ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್: ಕಾರಣ ಏನು?
ಯಾವುದೇ ಸೆಲೆಬ್ರಿಟಿಗಳು ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡರೆ ಅಭಿಮಾನಿಗಳಿಗೆ ಅಚ್ಚರಿ ಆಗುವುದು ಸಹಜ. ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಅವರ ವಿಚಾರದಲ್ಲೂ ಹಾಗೆಯೇ ಆಗಿದೆ. ಫೋಟೋ ನೋಡಿ ಶಾಕ್ ಆಗಿದೆ. ಮಾಸ್ಕ್ ಧರಿಸಿರುವ ಡಾರ್ಲಿಂಗ್ ಕೃಷ್ಣ ಅವರು ಫ್ಯಾಮಿಲಿ ಕೋರ್ಟ್ ಆವರಣದಲ್ಲಿ ನಡೆದು ಬರುತ್ತಿರುವ ಫೋಟೋ ವೈರಲ್ ಆಗುತ್ತಿದೆ.

ಕನ್ನಡ ಚಿತ್ರರಂಗದಲ್ಲಿ ನಟ ಡಾರ್ಲಿಂಗ್ ಕೃಷ್ಣ (Darling Kirshna) ಮತ್ತು ನಟಿ ಮಿಲನಾ ನಾಗರಾಜ್ ಅವರು ಕ್ಯೂಟ್ ಜೋಡಿ ಎನಿಸಿಕೊಂಡಿದ್ದಾರೆ. ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿದ್ದ ಅವರು 2021ರಲ್ಲಿ ಮದುವೆ ಆದರು. ಈ ದಂಪತಿಗೆ ಒಂದು ಮುದ್ದಾದ ಹೆಣ್ಣು ಮಗು ಇದೆ. ಅವರಿಬ್ಬರ ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇದೆ. ಆದರೆ ಏಕಾಏಕಿ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡಿದ್ದಾರೆ! ಆ ಜಾಗದಲ್ಲಿ ಅವರನ್ನು ಕಂಡು ಎಲ್ಲರಿಗೂ ಶಾಕ್ ಆಗಿದೆ. ಅಷ್ಟಕ್ಕೂ ಮಿಲನಾ ನಾಗರಾಜ್ (Milana Nagaraj) ಮತ್ತು ಡಾರ್ಲಿಂಗ್ ಕೃಷ್ಣ ಅವರು ಫ್ಯಾಮಿಲಿ ಕೋರ್ಟ್ (Family Court) ಮೆಟ್ಟಿಲೇರಲು ಕಾರಣ ಏನು? ವಿಚ್ಛೇದನದ ಬಗ್ಗೆ ಏನಾದರೂ ಗುಮಾನಿ ಇದೆಯಾ? ಎಲ್ಲದಕ್ಕೂ ಇಲ್ಲಿದೆ ಉತ್ತರ..
ಡಾರ್ಲಿಂಗ್ ಕೃಷ್ಣ ಅವರು ಮಾಸ್ಕ್ ಧರಿಸಿ ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡಿರುವ ಫೋಟೋ ಲಭ್ಯವಾಗಿದೆ. ಗುರುತು ಸಿಗಬಾರದು ಎಂಬ ಕಾರಣಕ್ಕೆ ಅವರು ಮಾರ್ಸ್ ಧರಿಸಿದ್ದಾರೆ. ಆದರೂ ಕೂಡ ಅದು ಡಾರ್ಲಿಂಗ್ ಕೃಷ್ಣ ಎಂಬುದು ಗೊತ್ತಾಗುತ್ತಿದೆ. ಅಂದಹಾಗೆ, ಡಾರ್ಲಿಂಗ್ ಕೃಷ್ಣ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡಿರುವುದು ಸಿನಿಮಾ ಸಲುವಾಗಿ ಎನ್ನಲಾಗಿದೆ!
ನಟನಾಗಿ ಮಾತ್ರವಲ್ಲದೇ ನಿರ್ದೇಶಕನಾಗಿ ಕೂಡ ಡಾರ್ಲಿಂಗ್ ಕೃಷ್ಣ ಅವರು ಫೇಮಸ್ ಆಗಿದ್ದಾರೆ. ‘ಲವ್ ಮಾಕ್ಟೇಲ್’, ‘ಲವ್ ಮಾಕ್ಟೇಲ್ 2’ ಸಿನಿಮಾಗಳನ್ನು ನಿರ್ದೇಶಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಈಗ ಅವರ ನಿರ್ದೇಶನದಲ್ಲಿ ‘ಲವ್ ಮಾಕ್ಟೇಲ್ 3’ ಸಿನಿಮಾ ಕೂಡ ಸಿದ್ಧವಾಗುತ್ತಿದೆ. ಈ ಚಿತ್ರದಲ್ಲಿ ಫ್ಯಾಮಿಲಿ ಕೋರ್ಟ್ನ ದೃಶ್ಯಗಳು ಇರಲಿವೆ. ಹಾಗಾಗಿ ಫ್ಯಾಮಿಲಿ ಕೋರ್ಟ್ ಹೇಗಿರುತ್ತದೆ ಎಂಬುದನ್ನು ನೋಡಲು ಡಾರ್ಲಿಂಗ್ ಕೃಷ್ಣ ಅಲ್ಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
‘ಲವ್ ಮಾಕ್ಟೇಲ್’ ಮತ್ತು ‘ಲವ್ ಮಾಕ್ಟೇಲ್ 2’ ಸಿನಿಮಾಗಳು ಹಿಟ್ ಆಗಿದ್ದವು. ಈ ಸಿನಿಮಾಗಳಿಗೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲಿನಾ ನಾಗರಾಜ್ ಅವರೇ ಬಂಡವಾಳ ಹೂಡಿದ್ದರು. ‘ಲವ್ ಮಾಕ್ಟೇಲ್ 3’ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಡಾರ್ಲಿಂಗ್ ಕೃಷ್ಣ ಅವರು ಫ್ಯಾಮಿಲಿ ಕೋರ್ಟ್ ನೋಡಲು ಬಂದಿರುವುದರಿಂದ ಕಥೆಯ ಬಗ್ಗೆ ಕುತೂಹಲ ಹೆಚ್ಚುವಂತಾಗಿದೆ.
ಇದನ್ನೂ ಓದಿ: ‘ಲವ್ ಮಾಕ್ಟೇಲ್ 3’ ಚಿತ್ರದಲ್ಲಿ ಮಿಲನಾ ಇರ್ತಾರಾ? ಡಾರ್ಲಿಂಗ್ ಕೃಷ್ಣ ಹೇಳೋದೇನು?
ಸೆಲೆಬ್ರಿಟಿಗಳ ಜೀವನದಲ್ಲಿ ವಿಚ್ಛೇದನ ಎಂಬುದು ತುಂಬಾ ಸಾಮಾನ್ಯ ಎಂಬಂತಾಗಿದೆ. ಪರಸ್ಪರ ಪ್ರೀತಿಸಿ ಮದುವೆ ಆಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಫ್ಯಾಮಿಲಿ ಕೋರ್ಟ್ನಲ್ಲಿ ಕಾಣಿಸಿಕೊಂಡಾಗ ಅಭಿಮಾನಿಗಳಿಗೆ ಅಚ್ಚರಿ ಆಗಿತ್ತು. ಅವರಿಬ್ಬರು ಪರಸ್ಪರ ಒಪ್ಪಿಗೆ ಮೇರೆಗೆ ವಿಚ್ಛೇದನ ಪಡೆದುಕೊಂಡರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.




