AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯವಾಗಿದೆ ದರ್ಶನ್ ಚಿಕಿತ್ಸೆ ಮಾಹಿತಿ; ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು ಪಡೆದ ಅವರಿಗೆ ಶಸ್ತ್ರಚಿಕಿತ್ಸೆ ಬೇಕಾಗಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಮತ್ತು ಕುಟುಂಬದವರು ಚಿಕಿತ್ಸೆಯ ವಿವರಗಳನ್ನು ಬಹಿರಂಗಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಹೈಕೋರ್ಟ್‌ಗೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ.

ಗೌಪ್ಯವಾಗಿದೆ ದರ್ಶನ್ ಚಿಕಿತ್ಸೆ ಮಾಹಿತಿ; ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ವರದಿ ಸಲ್ಲಿಕೆ
ದರ್ಶನ್​
ಮದನ್​ ಕುಮಾರ್​
|

Updated on: Nov 06, 2024 | 4:55 PM

Share

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿರುವ ದರ್ಶನ್​ ಈಗ ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನ ಕೆಂಗೇರಿಯಲ್ಲಿ ಇರುವ ಖಾಸಗಿ ಆಸ್ಪತ್ರೆಗೆ ಅವರು ದಾಖಲಾಗಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಅವರಿಗೆ ವಿವಿಧ ಪರೀಕ್ಷೆಗಳನ್ನು ಮಾಡಲಾಗಿದೆ. ಯಾವ ರೀತಿಯ ಚಿಕಿತ್ಸೆ ನೀಡಬೇಕು ಎಂಬುದನ್ನು ವೈದ್ಯರು ನಿರ್ಧರಿಸಿದ್ದಾರೆ. ಆದರೆ ಕಾಯಿಲೆ ಮತ್ತು ಚಿಕಿತ್ಸೆ ಬಗ್ಗೆ ಯಾವುದೇ ಮಾಹಿತಿಯನ್ನು ಆಸ್ಪತ್ರೆಯ ಕಡೆಯಿಂದ ಬಹಿರಂಗಪಡಿಸಿಲ್ಲ. ಈ ವಿಚಾರದಲ್ಲಿ ಸಿಕ್ಕಾಪಟ್ಟೆ ಗೌಪ್ಯತೆ ಕಾಪಾಡಿಕೊಳ್ಳಲಾಗಿದೆ. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಲಾಗಿದೆ.

ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ದರ್ಶನ್​ ಅವರು ಬಳ್ಳಾರಿ ಜೈಲಿನಲ್ಲಿ ನಡೆಯಲು ಕೂಡ ಕಷ್ಟಪಡುತ್ತಿದ್ದರು. ಅಲ್ಲಿನ ವೈದ್ಯರ ವರದಿ ಆಧಾರದ ಮೇಲೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿತು. ಒಂದು ವಾರದೊಳಗೆ ದರ್ಶನ್​ ಅವರ ಚಿಕಿತ್ಸೆಯ ಬಗ್ಗೆ ಮಾಹಿತಿಯನ್ನು ಕೋರ್ಟ್​ಗೆ ನೀಡಬೇಕು ಎಂದು ಷರತ್ತು ವಿಧಿಸಲಾಗಿತ್ತು. ಇಂದು (ನವೆಂಬರ್​ 6) ಹೈಕೋರ್ಟ್​ಗೆ ವರದಿ ಸಲ್ಲಿಸಲಾಗಿದೆ.

ದರ್ಶನ್ ಅವರ ಅನಾರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನೂ ಬಹಿರಂಗಪಡಿಸಬಾರದು ಎಂದು ಪತ್ನಿ ವಿಜಯಲಕ್ಷ್ಮಿ ಅವರು ಆಸ್ಪತ್ರೆಯವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಆದ್ದರಿಂದ ದರ್ಶನ್ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲು ಆಸ್ಪತ್ರೆ ಹಿಂದೇಟು ಹಾಕುತ್ತಿದೆ. ಸಾಧ್ಯವಾದಷ್ಟು ಸೀಕ್ರೆಟ್​ ಕಾಪಾಡಿಕೊಳ್ಳಲು ಪ್ರಯತ್ನಿಸಲಾಗುತ್ತಿದೆ. ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬಗ್ಗೆಯೂ ಕುಟುಂಬದವರು ಆಲೋಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ನಟ ದರ್ಶನ್​ ವಿಚಾರದಲ್ಲಿ ಅರ್ಜುನ್ ಗುರೂಜಿ ನುಡಿದಿದ್ದ ಭವಿಷ್ಯ ನಿಜ ಆಯ್ತು

ಚಿಕಿತ್ಸೆ ಪಡೆಯುವ ಸಲುವಾಗಿ 6 ವಾರಗಳ ಕಾಲ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಈಗಾಗಲೇ ಅವರಿಗೆ ಚಿಕಿತ್ಸೆ ಆರಂಭಿಸಲಾಗಿದೆ. ಆದರೆ ಅಭಿಮಾನಿಗಳಿಗೆ ದರ್ಶನ್ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಮೂಲಗಳ ಪ್ರಕಾರ, ಸದ್ಯದಲ್ಲೇ ದರ್ಶನ್ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗುವುದು. ಅದಕ್ಕೆ ಕುಟುಂಬದವರು ಒಪ್ಪಿಗೆ ನೀಡಿದ್ದಾರೆ. ಸರ್ಜರಿ ಬಳಿಕ ಅವರು ಕೆಲವು ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಸಿಗುವುದು ಬಾಕಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್