AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಡ್ಜ್​ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು; ಮತ್ತೆ ಜೈಲೇ ಗತಿ?

ಜೈಲು ಊಟ ಸೇವಿಸಿದ್ದರಿಂದ ದರ್ಶನ್​ ಅವರಿಗೆ ಏನೆಲ್ಲ ಸಮಸ್ಯೆಗಳು ಆಗಿವೆ ಎಂಬುದನ್ನು ನ್ಯಾಯಾಲಯಕ್ಕೆ ವಕೀಲರು ವಿವರಿಸಿದ್ದರು. ಆ ಬಗ್ಗೆ ತಪಾಸಣೆ ನಡೆಸುವಂತೆ ಜೈಲಿನ ವೈದ್ಯರಿಗೆ ನ್ಯಾಯಾಲಯ ಸೂಚನೆ ನೀಡಿತ್ತು. ವೈದ್ಯರು ನೀಡುವ ವರದಿಯ ಆಧಾರದ ಮೇಲೆ ದರ್ಶನ್​ಗೆ ಮನೆ ಊಟ ತರಿಸಲು ಕೋರ್ಟ್​ ಅನುಮತಿ ನೀಡುತ್ತಾ ಎಂಬ ಕೌತುಕ ಮೂಡಿದೆ.

ಇಂದು ಜಡ್ಜ್​ ಮುಂದೆ ದರ್ಶನ್ ಆ್ಯಂಡ್ ಗ್ಯಾಂಗ್ ಹಾಜರು; ಮತ್ತೆ ಜೈಲೇ ಗತಿ?
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: Jul 18, 2024 | 6:57 AM

Share

ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ದರ್ಶನ್ ಹಾಗೂ ಗ್ಯಾಂಗ್​ನ ಅರೆಸ್ಟ್ ಮಾಡಲಾಗಿದೆ. ಸದ್ಯ ದರ್ಶನ್ ಹಾಗೂ ಆತನ ಸಹಚರರು ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಇಂದು (ಜುಲೈ 18) ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳಲಿದೆ. ಹೀಗಾಗಿ, ಅವರನ್ನು ಮತ್ತೆ ನ್ಯಾಯಾಧೀಶರ ಎದುರು ಹಾಜರು ಪಡಿಸಲಾಗುತ್ತಿದೆ. ಈ ವೇಳೆ ಅವರುಗಳ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗೋ ಸಾಧ್ಯತೆ ಇದೆ.

ನಟ ದರ್ಶನ್ ಹಾಗೂ ಇತರರು ಜೂನ್ 11ರಂದು ಬಂಧನಕ್ಕೆ ಒಳಗಾದರು. ಬಂಧನದ ಬಳಿಕ ಒಂದೊಂದೇ ಸತ್ಯ ಹೊರ ಬರುತ್ತಿದೆ. ಇನ್ನೂ ಚಾರ್ಜ್​ಶೀಟ್ ಸಲ್ಲಿಕೆ ಮಾಡಿಲ್ಲ. ಇದೇ ಕಾರಣ ಇಟ್ಟುಕೊಂಡು ದರ್ಶನ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಗೆ ಕೋರಲು ನಿರ್ಧರಿಸಲಾಗಿದೆ. ಆರೋಪಿಗಳನ್ನು ಜಡ್ಜ್​ ಮುಂದೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಾಜರುಪಡಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಜೈಲು ಊಟದಿಂದ ದರ್ಶನ್​ಗೆ ಆಗಿದೆ ಹಲವು ಆರೋಗ್ಯ ಸಮಸ್ಯೆ; ಇಲ್ಲಿದೆ ವಿವರ

ಪೊಲೀಸರ ವಾದ ಏನು?

ನಟ ದರ್ಶನ್ ಅವರು ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ಸಿಕ್ಕರೆ ಹೊರ ಬಂದು ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಪೊಲೀಸರು ಕೋರ್ಟ್ ಎದುರು ಆತಂಕ ಹೊರಹಾಕಲಿದ್ದಾರೆ. ಇದರ ಜೊತೆಗೆ ಅವರು ವಿದೇಶಕ್ಕೆ ತೆರಳುವ ಭಯವೂ ಇದೆ ಎಂದು ಪೊಲೀಸರು ಹೇಳಿದ್ದಾರೆ.

ಊಟಕ್ಕೆ ಬೇಡಿಕೆ

ಇದರ ನಡುವೆ ಮನೆ ಊಟ ಕಲ್ಪಿಸುವಂತೆ ಕೋರಿ ರಿಟ್ ಅರ್ಜಿಯೂ ಇಂದು ವಿಚಾರಣೆ ನಡೆಯಲಿದೆ. ನಟ ದರ್ಶನ್ ಅರ್ಜಿಗೆ ಜೈಲು ಅಧಿಕಾರಿಗಳು ಆಕ್ಷೇಪಣೆ ಸಲ್ಲಿಸಲಿದ್ದಾರೆ. ಪ್ರಕರಣದ ತನಿಖಾಧಿಕಾರಿಗಳಿಂದಲೂ ಆಕ್ಷೇಪಣೆ ಸಲ್ಲಿಸುವ ಸಾಧ್ಯತೆ ಇದೆ. ಮಧ್ಯಾಹ್ನದ ಬಳಿಕ ನಟ ದರ್ಶನ್ ರಿಟ್ ಅರ್ಜಿ ವಿಚಾರಣೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.