Darling Krishna: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ನೋಡಿ ಮನಸಾರೆ ಹೊಗಳಿದ ಪ್ರೇಕ್ಷಕರು; ಚಿತ್ರತಂಡಕ್ಕೆ ಖುಷಿಯೋ ಖುಷಿ

Kausalya Supraja Rama: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರಕ್ಕೆ ಜನರು ಫಿದಾ ಆಗಿದ್ದಾರೆ. ಪೇಯ್ಡ್​ ಪ್ರೀಮಿಯರ್​ ಶೋ ನೋಡಿ ಮೆಚ್ಚುಗೆ ಸೂಚಿಸಿದ ಪ್ರೇಕ್ಷಕರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದೆ.

Darling Krishna: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ನೋಡಿ ಮನಸಾರೆ ಹೊಗಳಿದ ಪ್ರೇಕ್ಷಕರು; ಚಿತ್ರತಂಡಕ್ಕೆ ಖುಷಿಯೋ ಖುಷಿ
ಡಾರ್ಲಿಂಗ್​ ಕೃಷ್ಣ
Follow us
ಮದನ್​ ಕುಮಾರ್​
|

Updated on: Jul 26, 2023 | 12:39 PM

ಡಾರ್ಲಿಂಗ್​ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ (Kausalya Supraja Rama) ಸಿನಿಮಾ ಜುಲೈ 28ರಂದು ಬಿಡುಗಡೆ ಆಗುತ್ತಿದೆ. ಅದಕ್ಕೂ ಮುನ್ನ ಪೇಯ್ಡ್​ ಪ್ರೀಮಿಯರ್​ ಮಾಡಲಾಗಿದೆ. ಪ್ರೀಮಿಯರ್​ ಶೋನಲ್ಲಿ ಸಿನಿಮಾ ನೋಡಿದ ಪ್ರೇಕ್ಷಕರು ಸಖತ್​ ಇಷ್ಟಪಟ್ಟಿದ್ದಾರೆ. ಈ ಸಿನಿಮಾದ ಕಥೆ ಎಲ್ಲರಿಗೂ ಮೆಚ್ಚುಗೆ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಪ್ರೇಕ್ಷಕರು ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾವನ್ನು ಎಂಜಾಯ್​ ಮಾಡುತ್ತಿದ್ದಾರೆ. ಡಾರ್ಲಿಂಗ್​ ಕೃಷ್ಣ (Darling Krishna) ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ​ ಅವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಮಿಲನಾ ನಾಗರಾಜ್​ (Milana Nagaraj) ಅವರಿಗೂ ಒಂದು ಪಾತ್ರ ಇದೆ. ಶಶಾಂಕ್​ ನಿರ್ದೇಶನದ ಈ ಸಿನಿಮಾ ಬಿಡುಗಡೆಗೂ ಮುನ್ನವೇ ದೊಡ್ಡ ಟಾಕ್​ ಕ್ರಿಯೇಟ್​ ಮಾಡಿದೆ. ಜನರಿಂದ ಬಾಯಿ ಮಾತಿನ ಪ್ರಚಾರ ಸಿಗುತ್ತಿರುವ ಕಾರಣ ಶುಕ್ರವಾರ (ಜುಲೈ 28) ಕೂಡ ಹೌಸ್​ಫುಲ್​ ಆಗುವುದು ಖಚಿತವಾಗಿದೆ.

ಇತ್ತೀಚೆಗಷ್ಟೇ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಪೇಯ್ಡ್​ ಪ್ರೀಮಿಯರ್​ ಶೋನ ಬುಕಿಂಗ್​ ಶುರುವಾಗಿತ್ತು. ಕೆಲವೇ ಗಂಟೆಗಳಲ್ಲಿ ಎಲ್ಲ ಟಿಕೆಟ್​ಗಳು ಸೋಲ್ಡ್​ಔಟ್​ ಆದವು ಎಂಬುದು ವಿಶೇಷ. ಡಾರ್ಲಿಂಗ್​ ಕೃಷ್ಣ ಮತ್ತು ಮಿಲನಾ ನಾಗರಾಜ್​ ಅವರ ಕಾಂಬಿನೇಷನ್​​ಗೆ ಪ್ರತ್ಯೇಕವಾದ ಫ್ಯಾನ್​ ಬೇಸ್​ ಇದೆ. ಇನ್ನು, ಶಶಾಂಕ್​ ಅವರ ನಿರ್ದೇಶನಕ್ಕೂ ಅಭಿಮಾನಿ ಬಳಗ ಇದೆ. ಹಾಡುಗಳು ಕೂಡ ಸೂಪರ್​ ಹಿಟ್​ ಆಗಿವೆ. ಈ ಎಲ್ಲ ಕಾರಣಗಳಿಂದ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಮೇಲೆ ಜನರು ನಿರೀಕ್ಷೆ ಇಟ್ಟುಕೊಂಡಿದ್ದರು. ಆ ನಿರೀಕ್ಷೆಯ ಮಟ್ಟವನ್ನು ತಲುಪುವಲ್ಲಿ ಈ ಚಿತ್ರ ಯಶಸ್ವಿ ಆಗಿದೆ ಎನ್ನುತ್ತಿದ್ದಾರೆ ಪ್ರೇಕ್ಷಕರು.

‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ ಅವರ ಪಾತ್ರಕ್ಕೆ ಬೇರೆ ಬೇರೆ ಶೇಡ್ಸ್​ ಇವೆ. ‘ಎಲ್ಲ ಪುರುಷರು ತಮ್ಮ ಕುಟುಂಬದವರ ಜೊತೆಯಲ್ಲಿ ಕುಳಿತು ನೋಡಲೇಬೇಕಾದ ಸಿನಿಮಾ ಇದು’ ಎಂದು ಪ್ರೇಕ್ಷಕರು ಹೇಳುತ್ತಿದ್ದಾರೆ. ಮಿಲನಾ ನಾಗರಾಜ್​ ಅವರ ಪಾತ್ರದಲ್ಲಿ ಇರುವ ಸಸ್ಪೆನ್ಸ್​ ಮತ್ತು ಟ್ವಿಸ್ಟ್​ ಕೂಡ ಜನರಿಗೆ ಇಷ್ಟ ಆಗಿದೆ. ಒಟ್ಟಾರೆಯಾಗಿ ಸಿನಿಮಾ ಮೂಡಿಬಂದಿರುವ ರೀತಿಗೆ ಜನರು ಫಿದಾ ಆಗಿದ್ದಾರೆ. ನಾಗಭೂಷಣ, ಅಚ್ಯುತ್​ ಕುಮಾರ್​, ರಂಗಾಯಣ ರಘು, ಸುಧಾ ಬೆಳವಾಡಿ ಮುಂತಾದ ಕಲಾವಿದರ ನಟನೆಗೆ ಪ್ರೇಕ್ಷಕರು ಭೇಷ್​ ಎನ್ನುತ್ತಿದ್ದಾರೆ.

ಇದನ್ನೂ ಓದಿ: Milana Nagaraj: ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಸರ್ಪ್ರೈಸ್​ ಎಂಟ್ರಿ ನೀಡಿದ ಮಿಲನಾ ನಾಗರಾಜ್​; ಹೆಚ್ಚಿತು ನಿರೀಕ್ಷೆ

ಲವ್​ ಮತ್ತು ಕೌಟುಂಬಿಕ ಕಥಾಹಂದರದ ಸಿನಿಮಾಗಳನ್ನು ಕಟ್ಟಿಕೊಡುವಲ್ಲಿ ನಿರ್ದೇಶಕ ಶಶಾಂಕ್​ ಅವರು ಫೇಮಸ್​. ‘ಮೊಗ್ಗಿನ ಮನಸು’, ‘ಕೃಷ್ಣ ಲೀಲಾ’ ಮುಂತಾದ ಸಿನಿಮಾಗಳ ಮೂಲಕ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಈಗ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಕೂಡ ಅವರ ಹಿಟ್​ ಚಿತ್ರಗಳ ಪಟ್ಟಿಗೆ ಸೇರ್ಪಡೆ ಆಗುವ ಸೂಚನೆ ಸಿಕ್ಕಿದೆ. ಪೇಯ್ಡ್​ ಪ್ರೀಮಿಯರ್​ ಶೋ ನೋಡಿ ಮೆಚ್ಚುಗೆ ಸೂಚಿಸಿದ ಪ್ರೇಕ್ಷಕರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡು ಚಿತ್ರತಂಡದವರು ಧನ್ಯವಾದ ತಿಳಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು