Dhananjay Birthday: ನ್ಯೂಯಾರ್ಕ್​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಮಿಂಚಿದ ಡಾಲಿ; ಬರ್ತ್​ಡೇಗೆ ಹೊಸ ಸಿನಿಮಾ ಘೋಷಣೆ

ಅಮೆರಿಕದ ಪ್ರಮುಖ ನಗರ ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್ ಬೀದಿ ಸಖತ್ ಫೇಮಸ್. ರಂಗು ರಂಗಾಗಿರುವ ಈ ಬೀದಿಯಲ್ಲಿ ಡಾಲಿಯ ವಿಡಿಯೋ ಪ್ರದರ್ಶನಗೊಂಡಿದೆ. ಇದನ್ನು ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಎಲ್ಲರೂ ಡಾಲಿಗೆ ವಿಶ್ ತಿಳಿಸುತ್ತಿದ್ದಾರೆ.

Dhananjay Birthday: ನ್ಯೂಯಾರ್ಕ್​ನ ಟೈಮ್ಸ್​ ಸ್ಕ್ವೇರ್​ನಲ್ಲಿ ಮಿಂಚಿದ ಡಾಲಿ; ಬರ್ತ್​ಡೇಗೆ ಹೊಸ ಸಿನಿಮಾ ಘೋಷಣೆ
ಧನಂಜಯ್
Follow us
ರಾಜೇಶ್ ದುಗ್ಗುಮನೆ
|

Updated on:Aug 23, 2023 | 9:26 AM

ನಟ ಡಾಲಿ ಧನಂಜಯ್​ಗೆ (Daali Dhananjay) ಇಂದು (ಆಗಸ್ಟ್ 23) ಬರ್ತ್​ಡೇ ಸಂಭ್ರಮ. ಮಧ್ಯರಾತ್ರಿಯಿಂದಲೇ ಅವರ ಬರ್ತ್​ಡೇ ಆಚರಣೆ ಆರಂಭ ಆಗಿದೆ. ಅಭಿಮಾನಿಗಳು ಅದ್ದೂರಿಯಾಗಿ ಡಾಲಿಯ ಜನ್ಮದಿನ ಆಚರಿಸುತ್ತಿದ್ದಾರೆ. ಸೆಲೆಬ್ರಿಟಿಗಳು, ಅಭಿಮಾನಿಗಳು, ಆಪ್ತರು ಹಾಗೂ ಕುಟುಂಬದವರು ಡಾಲಿಗೆ ಬರ್ತ್​ಡೇ ವಿಶ್ ತಿಳಿಸುತ್ತಿದ್ದಾರೆ. ಬರ್ತ್​ಡೇಗೆ ಹಲವು ಸರ್​ಪ್ರೈಸ್ ಗಿಫ್ಟ್​ ಸಿಕ್ಕಿದೆ. ಡಾಲಿ ವಿಡಿಯೋ ಟೈಮ್ಸ್​​ ಸ್ಕ್ವೇರ್​ನಲ್ಲಿ ಪ್ರದರ್ಶನಗೊಂಡಿದೆ. ಜೊತೆಗೆ ಅವರ ಹೊಸ ಸಿನಿಮಾಗಳು ಘೋಷಣೆ ಆಗುತ್ತಿವೆ. ‘ಉತ್ತರಕಾಂಡ’ (Uttarakaanda ) ಚಿತ್ರದಲ್ಲಿನ ಲುಕ್ ರಿವೀಲ್ ಮಾಡಲಾಗಿದೆ.

ಟೈಮ್ಸ್​ ಸ್ಕ್ವೇರ್​ನಲ್ಲಿ ಡಾಲಿ

ಅಮೆರಿಕದ ಪ್ರಮುಖ ನಗರ ನ್ಯೂಯಾರ್ಕ್​​ನ ಟೈಮ್ಸ್​ ಸ್ಕ್ವೇರ್ ಬೀದಿ ಸಖತ್ ಫೇಮಸ್. ರಂಗು ರಂಗಾಗಿರುವ ಈ ಬೀದಿಯಲ್ಲಿ ಡಾಲಿಯ ವಿಡಿಯೋ ಪ್ರದರ್ಶನಗೊಂಡಿದೆ. ಇದನ್ನು ಸೆರೆಹಿಡಿದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗಿದೆ. ಎಲ್ಲರೂ ಡಾಲಿಗೆ ವಿಶ್ ತಿಳಿಸುತ್ತಿದ್ದಾರೆ.

ಹೊಸ ಸಿನಿಮಾ ಘೋಷಣೆ..

ಡಾಲಿ ಜನ್ಮದಿನಕ್ಕೆ ಹೊಸ ಹೊಸ ಸಿನಿಮಾ ಘೋಷಣೆ ಆಗುತ್ತಿದೆ. ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾ ಘೋಷಣೆ ಆಗಿದೆ. ಈ ಚಿತ್ರವನ್ನು ಸತ್ಯ ರಾಯಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ‘ಬಡವ ರಾಸ್ಕಲ್’ ಟೀಂ ಈ ಚಿತ್ರಕ್ಕಾಗಿ ಒಂದಾಗಿದೆ ಅನ್ನೋದು ವಿಶೇಷ. ‘ಉತ್ತರಕಾಂಡ’ ಚಿತ್ರದಲ್ಲಿ ಡಾಲಿ ಲುಕ್ ಬಿಡುಗಡೆ ಮಾಡಲಾಗಿದೆ. ಗಬ್ರು ಸತ್ಯನಾಗಿ ಅವರು ಆಗಮಿಸಿದ್ದಾರೆ. ಕೆಆರ್​ಜಿ ಸ್ಟುಡಿಯೋ ಬ್ಯಾನರ್ ಮೂಲಕ ಕಾರ್ತಿಕ್ ಗೌಡ, ಯೋಗಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರೋಹಿತ್ ಪದಕಿ ಚಿತ್ರವನ್ನು ನಿರ್ದೇಶಿಸುತ್ತಿದದ್ದಾರೆ.

ಅಭಿಮಾನಿಗಳ ಸೆಲೆಬ್ರೇಷನ್

ಡಾಲಿ ಜನ್ಮದಿನವನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸುತ್ತಿದ್ದಾರೆ. ನಂದಿ ಲಿಂಕ್ ಗ್ರೌಂಡ್​ನಲ್ಲಿ ಅಭಿಮಾನಿಗಳೊಟ್ಟಿಗೆ ಧನಂಜಯ್ ಸೆಲೆಬ್ರೇಷನ್​ನಲ್ಲಿ ಭಾಗಿ ಆಗುತ್ತಿದ್ದಾರೆ. ಇದಕ್ಕಾಗಿ ಅದ್ದೂರಿ ವ್ಯವಸ್ಥೆ ಮಾಡಲಾಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ಡಾಲಿ ಧನಂಜಯ್​ಗೆ ಬರ್ತ್​ಡೇ ಸಂಭ್ರಮ; ಮಧ್ಯರಾತ್ರಿಯಿಂದಲೇ ಶುರುವಾಗಿದೆ ಸಂಭ್ರಮಾಚರಣೆ

‘ಪುಷ್ಪ 2’ ಚಿತ್ರದ ಪೋಸ್ಟರ್

ಡಾಲಿ ‘ಪುಷ್ಪ 2’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅವರು ಜಾಲಿ ರೆಡ್ಡಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚೆಗೆ ಫಹಾದ್ ಫಾಸಿಲ್ ಬರ್ತ್​ಡೇಗೆ ಪೋಸ್ಟರ್ ರಿಲೀಸ್ ಮಾಡಲಾಗಿತ್ತು. ಅದೇ ರೀತಿ ಧನಂಜಯ್ ಬರ್ತ್​ಡೇಗೂ ಪೋಸ್ಟರ್ ರಿಲೀಸ್ ಮಾಡಲಿ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Wed, 23 August 23

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್