Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್

Danish Sait Marriage: ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

Danish Sait: ಅನ್ಯಾ ಜತೆ ರಿಜಿಸ್ಟರ್ ಮ್ಯಾರೇಜ್ ಆದ ದಾನಿಶ್​ ಸೇಠ್​; ಫೋಟೋ ವೈರಲ್
ದಾನಿಶ್​-ಅನನ್ಯಾ
Follow us
| Edited By: ಮದನ್​ ಕುಮಾರ್​

Updated on: Jun 10, 2021 | 4:16 PM

ಕಾಮಿಡಿಯನ್ ಹಾಗೂ ನಟ ದಾನಿಶ್​ ಸೇಠ್​ ಅವರು ಅನ್ಯಾ ರಂಗಸ್ವಾಮಿ ಜತೆ ಸಿಂಪಲ್​ ಆಗಿ ಮದುವೆ ಆಗಿದ್ದಾರೆ. ಜೂನ್​ 9ರಂದು ಮದುವೆ ನೋಂದಣಿ ಮಾಡಿಸಿಕೊಂಡರೆ, ಜೂನ್​ 10ರಂದು ಆಪ್ತರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾನಿಶ್​ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ‘ನಾನು ಮತ್ತು ಅನ್ಯಾ ನಮ್ಮ ಕುಟುಂಬದವರು ಹಾಗೂ ಆಪ್ತರು ಎನಿಸಿಕೊಂಡ 15 ಜನರ ಸಮ್ಮುಖದಲ್ಲಿ ಉಂಗುರ ಬದಲಾಯಿಸಿಕೊಂಡೆವು. ಜೂನ್​ 9ರಂದು ನಾವು ಮದುವೆ ನೋಂದಣಿ ಮಾಡಿಕೊಂಡಿದ್ದೆವು. ನಮ್ಮನ್ನು ನೀವು ಆಶೀರ್ವದಿಸಿ’ ಎಂದು ದಾನಿಶ್​ ಬರೆದುಕೊಂಡಿದ್ದಾರೆ. ಜತೆಗೆ,ಫೋಟೋಗಳನ್ನು ಕೂಡ ಅವರು ಹಂಚಿಕೊಂಡಿದ್ದಾರೆ.

ನಿರ್ದೇಶಕ ಸಾದ್​ ಖಾನ್​ ಕೂಡ ಮದುವೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ. ‘ಇಬ್ಬರನ್ನೂ ನೋಡಿ ಖುಷಿ ಆಗುತ್ತಿದೆ. ಅವರಿಬ್ಬರೂ ಒಬ್ಬರನ್ನೊಬ್ಬರು ತುಂಬಾನೇ ಇಷ್ಟಪಡುತ್ತಿದ್ದಾರೆ’ ಎಂದು ಸಾದ್ ಹೇಳಿಕೊಂಡಿರುವುದಾಗಿ ಆಂಗ್ಲ ಮಾಧ್ಯಮ ವರದಿ ಮಾಡಿದೆ. ಇನ್ನು, ಈ ಪೋಸ್ಟ್​ ನೋಡಿದ ಅನೇಕರು ಈ ಜೋಡಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಇವರ ವೈವಾಹಿಕ ಜೀವನಕ್ಕೆ ಒಳ್ಳೆಯದಾಗಲಿ ಎಂದು ಹರಸಿದ್ದಾರೆ.

2020ರ ಡಿಸೆಂಬರ್​ 11ರಂದು ದಾನಿಶ್​ ತಮ್ಮ ರಿಲೇಶನ್​ಶಿಪ್​ ಬಗ್ಗೆ ಹೇಳಿಕೊಂಡಿದ್ದರು. ‘ಅವಳು ಯೆಸ್​ ಎಂದಳು. ನಿನ್ನ ಉಳಿದ ಜೀವನವನ್ನು ನನ್ನ ಜತೆ ಕಳೆಯೋಕೆ ನಿರ್ಧರಿಸಿದ್ದಕ್ಕೆ ಧನ್ಯವಾದಗಳು’ ಎಂದು ಅನ್ಯಾ ರಾಘವನ್​ ಫೋಟೋವನ್ನು ದಾನಿಶ್​ ಪೋಸ್ಟ್​ ಮಾಡಿದ್ದರು.

ಅನ್ಯಾ ವೃತ್ತಿಯಲ್ಲಿ ಗ್ರಾಫಿಕ್​ ಡಿಸೈನರ್​. ಮುಂಬೈನಲ್ಲಿ ಅವರು ಕೆಲಸ ಮಾಡುತ್ತಿದ್ದಾರೆ. ದಾನಿಶ್​, ಕನ್ನಡದ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ಅವರು ಆರ್​ಸಿಬಿ ಇನ್​ಸೈಡರ್​ ಕೂಡ ಹೌದು.

ಇದನ್ನೂ ಓದಿ: ಒನ್ ಕಟ್ ಟೂ ಕಟ್​ನಲ್ಲಿ ದಾನಿಶ್ ಸೇಠ್ ‘ಗೋಪಿ’ ಅವತಾರ! ಹೊಸ ಚಿತ್ರದ ಬಗ್ಗೆ ಕುತೂಹಲ

ತಾಜಾ ಸುದ್ದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ಆನೆ ಭೀಮ ಮತ್ತೆ ಗ್ರಾಮಕ್ಕೆ ಎಂಟ್ರಿ, ಗಾಂಭೀರ್ಯ ನಡಿಗೆ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ