Daredevil Musthafa: ​ಈಗ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ಟಿಕೆಟ್​ ಬೆಲೆ ಕೇವಲ 50 ರೂಪಾಯಿ; ಮಲ್ಟಿಪ್ಲೆಕ್ಸ್​ನಲ್ಲಿ 99 ರೂಪಾಯಿ

Daredevil Musthafa Ticket Price: ಚಿತ್ರಮಂದಿರದಲ್ಲಿ ‘ಡೇರ್​ ಡೆವಿಲ್​ ಮುಸ್ತಫಾ’ ಸಿನಿಮಾ ನೋಡಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಈಗ ಟಿಕೆಟ್​ ಬೆಲೆ ತಗ್ಗಿಸಿರುವುದರಿಂದ ಇನ್ನಷ್ಟು ಜನರನ್ನು ತಲುಪಲು ಸಾಧ್ಯವಾಗಲಿದೆ.

Daredevil Musthafa: ​ಈಗ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾ ಟಿಕೆಟ್​ ಬೆಲೆ ಕೇವಲ 50 ರೂಪಾಯಿ; ಮಲ್ಟಿಪ್ಲೆಕ್ಸ್​ನಲ್ಲಿ 99 ರೂಪಾಯಿ
ಡೇರ್​ಡೆವಿಲ್​ ಮುಸ್ತಫಾ
Follow us
ಮದನ್​ ಕುಮಾರ್​
|

Updated on: Jun 06, 2023 | 12:14 PM

ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರು ಬರೆದ ಕಥೆ ಆಧರಿಸಿದ ‘ಡೇರ್​ಡೆವಿಲ್​ ಮುಸ್ತಫಾ’ (Daredevil Musthafa) ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ವಿಮರ್ಶಕರ ವಲಯದಿಂದಲೂ ಪಾಸಿಟಿವ್​ ಮಾತುಗಳು ಕೇಳಿಬಂದಿವೆ. ಅನೇಕ ಕಡೆಗಳಲ್ಲಿ ಈ ಸಿನಿಮಾ ಹೌಸ್​ಫುಲ್​ ಪ್ರದರ್ಶನ ಕಂಡಿದೆ. ಬಳಿಕ ಚಿತ್ರಮಂದಿರಗಳ ಸಂಖ್ಯೆಯನ್ನೂ ಹೆಚ್ಚಿಸಲಾಯಿತು. ಈಗ ಪ್ರೇಕ್ಷಕರಿಗೆ ಈ ಸಿನಿಮಾ ತಂಡದ ಕಡೆಯಿಂದ ಒಂದು ಬಂಪರ್​ ಆಫರ್​ ನೀಡಲಾಗಿದೆ. ‘ಡೇರ್​ ಡೆವಿಲ್​ ಮುಸ್ತಫಾ’ ಚಿತ್ರದ ಟಿಕೆಟ್​ ಬೆಲೆಯನ್ನು (Daredevil Musthafa Ticket Price) ತಗ್ಗಿಸಲಾಗಿದೆ. ಏಕಪರದೆ ಚಿತ್ರಮಂದಿರಗಳು ಮಾತ್ರವಲ್ಲದೇ ಮಲ್ಟಿಪ್ಲೆಕ್ಸ್​ಗಳಲ್ಲೂ ಟಿಕೆಟ್ ದರ ಕಡಿತ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಸೆಕೆಂಡ್​ ಕ್ಲಾಸ್​ಗೆ 50 ರೂಪಾಯಿ ಹಾಗೂ ಬಾಲ್ಕನಿಗೆ 75 ರೂಪಾಯಿ ನಿಗದಿ ಮಾಡಲಾಗಿದೆ. ಕೆಲವು ಮಲ್ಟಿಪ್ಲೆಕ್ಸ್​ಗಳಲ್ಲಿ (Multiplex) 99 ರೂಪಾಯಿಗೆ ಟಿಕೆಟ್​ ಲಭ್ಯವಾಗುತ್ತಿವೆ.

ಒಳ್ಳೆಯ ಸಿನಿಮಾಗಳು ಬಂದಾಗ ಜನರು ಖಂಡಿತವಾಗಿಯೂ ಬೆಂಬಲ ನೀಡುತ್ತಾರೆ ಎಂಬ ನಂಬಿಕೆ ಗಾಂಧಿನಗರದಲ್ಲಿದೆ. ಅದು ‘ಡೇರ್​ಡೆವಿಲ್​ ಮುಸ್ತಫಾ’ ವಿಚಾರದಲ್ಲಿ ನಿಜವಾಗಿದೆ. ಇದು ಪೂರ್ಣಚಂದ್ರ ತೇಜಸ್ವಿ ಅಭಿಮಾನಿಗಳೇ ನಿರ್ಮಾಣ ಮಾಡಿರುವ ಸಿನಿಮಾ. ಶಶಾಂಕ್​ ಸೋಗಾಲ್​ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಈ ಸಿನಿಮಾ ನೋಡಿ ಪ್ರೇಕ್ಷಕರು ಖುಷಿಪಟ್ಟಿದ್ದಾರೆ. ಈಗ ಟಿಕೆಟ್​ ಬೆಲೆ ತಗ್ಗಿಸಿರುವುದರಿಂದ ಇನ್ನಷ್ಟು ಜನರನ್ನು ತಲುಪಲು ಸಾಧ್ಯವಾಗಲಿದೆ. ಚಿತ್ರತಂಡದ ಈ ನಿರ್ಧಾರಕ್ಕೆ ಸೋಶಿಯಲ್​ ಮೀಡಿಯಾದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Daredevil Musthafa: ವಿದೇಶಕ್ಕೆ ಹೊರಟ ‘ಡೇರ್​ಡೆವಿಲ್​ ಮುಸ್ತಫಾ’; ಜೋರಾಯ್ತು ಕನ್ನಡ ಸಿನಿಮಾದ ಹವಾ

ಸಿನಿಮಾಗಳ ಟಿಕೆಟ್​ ದರ ಜಾಸ್ತಿ ಇರುವುದರಿಂದಲೇ ಪ್ರೇಕ್ಷಕರು ಸಿನಿಮಾ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್​ಗಳಿಗೆ ಬರುತ್ತಿಲ್ಲ ಎಂಬ ಮಾತಿದೆ. ಹಾಗಾಗಿ ಟಿಕೆಟ್​ ಬೆಲೆ ತಗ್ಗಿಸುವ ಮೂಲಕ ಪ್ರೇಕ್ಷಕರು ಸೆಳೆಯುವ ಪ್ರಯತ್ನ ಬೇರೆ ಸಿನಿಮಾಗಳಿಂದ ಈ ಮೊದಲು ಕೂಡ ಆಗಿದ್ದುಂಟು. ಆಗೆಲ್ಲ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾಗೆ ಕಲೆಕ್ಷನ್​ ಹೆಚ್ಚುವ ನಿರೀಕ್ಷೆ ಇದೆ.

ಇದನ್ನೂ ಓದಿ: Daredevil Musthafa Review: ಭರಪೂರ ನಗಿಸುತ್ತಾ ಮತಗಳ ಜಗಳ ಬಿಡಿಸುವ ‘ಡೇರ್​ಡೆವಿಲ್​ ಮುಸ್ತಫಾ’

ಶಿಶಿರ್​ ಬೈಕಾಡಿ, ಆದಿತ್ಯ ಆಶ್ರೀ, ಸುಪ್ರೀತ್​ ಭಾರದ್ವಾಜ್​, ಆಶಿತ್​ ಶ್ರೀವತ್ಸಾ, ಅಭಯ್​, ಮಂಡ್ಯ ರಮೇಶ್​, ಉಮೇಶ್​, ಪ್ರೇರಣಾ ಮುಂತಾದ ಕಲಾವಿದರು ‘ಡೇರ್​ಡೆವಿಲ್​ ಮುಸ್ತಫಾ’ ಸಿನಿಮಾದಲ್ಲಿ ನಟಿಸಿದ್ದಾರೆ. ಕೆಲವೇ ದಿನಗಳ ಹಿಂದೆ ಮೈಸೂರು ಸಂಸದ ಪ್ರತಾಪ್​ ಸಿಂಹ ಅವರು ಈ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದರು. ‘ನಾವೆಲ್ಲರೂ ಸೌಹಾರ್ದಯುತವಾಗಿ ಬದುಕಬೇಕು ಎಂಬುದನ್ನು ಈ ಸಿನಿಮಾ ನೋಡಿ ಕಲಿಯಬೇಕು. ಎಲ್ಲರೂ ಅನುಸರಿಸಬಹುದಾದ ಸಂದೇಶ ಇದರಲ್ಲಿ ಇದೆ. ಬೋಧನೆ ಮಾಡುವಂತಹ ಸ್ಟೋರಿ ಇದಲ್ಲ. ಇದು ಖುಷಿ ನೀಡುತ್ತದೆ. ಸಾಕಷ್ಟು ಮನರಂಜನೆ ಇದೆ. ಸಣ್ಣ ಪಾತ್ರಗಳಿಗೂ ಪ್ರತಿ ಕಲಾವಿದರು ಜೀವ ತುಂಬಿದ್ದಾರೆ’ ಎಂದು ಅವರು ಹೇಳಿದ್ದರು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು