AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darling Krishna: ಬಿಲ್ಡಪ್​, ಹೈಪ್​ ಇಲ್ಲದೇ ರಿಲೀಸ್​ ಡೇಟ್​ ತಿಳಿಸಿದ ‘ಕೌಸಲ್ಯ ಸುಪ್ರಜಾ ರಾಮ’; ಜುಲೈ 28ಕ್ಕೆ ಬರಲಿದೆ ಶಶಾಂಕ್​-ಡಾರ್ಲಿಂಗ್​ ಕೃಷ್ಣ ಸಿನಿಮಾ

Kousalya Supraja Rama: ಹಾಡುಗಳ ಮೂಲಕ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ನಿರೀಕ್ಷೆ ಮೂಡಿಸಿದೆ. ಮೋಷನ್​ ಪೋಸ್ಟರ್​ ಮೂಲಕ ಈ ಚಿತ್ರದ ರಿಲೀಸ್​ ಡೇಟ್​ ತಿಳಿಸಲಾಗಿದೆ.

Darling Krishna: ಬಿಲ್ಡಪ್​, ಹೈಪ್​ ಇಲ್ಲದೇ ರಿಲೀಸ್​ ಡೇಟ್​ ತಿಳಿಸಿದ ‘ಕೌಸಲ್ಯ ಸುಪ್ರಜಾ ರಾಮ’; ಜುಲೈ 28ಕ್ಕೆ ಬರಲಿದೆ ಶಶಾಂಕ್​-ಡಾರ್ಲಿಂಗ್​ ಕೃಷ್ಣ ಸಿನಿಮಾ
ಡಾರ್ಲಿಂಗ್​ ಕೃಷ್ಣ, ನಿರ್ದೇಶಕ ಶಶಾಂಕ್​
ಮದನ್​ ಕುಮಾರ್​
|

Updated on: Jul 02, 2023 | 8:04 AM

Share

ಡಾರ್ಲಿಂಗ್​ ಕೃಷ್ಣ ನಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ (Kousalya Supraja Rama) ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ರಿಲೀಸ್​ ದಿನಾಂಕವನ್ನು ನಿರ್ದೇಶಕ ಶಶಾಂಕ್​ ಅವರು ಅನೌನ್ಸ್​ ಮಾಡಿದ್ದಾರೆ. ಯಾವುದೇ ಹೈಪ್​, ಬಿಲ್ಡಪ್​ ಇಲ್ಲದೇ ಅವರು ಬಿಡುಗಡೆ ದಿನಾಂಕವನ್ನು ತಿಳಿಸಿದ್ದಾರೆ. ಜುಲೈ 28ರಂದು ಈ ಚಿತ್ರ ತೆರೆಕಾಣಲಿದೆ. ಶಶಾಂಕ್ (Director Shashank) ಮತ್ತು ಡಾರ್ಲಿಂಗ್​ ಕೃಷ್ಣ ಅವರ ಕಾಂಬಿನೇಷನ್​ ಆದ್ದರಿಂದ ಸಿನಿಪ್ರಿಯರಲ್ಲಿ ನಿರೀಕ್ಷೆ ಹೆಚ್ಚಿದೆ. ಈ ಸಿನಿಮಾದಲ್ಲಿ ಡಾರ್ಲಿಂಗ್​ ಕೃಷ್ಣ (Darling Krishna) ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಈಗಾಗಲೇ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಹಾಡುಗಳು ಸೂಪರ್​ ಹಿಟ್​ ಆಗಿವೆ. ಚಿತ್ರಮಂದಿರದಲ್ಲಿ ಆದಷ್ಟು ಬೇಗ ಈ ಸಿನಿಮಾ ನೋಡಬೇಕು ಎಂದುಕೊಂಡಿದ್ದ ಅಭಿಮಾನಿಗಳು ರಿಲೀಸ್​ ಡೇಟ್​ ಕೇಳಿ ಖುಷಿಪಟ್ಟಿದ್ದಾರೆ.

ರಿಲೀಸ್​ ಡೇಟ್​ ತಿಳಿಸುವುದಕ್ಕೂ ಮುನ್ನ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರತಂಡದವರು ಒಂದು ವಿಡಿಯೋ ಹಂಚಿಕೊಂಡಿದ್ದರು. ಬಹಳ ಸಿಂಪಲ್​ ಆಗಿ ಬಿಡುಗಡೆ ದಿನಾಂಕ ಘೋಷಿಸುವುದಾಗಿ ಶಶಾಂಕ್ ಹೇಳುತ್ತಾರೆ. ಹೈಪ್​, ಬಿಲ್ಡಪ್​ ಏನೂ ಇಲ್ವಾ ಅಂತಾ ಮಿಲನಾ ನಾಗರಾಜ್​ ಕೇಳುತ್ತಾರೆ. ಕಂಟೆಂಟ್​ ಚೆನ್ನಾಗಿದ್ದರೆ ಯಾವುದೇ ಹೈಪ್​, ಬಿಲ್ಡಪ್​ ಬೇಡ ಎಂಬುದು ಶಶಾಂಕ್​ ಅವರ ನಂಬಿಕೆ. ಹಾಗಾಗಿ ತುಂಬ ಸಿಂಪಲ್​ ಆಗಿ, ಒಂದು ಮೋಷನ್​ ಪೋಸ್ಟರ್​ ಮೂಲಕ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ರಿಲೀಸ್​ ಡೇಟ್​ ತಿಳಿಸಲಾಗಿದೆ.

ನಿರ್ದೇಶಕ ಶಶಾಂಕ್​ ಅವರಿಗೆ ಚಿತ್ರರಂಗದಲ್ಲಿ ಹಲವು ವರ್ಷಗಳ ಅನುಭವ ಇದೆ. ‘ಮೊಗ್ಗಿನ ಮನಸು’, ‘ಕೃಷ್ಣ ಲೀಲಾ’, ‘ಕೃಷ್ಣನ್​ ಲವ್​ ಸ್ಟೋರಿ’ ಮುಂತಾದ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಅವರ ಸಿನಿಮಾಗಳಲ್ಲಿ ಹಾಡುಗಳಿಗೆ ತುಂಬ ಪ್ರಾಮುಖ್ಯತೆ ಇರುತ್ತದೆ. ಕಳೆದ ವರ್ಷ ರಿಲೀಸ್​ ಆದ ‘ಲವ್​ 360’ ಚಿತ್ರದ ಹಾಡುಗಳು ಕೂಡ ಸಖತ್​ ಜನಪ್ರಿಯತೆ ಪಡೆದುಕೊಂಡವು. ಪ್ರೇಮಕಥೆಗಳನ್ನು ತೆರೆಗೆ ತರುವುದರಲ್ಲಿ ಶಶಾಂಕ್​ ಅವರು ಫೇಮಸ್​. ಈಗ ಅವರು ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ಕೂಡ ಒಂದು ಸ್ಪೆಷಲ್​ ಕಹಾನಿಯನ್ನು ಜನರ ಮುಂದಿಡಲು ಸಜ್ಜಾಗಿದ್ದಾರೆ. ಈ ಚಿತ್ರಕ್ಕೆ ಅರ್ಜುನ್​ ಜನ್ಯ ಸಂಗೀತ ನೀಡಿದ್ದಾರೆ.

ಇದನ್ನೂ ಓದಿ: ಡಾರ್ಲಿಂಗ್​ ಕೃಷ್ಣ ಜನ್ಮದಿನ; ಹೀರೋ ಆಗಿ 10 ವರ್ಷ: 2 ವಿಶೇಷ ಕಾರಣಗಳಿಗೆ ಶುಭ ಕೋರಿದ ಮಿಲನಾ ನಾಗರಾಜ್​

‘ಲವ್​ ಮಾಕ್ಟೇಲ್​’ ಸಿನಿಮಾ ಸೂಪರ್​ ಹಿಟ್​ ಆದ ಬಳಿಕ ಡಾರ್ಲಿಂಗ್​ ಕೃಷ್ಣ ಅವರ ಖ್ಯಾತಿ ಹೆಚ್ಚಿತು. ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಅವರೊಂದು ಡಿಫರೆಂಟ್​ ಪಾತ್ರ ಮಾಡಿದ್ದಾರೆ. ಆ ಪಾತ್ರ ಹೇಗಿರಲಿದೆ ಎಂಬುದನ್ನು ಈಗಾಗಲೇ ‘ಶಿವಾನಿ..’ ಹಾಡಿನಲ್ಲಿ ವಿವರಿಸಲಾಗಿದೆ. ಪೂರ್ತಿ ಸಿನಿಮಾ ನೋಡಲು ಪ್ರೇಕ್ಷಕರು ಕಾದಿದ್ದಾರೆ. ಈ ಸಿನಿಮಾದ ಪ್ರಚಾರದಲ್ಲಿ ಮಿಲನಾ ನಾಗರಾಜ್​ ಕೂಡ ಕೈ ಜೋಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ