‘ಅಣ್ಣ ಫ್ರಮ್ ಮೆಕ್ಸಿಕೋ’ಗಾಗಿ ಒಂದಾದ ‘ಬಡವ ರಾಸ್ಕಲ್’ ತಂಡ

Daali Dhananjay: ‘ಬಡವ ರಾಸ್ಕಲ್’ ಸಿನಿಮಾದ ತಂಡ ಮತ್ತೆ ಒಂದಾಗುತ್ತಿದೆ, ನಟ ಡಾಲಿ ಧನಂಜಯ್ ಹಾಗೂ ಶಂಕರ್ ಜೋಡಿ ಈಗ ‘ಅಣ್ಣ ಫ್ರಮ್ ಮೆಕ್ಸಿಕೋ’ ಹೆಸರಿನ ಸಿನಿಮಾ ಪ್ರಾರಂಭಿಸಿದ್ದಾರೆ.

‘ಅಣ್ಣ ಫ್ರಮ್ ಮೆಕ್ಸಿಕೋ’ಗಾಗಿ ಒಂದಾದ ‘ಬಡವ ರಾಸ್ಕಲ್’ ತಂಡ
ಡಾಲಿ ಧನಂಜಯ್
Follow us
ಮಂಜುನಾಥ ಸಿ.
|

Updated on: Dec 16, 2023 | 7:17 PM

ಧನಂಜಯ್ (Dhananjay) ನಟಿಸಿ, ನಿರ್ಮಾಣ ಮಾಡಿದ್ದ ‘ಬಡವ ರಾಸ್ಕಲ್’ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ತಂಡ ಹೊಸ ಸಿನಿಮಾಕ್ಕಾಗಿ ಮತ್ತೆ ಒಂದಾಗಿದೆ. ‘ಬಡವ ರಾಸ್ಕಲ್’ ತಂಡ ‘ಅಣ್ಣ ಫ್ರಮ್ ಮೆಕ್ಸಿಕೋ’ ಹೆಸರಿನ ಹೊಸ ಸಿನಿಮಾ ನಿರ್ಮಾಣದಲ್ಲಿ ತೊಡಗಿದೆ. ಡಾಲಿ ಧನಂಜಯ್ ಜನ್ಮದಿನಕ್ಕೆ ಸಣ್ಣದೊಂದು ಝಲಕ್ ಬಿಟ್ಟು ಥ್ರಿಲ್ ಹೆಚ್ಚಿಸಿರುವ ‘ಅಣ್ಣ ಫ್ರಮ್ ಮೆಕ್ಸಿಕೋ’ ಚಿತ್ರತಂಡ ಈಗ ಸದ್ದಿಲ್ಲದೇ ಮುಹೂರ್ತ ಮುಗಿಸಿ ಚಿತ್ರೀಕರಣಕ್ಕೆ ತಯಾರಾಗಿದೆ.

ಬೆಂಗಳೂರಿನ ಬಂಡೆ ಮಹಾಕಾಳಮ್ಮನ ದೇಗುಲದಲ್ಲಿ‘ಅಣ್ಣ ಫ್ರಮ್ ಮೆಕ್ಸಿಕೋ’ ಸಿನಿಮಾದ ಮುಹೂರ್ತ ನೆರವೇರಿದೆ. ಈ ಸಿನಿಮಾ ಮೂಲಕ ಧನಂಜಯ್ ಹಾಗೂ ನಿರ್ದೇಶಕ ಶಂಕರ್ ಎರಡನೇ ಬಾರಿ ಒಟ್ಟಾಗಿ ಕೆಲಸ ಮಾಡಲಿದ್ದಾರೆ. ರಾಯಲ್ ಸ್ಟುಡಿಯೋಸ್​ನ ಪಾಲುದಾರರಾದ ಜಾನ್ವಿ ರಾಯಲ ಕ್ಲ್ಯಾಪ್ ಮಾಡಿದ್ದು, ನಿರ್ದೇಶಕ ಶಂಕರ್ ಗುರು ತಾಯಿ ಕ್ಯಾಮೆರಾಗೆ ಚಾಲನೆ ನೀಡಿದರು. ಸ್ನೇಹಿತ ಹಾಗು ಹಿತೈಷಿಗಳಾದ ಮೃಣಾಲ್ ಹೆಬ್ಬಾಳ್ಕರ್ ರವರು ಸಿನಿಮಾದ ಮುಹೂರ್ತಕ್ಕೆ ಆಗಮಿಸಿ ಶುಭ ಹಾರೈಸಿದ್ದಾರೆ.

2021ರಲ್ಲಿ ತೆರೆಗೆ ಬಂದ ಬಡವ ರಾಸ್ಕಲ್ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಚಿತ್ರದ ಮೂಲಕ ಧನಂಜಯ್ ನಿರ್ಮಾಪಕರಾಗಿ ಬಡ್ತಿ ಪಡೆದಿದ್ದರು. ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸಿ ನಟಿಸಿದ್ದ ಬಡವ ರಾಸ್ಕಲ್ ಚಿತ್ರವನ್ನು ಶಂಕರ್ ಗುರು ನಿರ್ದೇಶಿಸಿದ್ದರು. ಮೊದಲ ಹೆಜ್ಜೆಯಲ್ಲಿಯೇ ಗೆದ್ದಿದ್ದ ಶಂಕರ್ ಗುರು ಈಗ ಮತ್ತೊಂದು ಚೆಂದದ ಕಥೆ ಮಾಡಿ ಡಾಲಿ ಫ್ಯಾನ್ಸ್ ರಂಜಿಸಲು ಅಣಿಯಾಗಿದ್ದಾರೆ.

ಇದನ್ನೂ ಓದಿ:Shivarajkumar: ರಮ್ಯಾ, ಡಾಲಿ ಧನಂಜಯ್​ ಜೊತೆ ‘ಉತ್ತರಕಾಂಡ’ ಚಿತ್ರತಂಡಕ್ಕೆ ಸೇರ್ಪಡೆ ಆದ ಶಿವರಾಜ್​ಕುಮಾರ್​

‘ಅಣ್ಣ ಫ್ರಮ್ ಮೆಕ್ಸಿಕೋ’ ಶಂಕರ್ ಗುರು ನಿರ್ದೇಶನದ ಎರಡನೇ ಸಿನಿಮಾ. ಪಕ್ಕ ಆಕ್ಷನ್ ಫ್ಯಾಮಿಲಿ ಎಂಟರ್ ಟೈನರ್ ಚಿತ್ರವಾಗಿದ್ದು, ದಿ ರಾಯಲ್ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ ಈ ಸಿನಿಮಾ ನಿರ್ಮಿಸುತ್ತಿದ್ದಾರೆ. ಐರಾ ಫಿಲ್ಮ್ಸ್ ಕೂಡ ಸಿನಿಮಾ ನಿರ್ಮಾಣಕ್ಕೆ ಕೈ ಜೋಡಿಸಿದೆ. ಈ ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡುತ್ತಿದ್ದು. ಜನವರಿ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ, ಮೆಕ್ಸಿಕೋ ಸೇರಿದಂತೆ ಹಲವೆಡೆ ಚಿತ್ರೀಕರಣ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇನ್ನು, ಡಾಲಿ ಧನಂಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಉತ್ತರಕಾಂಡ, ಪುಷ್ಪ-2, ಝೀಬ್ರಾ ಹಾಗೂ ‘ಅಣ್ಣ ಫ್ರಮ್ ಮೆಕ್ಸಿಕೊ’ ಸಿನಿಮಾದಲ್ಲಿ ಧನಂಜಯ್ ನಟಿಸುತ್ತಿದ್ದಾರೆ. ಜೊತೆಗೆ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ಹೊಸ ಪ್ರತಿಭೆಗಳಿಗೆ ಸಿನಿಮಾ ನಿರ್ಮಾಣದಲ್ಲಿಯೂ ತೊಡಗಿಸಿಕೊಂಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ