Darling Krishna: ಡಾರ್ಲಿಂಗ್ ಕೃಷ್ಣ ಬರ್ತ್ಡೇಗೆ ರಿಲೀಸ್ ಆದ ‘ಶುಗರ್ ಫ್ಯಾಕ್ಟರಿ’ ಟೀಸರ್ ನೋಡಿದ್ರಾ?
Sugar Factory Teaser: ಟೀಸರ್ ಎಂದರೆ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಡಲಾಗುತ್ತದೆ. ಆದರೆ, ‘ಶುಗರ್ ಫ್ಯಾಕ್ಟರಿ’ ನಿರ್ದೇಶಕರು ರಹಸ್ಯ ಕಾಯ್ದುಕೊಂಡಿದ್ದಾರೆ.
ಲವ್ ಮಾಕ್ಟೇಲ್ ಸಿನಿಮಾ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ ಅವರಿಗೆ ಇಂದು ಜನ್ಮ ದಿನದ ಸಂಭ್ರಮ. ಈ ವಿಶೇಷ ದಿನದಂದು ಅವರಿಗೆ ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳಿಂದ ಶುಭಾಶಯಗಳ ಮಹಾಪೂರ ಹರಿದುಬರುತ್ತಿದೆ. ಇಂದು ಅವರ ಬರ್ತ್ಡೇ ಹಿನ್ನೆಲೆಯಲ್ಲಿ ‘ಶುಗರ್ ಫ್ಯಾಕ್ಟರಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಟೀಸರ್ ಎಂದರೆ ಒಂದಷ್ಟು ವಿಚಾರಗಳನ್ನು ಬಿಟ್ಟುಕೊಡಲಾಗುತ್ತದೆ. ಆದರೆ, ‘ಶುಗರ್ ಫ್ಯಾಕ್ಟರಿ’ ನಿರ್ದೇಶಕರು ರಹಸ್ಯ ಕಾಯ್ದುಕೊಂಡಿದ್ದಾರೆ. ಇಡೀ ಟೀಸರ್ ಕೇವಲ ಒಂದು ದೃಶ್ಯಕ್ಕೆ ಮಾತ್ರ ಸೀಮಿತವಾಗಿದ್ದು, ಅಭಿಮಾನಿಗಳಿಗೆ ಕೊಂಚ ಬೇಸರವಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ಸಿಗುವ ನಿರೀಕ್ಷೆ ಅಭಿಮಾನಿಗಳದ್ದು.
‘ಶುಗರ್ ಫ್ಯಾಕ್ಟರಿ’ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಚಿತ್ರೀಕರಣ ನಡೆದಿದೆ. ಲಾಕ್ ಡೌನ್ ಮುಗಿದು, ಚಿತ್ರೀಕರಣಕ್ಕೆ ಅನುಮತಿ ದೊರಕಿದ ಕೂಡಲೇ ಉಳಿದ ಭಾಗದ ಶೂಟಿಂಗ್ ನಡೆಸುವ ಆಲೋಚನೆ ಚಿತ್ರತಂಡದ್ದು. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಲ್ ಮೊಂತೆರೋ, ಅದ್ವಿತಿ ಶೆಟ್ಟಿ ಅಭಿನಯಿಸುತ್ತಿದ್ದಾರೆ. ರಂಗಾಯಣ ರಘು, ಲವ್ ಮಾಕ್ಟೇಲ್ ಅಭಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಕಬೀರ್ ರಫಿ ಸಂಗೀತ ನಿರ್ದೇಶನ, ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಅರ್ಜುನ್ ಸಾಹಸ ನಿರ್ದೇಶನ ಹಾಗೂ ಧನಂಜಯ್ ಅವರ ನೃತ್ಯ ನಿರ್ದೇಶನವಿರುವ ‘ಶುಗರ್ ಫ್ಯಾಕ್ಟರಿ’ಗೆ ಚೇತನ್ ಕುಮಾರ್ ಹಾಗೂ ಯೋಗಾನಂದ್ ಮುದ್ದಾನ್ ಸಂಭಾಷಣೆ ಬರೆಯುತ್ತಿದ್ದಾರೆ. ಬಾಲಮಣಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಗಿರೀಶ್. ಆರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಟಿಸಿದ್ದ ಲವ್ ಮಾಕ್ಟೇಲ್ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. 2020ರಲ್ಲಿ ರಿಲೀಸ್ ಆಗಿದ್ದ ಈ ಸಿನಿಮಾ ದೊಡ್ಡಮಟ್ಟದಲ್ಲಿ ಹಿಟ್ ಆಗಿತ್ತು. ಈ ಸಿನಿಮಾ ನಂತರದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಸಾಕಷ್ಟು ಆಫರ್ಗಳು ಬರುತ್ತಿವೆ.
ಇದನ್ನೂ ಓದಿ: Darling Krishna Birthday: ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬದ ದಿನ ಮಿಲನಾ ನಾಗರಾಜ್ ನೀಡಿದ ಗಿಫ್ಟ್ ಏನು?