AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ. ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ […]

ಶಿವರಾತ್ರಿಗೆ ರಾಬರ್ಟ್​ ದರ್ಶನ: ಕೊನೆಗೂ ಘೋಷಣೆ ಆಯ್ತು ಡಿ ಬಾಸ್​ ಸಿನಿಮಾ ರಿಲೀಸ್​ ಡೇಟ್
ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 2:43 PM

Share

ಎಲ್ಲವೂ ಅಂದಕೊಂಡಂತೆ ನಡೆದಿದ್ದರೆ ಕಳೆದ ವರ್ಷವೇ ದರ್ಶನ್​ ನಟನೆಯ ರಾಬರ್ಟ್​ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಕೊರೊನಾ ವೈರಸ್​ ಸೋಂಕಿನ ಕಾರಣದಿಂದಾಗಿ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿತ್ತು. ಈಗ ಡಿ-ಬಾಸ್​ ಸಿನಿಮಾದ ರಿಲೀಸ್​ ದಿನಾಂಕ ಘೋಷಣೆ ಆಗಿದ್ದು, ಶಿವರಾತ್ರಿಗೆ ರಾಬರ್ಟ್​ ದರ್ಶನ ನೀಡಲಿದ್ದಾನೆ.

ಸದ್ಯ, ಥಿಯೇಟರ್​ಗೆ ಜನರು ಅಷ್ಟಾಗಿ ಬರುತ್ತಿಲ್ಲ. ಹೀಗಾಗಿ, ಸಾಕಷ್ಟು ಸಿನಿಮಾ ನಿರ್ಮಾಪಕರು ಚಿತ್ರವನ್ನು ಒಟಿಟಿಯಲ್ಲಿ ರಿಲೀಸ್​ ಮಾಡುತ್ತಿದ್ದಾರೆ. ಈ ಮಧ್ಯೆ ರಾಬರ್ಟ್​ ಚಿತ್ರ ಕೂಡ ಒಟಿಟಿಯಲ್ಲಿ ಬಿಡುಗಡೆ​ ಆಗಲಿದೆ ಎಂದು ಹೇಳಲಾಗಿತ್ತು. ದರ್ಶನ್​ ಕಟೌಟ್​ಗೆ ಹಾಲಿನ ಅಭಿಷೇಕ ಮಾಡಿ ಸಿನಿಮಾ ಸ್ವಾಗತಿಸಬೇಕು ಎಂದು ಯೋಜನೆ ಹಾಕಿಕೊಂಡಿದ್ದ ಅಭಿಮಾನಿಗಳಿಗೆ ಈ ಸುದ್ದಿ ತುಂಬಾನೇ ಬೇಸರ ಮೂಡಿಸಿತ್ತು. ಈಗ ಚಿತ್ರ ತಂಡ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದೆ.

ಇಂದು ಮುಂಜಾನೆ 11 ಗಂಟೆಗೆ ದರ್ಶನ್​ ಫೇಸ್​ಬುಕ್​ ಲೈವ್ ಬಂದಿದ್ದರು. ಈ ವೇಳೆ ದರ್ಶನ್​ ಸಿನಿಮಾ ರಿಲೀಸ್​ ದಿನಾಂಕ ಘೋಷಣೆ ಮಾಡಿದ್ದಾರೆ. ಮಾರ್ಚ್​ 11ರಂದು ನಾವು ಚಿತ್ರಮಂದಿರಕ್ಕೆ ಬರುತ್ತೇವೆ ಎಂದು ದರ್ಶನ್​ ಹೇಳಿದ್ದಾರೆ.

ಸಿನಿಮಾ ತೆರೆಗೆ ಬರೋಕೆ ಇನ್ನೂ ಎರಡು ತಿಂಗಳು ಬಾಕಿ ಇದೆ. ಕೊರೊನಾ ವೈರಸ್​ ಅಬ್ಬರ ನಿಧಾನವಾಗಿ ಕಡಿಮೆ ಆಗುತ್ತಿದೆ. ಹೀಗಾಗಿ, ಮಾರ್ಚ್​ ವೇಳೆಗೆ ಚಿತ್ರಮಂದಿರದಲ್ಲಿ ಪೂರ್ತಿಯಾಗಿ ಪ್ರೇಕ್ಷಕರನ್ನು ಕೂರಿಸಲು ಅವಕಾಶ ನೀಡಿದರೂ ಆಶ್ಚರ್ಯವಿಲ್ಲ. ಹಾಗಾದಲ್ಲಿ ಚಿತ್ರಕ್ಕೆ ಪ್ಲಸ್​ ಪಾಯಿಂಟ್​ ಆಗಲಿದೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ