AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಗೇರಿಯ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ದಾಖಲು; ಚಿಕಿತ್ಸೆ ಆರಂಭ

ನಟ ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಇದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ಅವರು ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿದ್ದಾರೆ. ಈಗ ಅವರು ಬೆಂಗಳೂರಿನ ಕೆಂಗೇರಿಯ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದಿನಿಂದಲೇ (ನವೆಂಬರ್​ 1) ಅವರಿಗೆ ಚಿಕಿತ್ಸೆ ಆರಂಭಿಸಲಾಗುತ್ತಿದೆ. ಶೀಘ್ರವೇ ಅವರು ವರದಿ ಸಲ್ಲಿಸಬೇಕಿದೆ.

ಕೆಂಗೇರಿಯ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದರ್ಶನ್ ದಾಖಲು; ಚಿಕಿತ್ಸೆ ಆರಂಭ
ಆಸ್ಪತ್ರೆಗೆ ದಾಖಲಾದ ದರ್ಶನ್
ಮದನ್​ ಕುಮಾರ್​
|

Updated on: Nov 01, 2024 | 4:15 PM

Share

ಬೆನ್ನು ನೋವಿನಿಂದ ನಟ ದರ್ಶನ್​ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಒಂದು ವಾರದ ಒಳಗೆ ಅವರು ಚಿಕಿತ್ಸೆಯ ಕುರಿತು ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಬೇಕಿದೆ. ಈಗಾಗಲೇ ಜಾಮೀನು ಪಡೆದು 2 ದಿನ ಕಳೆದಿದೆ. ಆದ್ದರಿಂದ ಸಮಯ ವ್ಯರ್ಥ ಮಾಡದೇ ಇಂದು (ನವೆಂಬರ್​ 1) ಅವರು ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್​ ಗ್ಲೋಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ದರ್ಶನ್ ಆಗಮಿಸಿರುವ ಕಾರಣದಿಂದ ಆಸ್ಪತ್ರೆಗೆ ಹೊರಗೆ ಸಾಕಷ್ಟು ಸಂಖ್ಯೆಯ ಅಭಿಮಾನಿಗಳು ನೆರೆದಿದ್ದಾರೆ. ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.

ನಾಲ್ಕು ತಿಂಗಳ ಬಳಿಕ ಜೈಲಿನಿಂದ ಹೊರಗೆ ಬಂದಿರುವ ದರ್ಶನ್​ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿರುವುದರಿಂದ ಬಿಜಿಎಸ್ ಆಸ್ಪತ್ರೆಯ ಬಳಿ ಕೆಂಗೇರಿ ಠಾಣೆ ಪೊಲೀಸರಿಂದ ಬಂದೋಬಸ್ತ್ ಮಾಡಲಾಗಿದೆ. ಒಂದು ಕೆಎಸ್ಆರ್​ಪಿ ತುಕಡಿ ಜೊತೆ 50ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

2013ರಲ್ಲೂ ಬೆನ್ನುನೋವಿನ ಚಿಕಿತ್ಸೆಗೆ ದರ್ಶನ್​ ಅವರು ಬಿಜಿಎಸ್​ ಆಸ್ಪತ್ರೆಗೆ ದಾಖಲಾಗಿದ್ದರು. ‘ಬೃಂದಾವನ’ ಸಿನಿಮಾದ ಶೂಟಿಂಗ್​ ವೇಳೆ ಕುದುರೆ ಮೇಲಿಂದ ಬಿದ್ದಿದ್ದರಿಂದ ಅವರಿಗೆ ನೋವು ಕಾಣಿಸಿಕೊಂಡಿತ್ತು. ಆಗಲೂ ಇದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಈಗ ಪತ್ನಿ ವಿಜಯಲಕ್ಷ್ಮಿ ಹಾಗೂ ಸ್ನೇಹಿತ ಧನ್ವೀರ್​ ಜೊತೆ ದರ್ಶನ್ ಅವರು ಆಸ್ಪತ್ರೆಗೆ ಬಂದಿದ್ದಾರೆ.

ನಟ ದರ್ಶನ್​ ವಿಚಾರದಲ್ಲಿ ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ನಿಜ ಆಯ್ತು

ಮೊದಲು ದರ್ಶನ್ ಅವರು ಜಾಮೀನು ಪಡೆಯಲು ಪ್ರಯತ್ನಿಸಿದ್ದಾಗ ಅರ್ಜಿ ವಜಾ ಆಗಿತ್ತು. ಆ ಬಳಿಕ ಅವರಿಗೆ ಬೆನ್ನು ನೋವಿನ ಸಮಸ್ಯೆ ಜಾಸ್ತಿ ಆಯಿತು. ದರ್ಶನ್​ ನಡೆಯಲು ಕೂಡ ಕಷ್ಟಪಡುವಂತಹ ಪರಿಸ್ಥಿತಿ ಬಂತು. ಹಾಗಾಗಿ ಬಳ್ಳಾರಿಯಲ್ಲಿ ವೈದ್ಯರು ತಪಾಸಣೆ ನಡೆಸಿ, ಸರ್ಜರಿಯ ಅಗತ್ಯ ಇದೆ ಎಂದು ಹೇಳಿದ್ದರು. ಆ ವರದಿಯ ಆಧಾರದಲ್ಲಿ ಮತ್ತೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಬುಧವಾರ (ಅ.30) ಅವರಿಗೆ ಜಾಮೀನು ನೀಡಲಾಯಿತು. ಆರು ವಾರದ ಒಳಗೆ ಅವರು ಚಿಕಿತ್ಸೆ ಪಡೆಯಬೇಕಿದೆ. ಒಟ್ಟು 131 ದಿನಗಳ ಕಾಲ ಜೈಲಿನಲ್ಲಿ ಇದ್ದ ದರ್ಶನ್ ಈಗ ಹೊರಗೆ ಬಂದಿದ್ದಾರೆ. ಹಲವು ಷರತ್ತುಗಳ ಮೇಲೆ ಜಾಮೀನು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್