪಾ’ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಮಾದರಿಯ ಸಿನಿಮಾಕ್ಕೂ ಅವರು ಕಾಲಿಡಲಿದ್ದಾರೆ. ತಮ್ಮದೇ ನಿರ್ಮಾಣ ಸಂಸ್ಥೆಯಾದ ‘ಡಾಲಿ ಪಿಕ್ಚರ್ಸ್’ ಸಂಸ್ಥೆಯ ಮೂಲಕ ಚಿತ್ರ ನಿರ್ಮಾಣಕ್ಕೂ ಅವರು ಧುಮುಕಿದ್ದಾರೆ. ಬಡವ ರಾಸ್ಕಲ್ ಚಿತ್ರದ ಜೊತೆಗೆ ‘ಹೆಡ್ ಬುಷ್’ ಚಿತ್ರಕ್ಕೆ ಧನಂಜಯ್ ಸಹ ನಿರ್ಮಾಪಕರಾಗಿದ್ದಾರೆ. ನಟ ಧನಂಜಯ್ ಈಗ ಸಾಲು ಸಾಲು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ‘ಪುಷ್ಪ- 1’ರ ಜೊತೆಗೆ, ‘ಸಲಗ’, ‘ಬೈರಾಗಿ’, ‘ತೋತಾಪುರಿ’, ‘ಆರ್ಕೆಸ್ಟ್ರಾ’, ‘ರತ್ನನ್ ಪ್ರಪಂಚ ’ ಮೊದಲಾದ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದಾರೆ.

ಇದನ್ನೂ ಓದಿ:

ಕಿಸ್​​ ಮಾಡಬೇಕೆಂದರೂ ಅಭಿಮಾನಿಗಳು ಒಪ್ಪಲ್ಲ; ಬೇಸರ ತೋಡಿಕೊಂಡ ನಟಿ

ಕುತೂಹಲ ಮೂಡಿಸಿದ ‘ಮೇಡ್ ಇನ್ ಬೆಂಗಳೂರು’ ಟೀಸರ್; ಹೊಸಬರ ಪ್ರಯತ್ನಕ್ಕೆ ಅನಂತ್‌ನಾಗ್, ಸಾಯಿಕುಮಾರ್ ಸಾಥ್

(Daali Dhananjay announces his new kannada malayalam film 21 hours)

Published On - 2:42 pm, Sun, 22 August 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ