Dhananjay: ‘ಆ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ಡಾಲಿ ಧನಂಜಯ್

‘ನಮ್ಮ ಚಿತ್ರದಲ್ಲಿ ಧನಂಜಯ್ ಅತಿಥಿ ಪಾತ್ರ ಮಾಡುತ್ತಿದ್ದಾರೆ’ ಎಂದು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಚಿತ್ರತಂಡದವರು ಘೋಷಿಸಿದ್ದರು. ಈಗ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Dhananjay: ‘ಆ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ’; ಸ್ಪಷ್ಟನೆ ನೀಡಿದ ಡಾಲಿ ಧನಂಜಯ್
ಧನಂಜಯ್
Follow us
ರಾಜೇಶ್ ದುಗ್ಗುಮನೆ
|

Updated on: May 05, 2023 | 10:18 AM

ನಟ ಡಾಲಿ ಧನಂಜಯ್ (Dhananjay) ಅವರು ಅನೇಕ ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಈಗ ಧನಂಜಯ್ ಅವರ ಕಡೆಯಿಂದ ಒಂದು ಸ್ಪಷ್ಟನೆ ಸಿಕ್ಕಿದೆ. ಅವರು ‘ಲಕ್’ ಹೆಸರಿನ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಬೇಕಿತ್ತು. ಆದರೆ, ಅವರು ಈಗ ಚಿತ್ರದಲ್ಲಿ ನಟಿಸುತ್ತಿಲ್ಲ. ಈ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಅಂದಹಾಗೆ ಇದಕ್ಕೆ ಕಾರಣ ಏನು ಎಂಬುದನ್ನು ಧನಂಜಯ್ ಹೇಳಿಲ್ಲ. ಇತ್ತೀಚೆಗೆ ಅವರ ನಟನೆಯ ‘ಹೊಯ್ಸಳ’ ಸಿನಿಮಾ (Hoysala Movie) ರಿಲೀಸ್ ಆಗಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯಿತು.

‘ಲಕ್’ ಚಿತ್ರದಲ್ಲಿ ಮಂಜು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಹರೀಶ್ ನಿರ್ದೇಶನ ಮಾಡುತ್ತಿದ್ದು, ವಿಜಯ್ ಹರಿತ್ಸ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ ಎಂದು ಚಿತ್ರತಂಡದಿಂದಲೇ ಘೋಷಣೆ ಆಗಿತ್ತು. ‘ನಮ್ಮ ಚಿತ್ರದಲ್ಲಿ ಧನಂಜಯ್ ಅತಿಥಿ ಪಾತ್ರ ಮಾಡುತ್ತಿದ್ದಾರೆ’ ಎಂದು ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಚಿತ್ರತಂಡದವರು ಘೋಷಿಸಿದ್ದರು. ಈಗ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಧನಂಜಯ್ ಮಾತನಾಡಿದ್ದಾರೆ. ‘ಲಕ್ ಚಿತ್ರದ ನಾಯಕ ಮತ್ತು ನಿರ್ಮಾಪಕ ಸ್ಮೈಲ್ ಮಂಜು ಜೊತೆ ಒಳ್ಳೆಯ ಗೆಳೆತನ ಇದೆ. ನಾವಿಬ್ಬರೂ ಒಳ್ಳೆಯ ಸ್ನೇಹಿತರು. ಅವರ ಪ್ರಯತ್ನಗಳಿಗೆ ನನ್ನ ಬೆಂಬಲ ಇರುತ್ತದೆ. ಲಕ್ ಚಿತ್ರದ ಪೋಸ್ಟರ್ ರಿಲೀಸ್ ಮಾಡಿದ್ದೆ. ಆದರೆ, ನನಗೆ ಅವರ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಲು ಸಾಧ್ಯವಾಗುತ್ತಿಲ್ಲ. ಈ ವಿಷಯವನ್ನು ಚಿತ್ರತಂಡದವರಿಗೂ ಮನವರಿಕೆ ಮಾಡಿಕೊಟ್ಟಿದ್ದೇನೆ. ಲಕ್ ಚಿತ್ರದಲ್ಲಿ ನಾನು ನಟಿಸುತ್ತಿಲ್ಲ ಎಂದು ಈ ಮೂಲಕ ಮತ್ತೊಮ್ಮೆ ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಧನಂಜಯ್ ಪಿಯುಸಿಯಲ್ಲಿ ತೆಗೆದ ಅಂಕ ಎಷ್ಟು? ‘ವೀಕೆಂಡ್ ವಿತ್ ರಮೇಶ್’​ನಲ್ಲಿ ಮಾಹಿತಿ ರಿವೀಲ್

ಧನಂಜಯ್ ನಟನೆಯ ‘ಗುರುದೇವ್ ಹೊಯ್ಸಳ’ ಸಿನಿಮಾ ರಿಲೀಸ್ ಆಗಿ ಯಶಸ್ಸು ಕಂಡಿತು. ಈ ಚಿತ್ರವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ ನಿರ್ಮಾಣ ಮಾಡಿದ್ದರು. ಸಿನಿಮಾ ಗೆದ್ದ ಬಳಿಕ ಧನಂಜಯ್​ಗೆ ದುಬಾರಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು ನಿರ್ಮಾಪಕರು. ಈ ಫೋಟೋ ವೈರಲ್ ಆಗಿತ್ತು. ಅಮೃತಾ ಅಯ್ಯಂಗಾರ್ ಅವರು ಈ ಚಿತ್ರದಲ್ಲಿ ನಾಯಕಿ ಪಾತ್ರ ಮಾಡಿದ್ದರು. ಈಗ ಸಿನಿಮಾ ಒಟಿಟಿಯಲ್ಲೂ ರಿಲೀಸ್ ಆಗಿದೆ. ಅಮೇಜಾನ್ ಪ್ರೈಮ್ ವಿಡಿಯೋ ಮೂಲಕ ಸಿನಿಮಾ ಪ್ರಸಾರ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ