AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ

Darshan Thoogudeepa: ನಟ ದರ್ಶನ್​, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದಾರೆ. ಪ್ರತಿ ತಿಂಗಳು ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಇದರ ನಡುವೆ ದರ್ಶನ್​ಗೆ ಹೊಸದೊಂದು ತಲೆ ನೋವು ಶುರುವಾಗಿದೆ. ದರ್ಶನ್ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ನರಸೀಪುರ ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ.

ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿಗೆ ಸಮನ್ಸ್ ಜಾರಿ
Darshan Vijayalakshmi
ಮಂಜುನಾಥ ಸಿ.
|

Updated on: May 23, 2025 | 11:37 AM

Share

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್​ಗೆ ಇದೀಗ ಮತ್ತೊಂದು ಪ್ರಕರಣದಲ್ಲಿ ಸಮನ್ಸ್ ಜಾರಿ ಆಗಿದೆ. ದರ್ಶನ್ ಮಾತ್ರವೇ ಅಲ್ಲದೆ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೂ ಸಹ ಸಮನ್ಸ್ ಜಾರಿ ಆಗಿದೆ. ದರ್ಶನ್ ತಮ್ಮ ಮೈಸೂರು ಫಾರಂ ಹೌಸ್​ನಲ್ಲಿ ವಿದೇಶಿ ಬಾತುಕೋಳಿ ಸಾಕಿದ್ದರು ಈ ಬಗ್ಗೆ ಈ ಹಿಂದೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಆಗಿದೆ.

‘ಬಾರ್‌ ಹೆಡೆಡ್‌ ಗೂಸ್‌’ ಎಂಬ ಬಾತುಕೋಳಿಗಳನ್ನು ಸಾಕಿದ್ದ ದರ್ಶನ್, ಕೆಂಪಯ್ಯನ ಹುಂಡಿಯ ನಟ ದರ್ಶನ್ ತೋಟದ ಮೇಲೆ ದಾಳಿ ಮಾಡಿದ್ದ ಅರಣ್ಯಾಧಿಕಾರಿಗಳು, ಈ ವೇಳೆ ವಿದೇಶಿ ಪ್ರಭೇದದ ಬಾತು ಕೋಳಿ ವಶಕ್ಕೆ ಪಡೆದಿದ್ದರು. ಪ್ರಕರಣದ ವಿಚಾರಣೆಯು ಮೈಸೂರು ಜಿಲ್ಲೆ ಟಿ.‌ನರಸೀಪುರ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ಇದೀಗ ನ್ಯಾಯಾಲಯವು ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದು ಜುಲೈ 4 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದೆ.

ಬಾರ್‌ ಹೆಡೆಡ್‌ ಗೂಸ್‌ ಹೆಚ್ಚಾಗಿ ಮಧ್ಯ ಏಷ್ಯಾ ಪ್ರದೇಶದ್ದಾಗಿದ್ದು, ಇವು ವಲಸೆ ಹಕ್ಕಿಗಳಾಗಿವೆ, ಈ ಹಕ್ಕಿಗಳನ್ನು ಸಾಕುವುದು ವನ್ಯಜೀವಿ ಸಂರಕ್ಷಣೆಯ ಕಾಯ್ದೆಯಡಿ ಅಪರಾಧ ಎನಿಸಿಕೊಂಡಿದೆ. ಈ ಹಿಂದೆ ಪ್ರಕರಣ ದಾಖಲಾಗಿದ್ದಾಗ, ಬಾತುಕೊಳಿಗಳನ್ನು ಸ್ನೇಹಿತರು ನೀಡಿದ್ದರು ಎಂದು ಸ್ಪಷ್ಟನೆಯನ್ನು ನೀಡಿದ್ದರು ದರ್ಶನ್, ಬಾತುಕೋಳಿಗಳನ್ನು ವಶಕ್ಕೆ ಪಡೆದಿದ್ದ ಅಧಿಕಾರಿಗಳು ನಟ ದರ್ಶನ್ ವಿರುದ್ಧ ನಿಷೇಧಿತ ವನ್ಯ ಪಕ್ಷಿಗಳ ಸಾಕಣೆಗಾಗಿ ಪ್ರಕರಣ ದಾಖಲಿಸಿದ್ದರು.

ಇದನ್ನೂ ಓದಿ:ದರ್ಶನ್ ವಿರುದ್ಧ ಹೆಚ್ಚುವರಿ ಚಾರ್ಜ್​ಶೀಟ್ ಸಲ್ಲಿಕೆ, ಫೋಟೊದಿಂದ ಹೆಚ್ಚಾಯ್ತು ಕಂಟಕ

ದರ್ಶನ್ ಫಾರಂ ಹೌಸ್​ನಲ್ಲಿ ಹಲವು ವಿಧದ ಪ್ರಾಣಿ ಪಕ್ಷಿಗಳನ್ನು ಸಾಕಿದ್ದಾರೆ. ಪ್ರಾಣಿ ಪ್ರೇಮಿಯಾದ ದರ್ಶನ್ ಫಾರಂ ಹೌಸ್​​ನಲ್ಲಿ, ಹಸು, ಎತ್ತು, ಕುದುರೆ, ಗಿಳಿಗಳು, ಬಾತುಕೋಳಿ, ಕುರಿ, ಕೋಳಿ ಇನ್ನೂ ಕೆಲವಾರು ಪ್ರಾಣಿಗಳು ಇವೆ. ಈ ಹಿಂದೆ ಯೂಟ್ಯೂಬರ್ ಒಬ್ಬಾತ ದರ್ಶನ್ ಫಾರಂ ಹೌಸ್​​ನ ವಿಡಿಯೋ ಮಾಡಿದ್ದರು. ಆ ವಿಡಿಯೋ ಗಮನಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಫಾರಂ ಹೌಸ್​ ಮೇಲೆ ದಾಳಿ ಮಾಡಿ ನಿಯಮಬಾಹಿರವಾಗಿ ಇರಿಸಿಕೊಂಡಿದ್ದ ಪಕ್ಷಿಗಳನ್ನು ವಶಕ್ಕೆ ಪಡೆದಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ