AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗುವಿನ ಫೋಟೋ ಹಂಚಿಕೊಂಡು ‘ಮದರ್ ಪ್ರಾಮಿಸ್’ ಎಂದ ಡಾಲಿ ಧನಂಜಯ್

ಸ್ಯಾಂಡಲ್‌ವುಡ್ ನಟ ‘ಡಾಲಿ’ ಧನಂಜಯ್ ತಂದೆಯಾದ ಸಂಭ್ರಮದಲ್ಲಿದ್ದು, ತಮ್ಮ ಮುದ್ದಾದ ಗಂಡು ಮಗುವಿನ ಮೊದಲ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಶೇಷವಾಗಿ, ಮಗುವಿನೊಂದಿಗಿನ ಫೋಟೋದಲ್ಲಿ ‘ಮದರ್ ಪ್ರಾಮಿಸ್’ ಎಂದು ಬರೆದಿರುವ ಶರ್ಟ್ ಧರಿಸುವ ಮೂಲಕ ತಮ್ಮ ಮುಂಬರುವ ಚಿತ್ರದ ಪ್ರಚಾರವನ್ನೂ ವಿಭಿನ್ನವಾಗಿ ಮಾಡಿದ್ದಾರೆ. 2025ರ ಫೆಬ್ರವರಿಯಲ್ಲಿ ಧನ್ಯಾ ಜೊತೆ ದಾಂಪತ್ಯಕ್ಕೆ ಕಾಲಿಟ್ಟಿದ್ದ ನಟನ ಮನೆಗೆ ಈಗ ಹೊಸ ಅತಿಥಿಯ ಆಗಮನವಾಗಿದೆ.

ಮಗುವಿನ ಫೋಟೋ ಹಂಚಿಕೊಂಡು ‘ಮದರ್ ಪ್ರಾಮಿಸ್’ ಎಂದ ಡಾಲಿ ಧನಂಜಯ್
ಧನಂಜಯ್ Image Credit source: Dhananjay Instagram
ರಾಜೇಶ್ ದುಗ್ಗುಮನೆ
|

Updated on: Jul 06, 2026 | 8:40 AM

Share

ಮುಖ್ಯಾಂಶಗಳು

  • ಮಗುವಿನ ಫೋಟೋ ಜೊತೆ ಹೊಸ ಚಿತ್ರದ ಪ್ರಚಾರ
  • ಡಾಲಿ ಧನಂಜಯ್ ಅವರ ‘ಮದರ್ ಪ್ರಾಮಿಸ್’ ಶರ್ಟ್ ಸ್ಟೈಲ್ ಸಖತ್ ವೈರಲ್
  • ಮಗುವಿನ ಆಗಮನದಿಂದ ಧನಂಜಯ್-ಧನ್ಯಾ ಬದುಕಿನಲ್ಲಿ ಡಬಲ್ ಸಂಭ್ರಮ

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ಡಾಲಿ ಧನಂಜಯ್ (Dhananjay) ಇತ್ತೀಚೆಗೆ ತಂದೆಯಾಗಿ ಬಡ್ತಿ ಪಡೆದಿದ್ದಾರೆ. ಅವರ ಪತ್ನಿ ಧನ್ಯಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದು, ಇದೀಗ ಧನಂಜಯ್ ತಮ್ಮ ಮುದ್ದಾದ ಮಗುವಿನ ಮೊದಲ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಗುವನ್ನು ಮಲಗಿಸಿ ಆಡಿಸುತ್ತಿರೋ ಚಿತ್ರವನ್ನು ಪೋಸ್ಟ್ ಮಾಡಿರುವ ಅವರು, ತಮ್ಮ ಅಭಿಮಾನಿಗಳೊಂದಿಗೆ ಈ ಸಂತಸದ ಕ್ಷಣವನ್ನು ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ ಈ ಫೋಟೋದಲ್ಲಿ ಧನಂಜಯ್ ಧರಿಸಿರುವ ಶರ್ಟ್ ಎಲ್ಲರ ಗಮನ ಸೆಳೆಯುತ್ತಿದೆ. ಆ ಕಪ್ಪು ಬಣ್ಣದ ಶರ್ಟ್ ಮೇಲೆ ‘ಮದರ್ ಪ್ರಾಮಿಸ್’ ಎಂದು ಬರೆಯಲಾಗಿದೆ. ತಮ್ಮ ಮುಂಬರುವ ಹೊಸ ಸಿನಿಮಾದ ಪ್ರಚಾರಕ್ಕಾಗಿ ಅವರು ಈ ವಿಭಿನ್ನ ಶರ್ಟ್ ಧರಿಸಿದ್ದು, ಮಗುವಿನ ಆಗಮನದ ಜೊತೆಗೇ ಸಿನಿಮಾದ ಪ್ರಚಾರವನ್ನೂ ಸಖತ್ ಆಗಿಯೇ ಮಾಡುತ್ತಿದ್ದಾರೆ. ತಂದೆಯಾದ ಸಂಭ್ರಮದಲ್ಲಿರುವ ನಟನಿಗೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಶುಭಾಶಯಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಡಾಲಿ ಹಂಚಿಕೊಂಡ ಫೋಟೋ

ನಟ ಧನಂಜಯ್ ಹಾಗೂ ಧನ್ಯಾ ಅವರ ವಿವಾಹವು ಕಳೆದ ಫೆಬ್ರವರಿ ತಿಂಗಳಲ್ಲಿ ಅತ್ಯಂತ ವೈಭವದಿಂದ ನೆರವೇರಿತ್ತು. ಈ ಮದುವೆಗೆ ಸ್ಯಾಂಡಲ್‌ವುಡ್‌ನ ನಟ-ನಟಿಯರು, ರಾಜಕಾರಣಿಗಳು ಹಾಗೂ ಸಾವಿರಾರು ಅಭಿಮಾನಿಗಳು ಸಾಕ್ಷಿಯಾಗಿದ್ದರು. ದೀರ್ಘಕಾಲದ ಪರಿಚಯದ ನಂತರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಈ ಜೋಡಿಯ ಬಾಳಿಗೆ, ಮಗುವಿನ ಆಗಮನವಾಗಿರುವುದು ಕುಟುಂಬದ ಸಂತೋಷವನ್ನು ದ್ವಿಗುಣಗೊಳಿಸಿದೆ.

ಇದನ್ನೂ ಓದಿ: ಡಾಲಿ ಧನಂಜಯ್ ಸಿನಿಮಾ ‘ಮದರ್ ಪ್ರಾಮಿಸ್’ ಬಿಡುಗಡೆಗೆ ದಿನಾಂಕ ನಿಗದಿ

ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಮದರ್ ಪ್ರಾಮಿಸ್’ ಸಿನಿಮಾ ಜುಲೈ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ಇದು ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು, ಧನಂಜಯ್ ಅವರೇ ಸ್ವತಃ ನಿರ್ಮಾಣ ಮಾಡಿದ್ದಾರೆ. ಪೂರ್ಣಚಂದ್ರ ಮೈಸೂರು ನಿರ್ದೇಶನದ ಈ ಸಿನಿಮಾದಲ್ಲಿ ಬೆಂಗಳೂರಿನ ಜೂಜುಕೋರನೊಬ್ಬ ಶಕ್ತಿಶಾಲಿ ಗ್ಯಾಂಗ್‌ಸ್ಟರ್‌ಗಳು ಮತ್ತು ಕಳ್ಳಸಾಗಣೆದಾರರಿಂದ ತಪ್ಪಿಸಿಕೊಳ್ಳುವಾಗ ನಡೆಯುವ ರೋಚಕ ಕಥೆ ಇದೆ. ಚಿತ್ರದಲ್ಲಿ ಧನಂಜಯ್ ‘ರಾಸಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಂಡರೆ, ಪೂರ್ಣಚಂದ್ರ ಮೈಸೂರು, ಗೀತಾ, ವಿನಯಾ ಪ್ರಸಾದ್, ಗುರುದತ್ ಹಾಗೂ ನಾಗಭೂಷಣ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಕಾಂಗ್ರೆಸ್‌ನಲ್ಲಿ ಸಂಪುಟ ವಿಸ್ತರಣೆ ಕಸರತ್ತು: ನವದೆಹಲಿಯತ್ತ ನಾಯಕರ ಪಯಣ!
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಜುಲೈ 27 ರಿಂದ ಆಗಸ್ಟ್ 02ರ ವರೆಗಿನ ದ್ವಾದಶ ರಾಶಿಗಳ ಫಲಾಫಲ
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಇಂದು ಈ ರಾಶಿಯವರಿಗೆ ಉದ್ಯೋಗಾವಕಾಶ!
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಪ್ರಲ್ಹಾದ್ ಜೋಶಿ ಏನಂದ್ರು?
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಚಿಕ್ಕಬಳ್ಳಾಪುರದಲ್ಲಿ ಕೈ ಕೈ ಮಿಲಾಹಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಪೊಲೀಸರಿಂದ ಪಾಕ್ ಮೂಲದ 400ಕ್ಕೂ ಹೆಚ್ಚು ಸೋಷಿಯಲ್ ಮೀಡಿಯಾ ಖಾತೆ ಬ್ಲಾಕ್
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ರಾಹುಲ್ ಗಾಂಧಿ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಅತ್ತ ಪ್ರಧಾನ್ ರಾಜೀನಾಮೆ: ಇತ್ತ ರಾಜ್ಯದ ಸಂಪುಟ ವಿಸ್ತರಣೆ ಸನ್ನಿಹಿತ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಸರ್ಕಾರ ಸಿಜೆಪಿಯ ಎಲ್ಲಾ ಬೇಡಿಕೆಗಳನ್ನೂ ಒಪ್ಪಿಕೊಂಡಿದೆ; ಸಚಿವ ಜೆ.ಪಿ ನಡ್ಡಾ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ
ಬರದ ಬಗ್ಗೆ ಈಗಾಗಲೇ ಪ್ರಧಾನಿ ಮೋದಿ ಸಹ ಎಚ್ಚರಿಕೆ ನೀಡಿದ್ದಾರೆ ಎಂದ ಡಿಕೆಶಿ