Daredevil Musthafa: ವಿದೇಶಕ್ಕೆ ಹೊರಟ ‘ಡೇರ್​ಡೆವಿಲ್​ ಮುಸ್ತಫಾ’; ಜೋರಾಯ್ತು ಕನ್ನಡ ಸಿನಿಮಾದ ಹವಾ

Sandalwood News: ಈ ವಾರ ಅಮೆರಿಕ ಹಾಗೂ ಯುರೋಪ್​ನಲ್ಲಿ ‘ಡೇರ್​ಡೆವಿಲ್ ಮುಸ್ತಫಾ’ ಸಿನಿಮಾ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆ ಆಗಲಿದೆ.

Daredevil Musthafa: ವಿದೇಶಕ್ಕೆ ಹೊರಟ ‘ಡೇರ್​ಡೆವಿಲ್​ ಮುಸ್ತಫಾ’; ಜೋರಾಯ್ತು ಕನ್ನಡ ಸಿನಿಮಾದ ಹವಾ
ಡೇರ್​ಡೆವಿಲ್​ ಮುಸ್ತಫಾ
Follow us
ಮದನ್​ ಕುಮಾರ್​
|

Updated on: May 28, 2023 | 7:42 AM

ಜನಮೆಚ್ಚುಗೆ ಗಳಿಸಿರುವ ‘ಡೇರ್​ಡೆವಿಲ್ ಮುಸ್ತಫಾ’ (Daredevil Musthafa) ಸಿನಿಮಾದ ಹವಾ ಜೋರಾಗಿದೆ. ಮೇ 19ರಂದು ತೆರೆಗೆ ಬಂದ ಈ ಚಿತ್ರ ಸಖತ್​ ಟಾಕ್​ ಕ್ರಿಯೇಟ್​ ಮಾಡಿದೆ. ಕನ್ನಡಿಗರು ‘ಡೇರ್​ಡೆವಿಲ್ ಮುಸ್ತಫಾ’ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪರಿಣಾಮವಾಗಿ ಎರಡನೇ ವಾರ ಕೂಡ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ರಾಜಕೀಯ ಚಕಮಕಿ, ಐಪಿಎಲ್​ (IPL) ಹಣಾಹಣಿ ನಡುವೆ ಕೆಲವು ತಿಂಗಳಿಂದ ಜನರು ಥಿಯೇಟರ್​ಗೆ ಬರಲು ಹಿಂದೇಟು ಹಾಕುತ್ತಿದ್ದರು. ಇಂಥ ಕಾಲಘಟ್ಟದಲ್ಲಿ ‘ಡೇರ್​ಡೆವಿಲ್ ಮುಸ್ತಫಾ’ ಸಿನಿಮಾವನ್ನು ಕಣ್ತುಂಬಿಕೊಂಡು ಮೆಚ್ಚುಗೆ ಮಾತುಗಳನ್ನು ಆಡುತ್ತಿದ್ದಾರೆ ಎಂಬುದು ಖುಷಿಯ ವಿಚಾರ. ಎರಡನೇ ವಾರದಲ್ಲಿ ಈ ಸಿನಿಮಾದ ಕ್ರೇಜ್​ ಹೆಚ್ಚಾಗಿದೆ. ಕರುನಾಡಿನಲ್ಲಿ ಮಾತ್ರವಲ್ಲದೇ ವಿದೇಶದಲ್ಲೂ ಈ ಚಿತ್ರ ಧೂಳೆಬ್ಬಿಸಲು ಸಜ್ಜಾಗಿದೆ.

‌ಬೆಂಗಳೂರು, ಮಂಗಳೂರು, ಶಿವಮೊಗ್ಗ, ಮೈಸೂರು ಸೇರಿದಂತೆ 40 ಸೆಂಟರ್​ಗಳಲ್ಲಿ ‘ಡೇರ್​ಡೆವಿಲ್ ಮುಸ್ತಫಾ’ ಚಿತ್ರ ಹೌಸ್ ಫುಲ್ ಪ್ರದರ್ಶನ ಕಂಡಿದೆ. ಪೂರ್ಣಚಂದ್ರ ತೇಜಸ್ವಿ ಅವರ ಪ್ರಪಂಚದಲ್ಲಿ ಪಯಣಿಸಿರುವ ಪ್ರೇಕ್ಷಕರು ‘ಇದು ಹೃದಯ ಬೆಸೆಯುವ ಕಥೆ, ಪ್ರತಿಯೊಬ್ಬರೂ ಇಂತಹ ಸಿನಿಮಾವನ್ನು ಮಿಸ್ ಮಾಡದೇ ನೋಡಬೇಕು’ ಎಂದು ಬಾಯಿ ಮಾತಿನ ಪ್ರಚಾರ ನೀಡುತ್ತಿದ್ದಾರೆ. ಚಿತ್ರಕ್ಕೆ ಈ ಮಟ್ಟಿಗಿನ ವಿಮರ್ಶೆ ಹಾಗೂ ಬೇಡಿಕೆ ಸಿಗುತ್ತಿರುವ ಬೆನ್ನಲ್ಲೆ ವಿದೇಶದಲ್ಲಿ ‘ಡೇರ್​ಡೆವಿಲ್ ಮುಸ್ತಫಾ’ ಪ್ರದರ್ಶನಕ್ಕೆ ಚಿತ್ರತಂಡ ತಯಾರಿ ಮಾಡಿಕೊಂಡಿದೆ.

ಇದನ್ನೂ ಓದಿ: Daredevil Musthafa Review: ಭರಪೂರ ನಗಿಸುತ್ತಾ ಮತಗಳ ಜಗಳ ಬಿಡಿಸುವ ‘ಡೇರ್​ಡೆವಿಲ್​ ಮುಸ್ತಫಾ’

ಈ ವಾರ ಅಮೆರಿಕ ಹಾಗೂ ಯುರೋಪ್​ನಲ್ಲಿ ‘ಡೇರ್​ಡೆವಿಲ್ ಮುಸ್ತಫಾ’ ಸಿನಿಮಾ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಮುಂದಿನ ವಾರ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ದುಬೈ ಸೇರಿದಂತೆ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ಪೂರ್ಣಚಂದ್ರ ತೇಜಸ್ವಿಯವರ ಕಥೆಯಾಧಾರಿತ ಈ ಚಿತ್ರವನ್ನು ಶಶಾಂಕ್ ಸೋಗಾಲ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ‘ಡೇರ್​ಡೆವಿಲ್ ಮುಸ್ತಫಾ’ ಸಿನಿಮಾವನ್ನು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಿಸಿದ್ದಾರೆ ಎಂಬುದು ವಿಶೇಷ.

ಇದನ್ನೂ ಓದಿ: Daredevil Musthafa: ‘ಎಲ್ಲರೂ ಡೇರ್​ಡೆವಿಲ್​ ಮುಸ್ತಫಾ ಚಿತ್ರ ನೋಡಿ, ಇದರಿಂದ ನಾವು ಸೌಹಾರ್ದತೆಯ ಪಾಠ ಕಲಿಯಬೇಕು’: ಪ್ರತಾಪ್​ ಸಿಂಹ

‘ನಟ ರಾಕ್ಷಸ’ ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ಮೂಲಕ ಈ ಚಿತ್ರವನ್ನು ಅರ್ಪಿಸಿದ್ದು, ಕೆ.ಆರ್.ಜಿ. ಸ್ಟುಡಿಯೊಸ್ ರಾಜ್ಯದೆಲ್ಲೆಡೆ ಬಿಡುಗಡೆ ಮಾಡಿದೆ. ರಾಹುಲ್‌ ರಾಯ್‌ ಛಾಯಾಗ್ರಹಣ, ಶಶಾಂಕ್ ಸೋಗಾಲ್, ಸಂಪತ್ ಸಿರಿಮನೆ, ಡಾಲಿ ಧನಂಜಯ್ ಸಾಹಿತ್ಯದ ಹಾಡುಗಳಿಗೆ ನವನೀತ್‌ ಶ್ಯಾಮ್‌ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿಶಿರ್‌ ಬೈಕಾಡಿ, ಆದಿತ್ಯ ಅಶ್ರೀ, ಅಭಯ್‌, ಸುಪ್ರೀತ್‌ ಭಾರದ್ವಾಜ್‌, ಆಶಿತ್, ಶ್ರೀವತ್ಸ, ಪ್ರೇರಣಾ, ಎಂ.ಎಸ್‌. ಉಮೇಶ್‌, ಮಂಡ್ಯ ರಮೇಶ್‌, ಮೈಸೂರ್‌ ಆನಂದ್‌, ಸುಂದರ್‌ ವೀಣಾ, ನಾಗಭೂಷಣ್‌, ಪೂರ್ಣಚಂದ್ರ ಮೈಸೂರು ಸೇರಿ ಅನೇಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ‘ಸಿನಿಮಾಮರ’ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಇತ್ತೀಚೆಗೆ ಸಿನಿಮಾ ನೋಡಿದ ಮೈಸೂರು ಸಂಸದ ಪ್ರತಾಪ್​ ಸಿಂಹ ಕೂಡ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಈ ಸೀಸನ್​ನ ಕೊನೆಯ ನಾಮಿನೇಷನ್​ನಲ್ಲಿ ಮಂಜಣ್ಣ ಟಾರ್ಗೆಟ್
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಬಿಎಂಟಿಸಿ ಟಿಕೆಟ್ ದರ ಹೆಚ್ಚಿರುವ ಬೆನ್ನಲ್ಲೇ ಮೆಟ್ರೋ ಪ್ರಯಾಣ ದರ ಏರಿಕೆ!
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಜನಪ್ರತಿನಿಧಿಗಳು ಎಲೆಕ್ಟ್ರಾನಿಕ್ ಮಾಧ್ಯಮಗಳ ನ್ಯೂಸ್ ವೀಕ್ಷಿಸುವುದಿಲ್ಲವೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?
ಡಿಕೆ ಸುರೇಶ್​ಗೆ ಕೆಪಿಸಿಸಿ ಅಧ್ಯಕ್ಷನಾಗುವ ಹಂಬಲವಿದೆಯೇ?