AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂತಾರ: ‘ನನ್ನ ಹೆಸರಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ’ ದೈವದ ಎಚ್ಚರಿಕೆ

Kantara Chapter 1: ‘ಕಾಂತಾರ’ ಸಿನಿಮಾ ಬಿಡುಗಡೆ ಬಳಿಕ ದೈವದ ಅನುಕರಣೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿದಿನವೂ ದೈವದ ಅನುಕರಣೆಯ ವಿಡಿಯೋಗಳು ಹರಿದಾಡುತ್ತಲೇ ಇವೆ. ಇದೀಗ ಇದೆಲ್ಲದರಿಂದ ಬೇಸತ್ತು ಕೆಲ ದೈವನರ್ತಕರು, ದೈವಾರಾಧಕರು ‘ಕಾಂತಾರ’ ಸಿನಿಮಾ ವಿರುದ್ಧ ದೈವದ ಅಪಹಾಸ್ಯ ಮಾಡುವವರ ವಿರುದ್ಧ ದೈವಕ್ಷೇತ್ರದಲ್ಲಿ ದೂರು ಹೇಳಿದ್ದಾರೆ. ಅದಕ್ಕೆ ದೈವ ಪ್ರತಿಕ್ರಿಯೆ ನೀಡಿದೆ.

ಕಾಂತಾರ: ‘ನನ್ನ ಹೆಸರಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ’ ದೈವದ ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಮಂಜುನಾಥ ಸಿ.
| Updated By: ಮದನ್​ ಕುಮಾರ್​|

Updated on:Oct 09, 2025 | 9:13 PM

Share

ದೈವದ ಶಕ್ತಿ, ಮಹಿಮೆ, ದೈವದೊಂದಿಗೆ ಕರಾವಳಿ, ಮಲೆನಾಡಿನ ಜನರಿಗಿರುವ ಸಂಬಂಧ, ಭಕ್ತಿಯನ್ನು ಎತ್ತಿ ತೋರಿಸುವ ಸಿನಿಮಾ ‘ಕಾಂತಾರ’ ಮತ್ತು ಈಗ ಬಿಡುಗಡೆ ಆಗಿರುವ ‘ಕಾಂತಾರ: ಚಾಪ್ಟರ್ 1’. ಎರಡೂ ಸಿನಿಮಾಗಳನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ನಿರ್ಮಾಣ ಮಾಡಿರುವುದು ಹೊಂಬಾಳೆ ಫಿಲಮ್ಸ್. ಆದರೆ ‘ಕಾಂತಾರ’ ಸಿನಿಮಾಗಳ ಬಗ್ಗೆ ಕೆಲ ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದು, ಇಂದು ದೈವದ ಮುಂದೆಯೇ ಈ ಬಗ್ಗೆ ದೂರು ಹೇಳಿದ್ದಾರೆ.

ಕಾಂತಾರ ಸಿನಿಮಾದ ಮೂಲಕ ದೈವಾರಾಧನೆಗೆ ಅಪಚಾರ ಮಾಡಲಾಗಿದೆ ಎಂದು ಪಿಲಿಚಂಡಿ, ಬಲವಂಡಿ ದೈವದ ಮೊರೆ ಹೋದ ದೈವ ನರ್ತಕರು, ದೈವಾರಾಧಕರು ಅಸಮಾಧಾನ ವ್ಯಕ್ತಪಡಿಸಿದ್ದು, ಮಂಗಳೂರು ಹೊರವಲಯದ ಬಜಪೆ ಸಮೀಪದ ‌ಶ್ರೀ ಕ್ಷೇತ್ರ ಪೆರಾರ, ಬ್ರಹ್ಮದೇವರು,ಇಷ್ಟ ದೇವತಾ ಬಲವಂಡಿ, ಪಿಲಿಚಂಡಿ ದೈವಸ್ಥಾನ, ಬಲವಂಡಿ, ಪಿಲಿಚಂಡಿ ದೈವದ ಮುಂದೆ ದೈವಾರಾಧನೆಯ ಅಪಹಾಸ್ಯದ ವಿರುದ್ಧ ಸಾಮೂಹಿಕ ಪ್ರಾರ್ಥನೆ ಮಾಡಿದ್ದಾರೆ. ಸಿನಿಮಾದಲ್ಲಿ ದೈವಾರಾಧನೆ ಬಳಕೆ ಬಗ್ಗೆ ದೂರು ಹೇಳಿದ್ದು, ದೈವದ ಆವೇಶವನ್ನು ಅನುಕರಣೆ ಮಾಡುತ್ತಿರುವ ಬಗ್ಗೆ ದೈವರಾಧಕರ ಬೇಸರ ವ್ಯಕ್ತಪಡಿಸಿದ್ದಾರೆ.

ಈ ವೇಳೆ ದೈವವು ನುಡಿದಿದ್ದು, ‘ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನಾನು ನೋಡಿಕೊಳ್ಳುತ್ತೇನೆ. ಹಣವೆಲ್ಲ‌ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ. ಅಪಚಾರ ಮಾಡುವವರಿಗೆ ನಾನು ಬುದ್ದಿ ಕಲಿಸುತ್ತೇನೆ. ಇನ್ಮುಂದೆ ಎಲ್ಲಾ ದೈವಸ್ಥಾನಗಳಲ್ಲಿ ಚಿತ್ರೀಕರಣ ನಿಲ್ಲಿಸಿ. ನೀವು ಹೋರಾಟವನ್ನು ಮುಂದುವರಿಸಿ. ನಾನು ನಿಮ್ಮ ಬೆನ್ನ ಹಿಂದೆ ಇದ್ದೇನೆ’ ಎಂದಿದೆ.

ಇದನ್ನೂ ಓದಿ: ‘ಕಾಂತಾರ’ದ ಬಗ್ಗೆ ದೈವಾರಾಧಕರ ಅಸಮಾಧಾನ, ದೈವದ ಮೊರೆ ಹೋಗಲು ನಿರ್ಧಾರ

‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗಿನಿಂದಲೂ ಸಿನಿಮಾ ನೋಡಿದ ಕೆಲವರು ದೈವದ ಅನುಕರಣೆ ಮಾಡುತ್ತಿದ್ದಾರೆ. ಅಸಲಿಗೆ 2022 ರಲ್ಲಿ ಮೊದಲ ‘ಕಾಂತಾರ’ ಸಿನಿಮಾ ಬಿಡುಗಡೆ ಆದಾಗಿನಿಂದಲೂ ಇದನ್ನು ರಿಷಬ್ ಶೆಟ್ಟಿ, ಹೊಂಬಾಳೆ ವಿರೋಧಿಸುತ್ತಲೇ ಬಂದಿದೆ. ಇತ್ತೀಚೆಗೆ ಸಹ ಪೋಸ್ಟ್ ಹಂಚಿಕೊಂಡಿದ್ದ ಹೊಂಬಾಳೆ ಫಿಲಮ್ಸ್, ದೈವದ ಅನುಕರಣೆ ಮಾಡುವುದು ಬೇಡ ಎಂದು ಮನವಿ ಮಾಡಿತ್ತು. ಆದರೂ ಅದು ಮುಂದುವರೆದಿದೆ. ಇದು ದೈವಾರಾಧಕರಿಗೆ, ದೈವ ನರ್ತಕರಿಗೆ ಬೇಸರ ಮೂಡಿಸಿದೆ.

ಅಲ್ಲದೆ ಕೆಲವು ದೈವನರ್ತಕರು, ದೈವಾರಾಧಕರು ರಿಷಬ್ ಶೆಟ್ಟಿ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೈವದ ಬಗ್ಗೆ ಸಿನಿಮಾ ಮಾಡಬಾರದಿತ್ತು, ದೈವವನ್ನು, ದೈವ ನರ್ತನವನ್ನು ಭಕ್ತಿಯಿಂದ ನೋಡಬೇಕು, ಆದರೆ ಸಿನಿಮಾ ಮಾಡುವ ಮೂಲಕ ಉದ್ಯಮದ ದೃಷ್ಟಿಯಿಂದ ನೋಡಲಾಗಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಣ ಮಾಡಲು ದೈವವನ್ನು ಬಳಸಿಕೊಂಡಿದ್ದಾರೆ ಎಂದು ಕೆಲವರು ಟೀಕೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:56 pm, Thu, 9 October 25

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ