ನಟ-ನಟಿಯರ ಜನ್ಮದಿನಕ್ಕೆ ಚಿತ್ರತಂಡದಿಂದ ಟೀಸರ್, ಪೋಸ್ಟರ್ ಅಥವಾ ಟ್ರೇಲರ್ ರಿಲೀಸ್ ಆಗೋದು ಸಾಮಾನ್ಯ. ಈಗ ಜೂನ್ 12ರಂದು ನಟ ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಕೃಷ್ಣ ಅವರ ಹುಟ್ಟುಹಬ್ಬಕ್ಕೆ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಬಿಡುಗಡೆಯಾಗಲಿದೆ.
ಜೂನ್ 12ರಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಜೂನ್ 11ರಂದು ಸಂಜೆ 5 ಗಂಟೆಗೆ ಇನ್ಸ್ಟಾಗ್ರಾಂ ಮೂಲಕ ಲೈವ್ನಲ್ಲಿ ಚಿತ್ರತಂಡದ ಸದಸ್ಯರು ಟೀಸರ್ ಹಾಗೂ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಲಿದ್ದಾರೆ.
ಈಗಾಗಲೇ ಬಹತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ ಡೌನ್ ಮುಗಿದ್ದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಲ್ ಮೊಂತೆರೋ, ಅದ್ವಿತಿ ಶೆಟ್ಟಿ ಹಗೂ ಶಿಲ್ಪಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಟಿಸಿದ್ದ ಲವ್ ಮಾಕ್ಟೇಲ್ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. 2020ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾ ನಂತರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಸಾಕಷ್ಟು ಆಫರ್ಗಳು ಬಂದಿದ್ದವು.
ಇದನ್ನೂ ಓದಿ: ‘ಲವ್ ಮಾಕ್ಟೇಲ್ ಸಿನಿಮಾ ಅದ್ಭುತ’; ESCN ಎಂದಿದ್ದ ಆಸ್ಟ್ರೇಲಿಯಾ ಪತ್ರಕರ್ತೆಗೆ ಈಗ ಕನ್ನಡ ಸಿನಿಮಾಗಳ ಮೇಲೆ ಒಲವು
Published On - 7:09 pm, Thu, 3 June 21