ನಟ ಡಾಲಿ ಧನಂಜಯ್ (Daali Dhananjay) ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ಹೊಯ್ಸಳ’ ಸಿನಿಮಾ (Hoysala Movie) ಹೆಚ್ಚು ನಿರೀಕ್ಷೆ ಮೂಡಿಸಿದೆ. ಆ ನಿರೀಕ್ಷೆಯನ್ನು ದುಪ್ಪಟ್ಟು ಮಾಡುವ ರೀತಿಯಲ್ಲಿ ಹೊಸ ಟೀಸರ್ ಬಿಡುಗಡೆ ಮಾಡಲಾಗಿದೆ. ಕಿಚ್ಚ ಸುದೀಪ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ಕಾಲಿವುಡ್ ಸ್ಟಾರ್ ಕಾರ್ತಿ, ಟಾಲಿವುಡ್ ನಟ ಅಡಿವಿ ಶೇಷ್, ಖ್ಯಾತ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಸೋಶಿಯಲ್ ಮೀಡಿಯಾದಲ್ಲಿ ‘ಹೊಯ್ಸಳ’ ಚಿತ್ರದ ಟೀಸರ್ (Hoysala Movie Teaser) ಹಂಚಿಕೊಂಡಿದ್ದಾರೆ. ‘ಒಳ್ಳೆಯವ್ನಾ, ಕೆಟ್ಟವನಾ.. ಜಡ್ಜ್ಮೆಂಟ್ಗೆ ಸಿಗವಲ್ದು.. ಆದರೆ ಮಂದಿಗೆ ಬಾಳ ಫೇವರೇಟ್ ಅದಾನ’ ಎನ್ನುವ ಡೈಲಾಗ್ ಮೂಲಕ ಡಾಲಿ ಧನಂಜಯ್ ಅವರು ಪಾತ್ರವನ್ನು ಪರಿಚಯಿಸಲಾಗಿದೆ.
‘ಹೊಯ್ಸಳ’ ಸಿನಿಮಾದಲ್ಲಿ ಡಾಲಿ ಧನಂಜಯ್ ಅವರು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಗುರುದೇವ್ ಹೊಯ್ಸಳ ಎಂಬುದು ಅವರ ಪಾತ್ರದ ಹೆಸರು. ಈ ಸಿನಿಮಾದಲ್ಲಿ ಭರ್ಜರಿ ಫೈಟಿಂಗ್ ದೃಶ್ಯಗಳಿವೆ ಎಂಬುದಕ್ಕೆ ಟೀಸರ್ನಲ್ಲಿ ಸುಳಿವು ಸಿಕ್ಕಿದೆ. ಧನಂಜಯ್ ಅಭಿಮಾನಿಗಳಿಗೆ ಈ ಟೀಸರ್ ಇಷ್ಟ ಆಗಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಇದು 10 ಲಕ್ಷಕ್ಕೂ ಅಧಿಕ ವೀವ್ಸ್ ಪಡೆದುಕೊಂಡಿದೆ.
Good or Bad, He is always People’s Favorite?
Presenting the New cop in town “Gurudev Hoysala”??♂️#EeSalaHoysala“A Glimpse of Gurudev”:https://t.co/35OzFneyIy#Hoysala @Dhananjayaka @VKiragandur @KRG_Studios @amrutha_iyengar @vijaycinephilia @Karthik1423 @yogigraj @AJANEESHB pic.twitter.com/SzyErY0yVY
— KRG Studios (@KRG_Studios) February 5, 2023
ಕೆ.ಆರ್.ಜಿ. ಸ್ಟುಡಿಯೋಸ್ ನಿರ್ಮಾಣದ ‘ಹೊಯ್ಸಳ’ ಚಿತ್ರವನ್ನು ವಿಜಯ್ ಕಿರಗಂದೂರು ಅವರು ಅರ್ಪಿಸುತ್ತಿದ್ದಾರೆ. ಕಾರ್ತಿಕ್ ಹಾಗೂ ಯೋಗಿ ಜಿ. ರಾಜ್ ಅವರ ನಿರ್ಮಾಣದಲ್ಲಿ, ವಿಜಯ್ ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ.
ಇದನ್ನೂ ಓದಿ: Uttarakaanda: ರಮ್ಯಾ-ಡಾಲಿ ಧನಂಜಯ್ ಜೋಡಿಯ ‘ಉತ್ತರಕಾಂಡ’ ಚಿತ್ರಕ್ಕೆ ಪೂಜೆ; ಇಲ್ಲಿವೆ ಮಸ್ತ್ ಫೋಟೋಗಳು
ಕನ್ನಡ ಚಿತ್ರರಂಗದಲ್ಲಿ ಡಾಲಿ ಧನಂಜಯ ಮತ್ತು ನಟಿ ಅಮೃತಾ ಅಯ್ಯಂಗಾರ್ ಉತ್ತಮ ಜೋಡಿ ಎನಿಸಿಕೊಂಡಿದ್ದಾರೆ. ‘ಪಾಪ್ ಕಾರ್ನ್ ಮಂಕಿ ಟೈಗರ್’ ಮತ್ತು ‘ಬಡವ ರಾಸ್ಕಲ್’ ಸಿನಿಮಾಗಳಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡ ಈ ಜೋಡಿಯನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಇಬ್ಬರ ನಟನೆಗೆ ಜನರು ಮೆಚ್ಚುಗೆ ಸೂಚಿಸಿದ್ದಾರೆ. ಈಗ ಅವರು ‘ಹೊಯ್ಸಳ’ ಸಿನಿಮಾದಲ್ಲಿ ಮೂರನೇ ಬಾರಿ ಜೊತೆಯಾಗಿ ನಟಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ.
ಇದನ್ನೂ ಓದಿ: ‘ಇನ್ಮುಂದೆ ಯೋಚಿಸಿ ಸಿನಿಮಾ ಮಾಡ್ತೀನಿ’; ಡಾಲಿ ಧನಂಜಯ್ ಹೀಗೆ ಹೇಳಿದ್ದೇಕೆ?
ಮಾರ್ಚ್ 30ರಂದು ‘ಹೊಯ್ಸಳ’ ಬಿಡುಗಡೆ ಆಗಲಿದೆ. ಡಾಲಿ ಧನಂಜಯ್ ಅವರು ನಟಿಸುತ್ತಿರುವ 25ನೇ ಸಿನಿಮಾ ಇದು. ಹಾಗಾಗಿ ಅವರ ಅಭಿಮಾನಿಗಳು ಈ ಚಿತ್ರದ ಮೇಲೆ ವಿಶೇಷವಾದ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಅವರು ಪೊಲೀಸ್ ಆಗಿ ಕಾಣಿಸಿಕೊಳ್ಳುತ್ತಿರುವುದರಿಂದ ಕೌತುಕ ಜೋರಾಗಿದೆ.
ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಕಾರ್ತಿಕ್ ಎಸ್. ಛಾಯಾಗ್ರಹಣ, ದೀಪು ಎಸ್. ಕುಮಾರ್ ಸಂಕಲನ ಹಾಗೂ ಮಾಸ್ತಿ ಅವರು ಸಂಭಾಷಣೆಯ ಜವಾಬ್ದಾರಿ ನಿಭಾಯಿಸಿದ್ದಾರೆ. ಅಚ್ಯುತ್ ಕುಮಾರ್, ನವೀನ್ ಶಂಕರ್, ಅವಿನಾಶ್, ರಾಜೇಶ್ ನಟರಂಗ, ನಾಗಭೂಷಣ್ ಮುಂತಾದ ಪ್ರತಿಭಾವಂತ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:44 pm, Sun, 5 February 23