Devil Trailer: ಕ್ಷಣಕ್ಕೊಂದು ಬಣ್ಣ, ಗಳಿಗೆಗೊಂದು ವೇಷ; ಇದು ‘ಡೆವಿಲ್’ ನಿಜರೂಪ

ಡೆವಿಲ್​ ಸಿನಿಮಾ ಟ್ರೇಲರ್​: ‘ಡೆವಿಲ್’ ಸಿನಿಮಾಗೆ ಪ್ರಕಾಶ್ ನಿರ್ದೇಶನ ಮಾಡುವುದರಿಂದ ನಿರೀಕ್ಷೆ ಹೆಚ್ಚಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿದ್ದಾರೆ. ಅವರು ಇಲ್ಲದೆ ಅಭಿಮಾನಿಗಳು ಚಿತ್ರವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ.

Devil Trailer: ಕ್ಷಣಕ್ಕೊಂದು ಬಣ್ಣ, ಗಳಿಗೆಗೊಂದು ವೇಷ; ಇದು ‘ಡೆವಿಲ್’ ನಿಜರೂಪ
Devil Trailer

Updated on: Dec 05, 2025 | 10:18 AM

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಗುತ್ತಿದೆ. ಇದಕ್ಕೂ ಒಂದು ವಾರ ಮೊದಲು ಚಿತ್ರದ ಟ್ರೇಲರ್ ಬಿಡುಗಡೆ ಕಂಡಿದೆ. ‘ಡೆವಿಲ್’ ಸಿನಿಮಾ ಯಾವ ರೀತಿ ಇರಲಿದೆ ಎಂಬುದರ ಝಲಕ್ ಸಿಕ್ಕಿದೆ. ಹೊಸ ಅವತಾರದಲ್ಲಿ ದರ್ಶನ್ ಅವರನ್ನು ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ಸಿನಿಮಾ ಬಗ್ಗೆ ಇರುವ ನಿರೀಕ್ಷೆಯನ್ನು ಟ್ರೇಲರ್ ಹೆಚ್ಚಿಸಿದೆ.

ದರ್ಶನ್ ಅವರು ಟ್ರೇಲರ್​ನಲ್ಲಿ ಹಲವು ಗೆಟಪ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಗಮನ ಸೆಳೆಯುವಂತಿದೆ. ‘ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನು ಬರ್ತಿದೀನಿ ಚಿನ್ನ’ ಎಂದು ದರ್ಶನ್ ಡೈಲಾಗ್ ಹೇಳುವಾಗ ರಿಲೀಸ್ ದಿನಾಂಕ ತೋರಿಸಲಾಗುತ್ತದೆ. ವಿನಯ್ ಗೌಡ, ಅಚ್ಯುತ್ ಕುಮಾರ್ ಹಾಗೂ ಗಿಲ್ಲಿ ನಟ ಮೊದಲಾದವರನ್ನು ಟ್ರೇಲರ್​ನಲ್ಲಿ ತೋರಿಸಲಾಗಿದೆ.

‘ಡೆವಿಲ್’ ನಿರ್ದೇಶಕ ಮಿಲನ ಪ್ರಕಾಶ್ ಚಿತ್ರರಂಗದಲ್ಲಿ ಕಳೆದ 22 ವರ್ಷಗಳಿಂದ ಇದ್ದಾರೆ. ‘ಖುಷಿ’ ಅವರು ನಿರ್ದೇಶನ ಮಾಡಿದ ಮೊದಲ ಚಿತ್ರ. ಈ ಸಿನಿಮಾ 2003ರಲ್ಲಿ ಬಂತು. 2007ರಲ್ಲಿ ಬಂದ ‘ಮಿಲನ’ ಸೂಪರ್ ಹಿಟ್ ಆಯಿತು. ಪುನೀತ್ ರಾಜ್​ಕುಮಾರ್ ಹಾಗೂ ಪಾರ್ವತಿ ಮೆನನ್ ಈ ಸಿನಿಮಾದಲ್ಲಿ ನಟಿಸಿದ್ದರು. ದರ್ಶನ್ ಜೊತೆ ಅವರು ಈ ಮೊದಲು ‘ತಾರಕ್’ ಅಲ್ಲಿ ಕೆಲಸ ಮಾಡಿದ್ದರು. ಈಗ ಇಬ್ಬರೂ ‘ಡೆವಿಲ್’ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದಾರೆ.

‘ಡೆವಿಲ್’ ಸಿನಿಮಾಗೆ ಪ್ರಕಾಶ್ ನಿರ್ದೇಶನ ಮಾಡುವುದರಿಂದ ನಿರೀಕ್ಷೆ ಹೆಚ್ಚಿದೆ. ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿದ್ದಾರೆ. ಅವರು ಇಲ್ಲದೆ ಅಭಿಮಾನಿಗಳು ಚಿತ್ರವನ್ನು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈಗಾಗಲೇ ರಿಲೀಸ್ ಆದ ಹಾಡುಗಳು ಗಮನ ಸೆಳೆದಿವೆ. ಈಗ ಟ್ರೇಲರ್ ರಿಲೀಸ್ ಆಗಿದ್ದು ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ‘ಡೆವಿಲ್’ ಸುದ್ದಿಗೋಷ್ಠಿಗೆ ವಿಜಯಲಕ್ಷ್ಮೀ ಬಂದಿಲ್ಲವೇಕೆ? ಉತ್ತರಿಸಿದ ಪ್ರಕಾಶ್

‘ಡೆವಿಲ್’ ಸಿನಿಮಾದಲ್ಲಿ ದರ್ಶನ್​ಗೆ ಜೊತೆಯಾಗಿ ರಚನಾ ರೈ ನಟಿಸಿದ್ದಾರೆ. ಮಹೇಶ್ ಮಂಜ್ರೇಕರ್, ಅಚ್ಯುತ್ ಕುಮಾರ್, ಶರ್ಮಿಳಾ ಮಾಂಡ್ರೆ, ಶೋಭರಾಜ್ ಮೊದಲಾದವರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಚಿತ್ರಕ್ಕೆ ಇದೆ. ಪ್ರಕಾಶ್ ಹಾಗೂ ಜಯಮ್ಮ ಚಿತ್ರ ನಿರ್ಮಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:12 am, Fri, 5 December 25