ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ಧನಂಜಯ್ ರಾಯಭಾರಿ

Daali Dhananjay: ನಟ, ನಿರ್ಮಾಪಕ ಡಾಲಿ ಧನಂಜಯ್ ಅವರನ್ನು ಫೆಬ್ರವರಿ 29ರಿಂದ ಪ್ರಾರಂಭವಾಗುವ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯನ್ನಾಗಿ ಮಾಡಲಾಗಿದೆ.

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಡಾಲಿ ಧನಂಜಯ್ ರಾಯಭಾರಿ
Follow us
|

Updated on: Feb 28, 2024 | 11:13 PM

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ (Bengaluru international film festival 2024) ನಾಳೆ (ಫೆಬ್ರವರಿ 29) ಆರಂಭವಾಗುತ್ತಿದ್ದು, ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಸರ್ಕಾರ ಘೋಷಿಸಿದೆ. ಅಪ್ಪಟ ಸಿನಿಮಾ ಪ್ರೇಮಿಯಾಗಿರುವ ಡಾಲಿ ಧನಂಜಯ್ ಅವರನ್ನು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನೇಮಕ ಮಾಡಿರುವುದು ಅವರ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಸಹಜವಾಗಿಯೇ ಖುಷಿ ತಂದಿದೆ.

15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವವು ಫೆಬ್ರವರಿ 29ರಂದು ವಿಧಾನಸೌಧದ ಮುಂಭಾಗ ನಡೆಯುವ ಕಾರ್ಯಕ್ರಮದ ಮೂಲಕ ಉದ್ಘಾಟನೆಗೊಳ್ಳಲಿದ್ದು, ಮಾರ್ಚ್​ 7 ರವರೆಗೆ ನಡೆಯಲಿದೆ. ಈ ಬಾರಿ 50ಕ್ಕೂ ಹೆಚ್ಚು ರಾಷ್ಟ್ರಗಳಿಂದ. ಆಸ್ಕರ್ ಪ್ರಶಸ್ತಿಗೆ ನಾಮಾಂಕಿತವಾದ ಸಿನಿಮಾಗಳೂ ಸೇರಿದಂತೆ 200ಕ್ಕೂ ಹೆಚ್ಚು ಚಲನಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡಿದ್ದ ಅತ್ಯುತ್ತಮ ಚಲನಚಿತ್ರಗಳು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿ ವಿಜೇತರು, ಕಾನ್ (ಫ್ರಾನ್ಸ್), ಬರ್ಲಿನ್(ಜರ್ಮನಿ), ಕಾರ್ಲೋ ವಿವಾರಿ(ಜೆಕ್‌ರಿಪಬ್ಲಿಕ್. ಲೊಕಾರ್ನೊ (ಸ್ವಿಟ್ಸರ್ಲೆಂಡ್), ರಾಟರ್‌ಡ್ಯಾಮ್ (ನೆದ‌ಲ್ಯಾಂಡ್), ಬೂಸಾನ್ (ದಕ್ಷಿಣ ಕೊರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾಪ್ರಿಯರಿಗೆ ದೊರೆಯುತ್ತವೆ.

ಇದನ್ನೂ ಓದಿ:‘ಡಾಲಿ ಪಿಕ್ಚರ್ಸ್’ ಮೂಲಕ ಹೊಸ ಸುದ್ದಿ ನೀಡಿದ ಡಾಲಿ ಧನಂಜಯ್​

ಏಷಿಯನ್ ಸ್ಪರ್ಧಾ ವಿಭಾಗ, ಚಿತ್ರಭಾರತಿ-ಭಾರತೀಯ ಸ್ಪರ್ಧಾ ವಿಭಾಗ, ಕನ್ನಡ ಸಿನಿಮಾ ಸ್ಪರ್ಧಾ ವಿಭಾಗ, ಸಮಕಾಲೀನ ವಿಶ್ವ ಸಿನಿಮಾ, ಕನ್ನಡ ಜನಪ್ರಿಯ ಸಿನಿಮಾ, ವಿಮರ್ಶಕರ ವಾರ: ಅಂತಾರಾಷ್ಟ್ರೀಯ ಚಲನಚಿತ್ರ ವಿಮರ್ಶಕರ ಒಕ್ಕೂಟ (ಫಿಪ್ರಸಿ) ಆಯ್ಕೆ ಮಾಡಿದ ಏಳು ವಿಶೇಷ ಸಮಕಾಲೀನ ಚಲನಚಿತ್ರಗಳ ಪ್ರದರ್ಶನ, ಜೀವನಾಧಾರಿತ ಚಿತ್ರಗಳು, ದೇಶ ಕೇಂದ್ರಿತ: ಜರ್ಮನಿಯ ಚಲನಚಿತ್ರಗಳ ವಿಶೇಷ ಪ್ರದರ್ಶನ, ಮಹಿಳಾ ಶಕ್ತಿ- ಮಹಿಳಾ ನಿರ್ದೇಶಕರ ಚಿತ್ರಗಳ ಪ್ರದರ್ಶನಗಳು ನಡೆಯಲಿವೆ. ಇದರ ಜೊತೆಗೆ ಭಾರತದ ಹಲವು ಉಪಭಾಷೆಗಳ ಸಿನಿಮಾಗಳ ಪ್ರದರ್ಶನವೂ ಆಗಲಿದೆ. ಕನ್ನಡ ಉಪಭಾಷೆಗಳಾದ ತುಳು, ಕೊಡವ, ಬಂಜಾರ, ಅರೆಭಾಷೆ, ಮಾರ್ಕೋಡಿ ಅಲ್ಲದೆ, ಈಶಾನ್ಯ ಭಾರತದ ಕರ್ಬಿ, ರಾಬಾ, ಗಾಲೋ ಮತ್ತು ವಾಕೆ ಈ ಭಾಷೆಯ ಸಿನಿಮಾಗಳ ಪ್ರದರ್ಶನ ಆಗಲಿವೆ. ಪುನರಾವಲೋಕನ ಇರಾನಿನ ನಿರ್ದೇಶಕ ಅಬ್ಬಾಸ್ ಕಿರೋಸ್ತಮಿ ಮತ್ತು ಹಿರಿಯ ನಿರ್ದೇಶಕರಾದ ಮೃಣಾಲ್‌ಸೇನ್, ಜೊತೆಗೆ ಶತಮಾನೋತ್ಸವ ಸ್ಮರಣೆಯೂ ಇರಲಿದೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಹಲವು ವೈಶಿಷ್ಟ್ಯಗಳಿವೆ. ಕನ್ನಡ ಚಲನಚಿತ್ರರಂಗಕ್ಕೆ 90 ವರ್ಷ ತುಂಬಲಿದ್ದು, ಈ ಸಂಭ್ರಮಾಚರಣೆಯನ್ನು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಆಚರಿಸಲಾಗುತ್ತಿದೆ. ಕನ್ನಡ ಚಿತ್ರಗಳು ಪ್ರಸ್ತುತ ಸಂದರ್ಭದಲ್ಲಿ ವಿಶ್ವದ ಎಲ್ಲ ಕಡೆ ಜನಪ್ರಿಯವಾಗುತ್ತಿದ್ದು ಕನ್ನಡ ಚಿತ್ರರಂಗ ನಡೆದು ಬಂದ ದಾರಿ, ಹಾಗೂ ಕನ್ನಡದಲ್ಲಿ ಮೈಲುಗಲ್ಲು ಸ್ಥಾಪಿಸಿದ ಚಾರಿತ್ರಿಕ, ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿವಾದಿಸುವ ವಿಶೇಷ ಚಲನಚಿತ್ರಗಳ ಉತ್ಸವವನ್ನು ಇದೇ ಸಂದರ್ಭದಲ್ಲಿ ಏರ್ಪಡಿಸಲಾಗಿದೆ. ಅಲ್ಲದೆ ಕರ್ನಾಟಕ ಎಂದು ನಾಮಕರಣಗೊಂಡ ನೆನಪಿಗೆ ಕರ್ನಾಟಕ 50 ಸುವರ್ಣ ಸಂಭ್ರಮ ಎಂಬ ಕಾರ್ಯಕ್ರಮದ ಮೂಲಕ ಕರ್ನಾಟಕದ ಹಿರಿಮೆಯನ್ನು ಸಾರುವ ಕಾರ್ಯಕ್ರಮ ಸಂಯೋಜಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!