ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Darshan Bail application: ದರ್ಶನ್ ತೂಗುದೀಪ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯುತ್ತಿದ್ದು, ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ.

ಹೈಕೋರ್ಟ್​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Follow us
|

Updated on: Oct 22, 2024 | 11:18 AM

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್​ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್​ನಲ್ಲಿ ಇಂದು (ಅಕ್ಟೋಬರ್ 22) ಮೊದಲ ಬಾರಿಗೆ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ. ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟ್​ನಲ್ಲಿಯೂ ವಾದ ಮಂಡಿಸುತ್ತಿದ್ದು, ದರ್ಶನ್​ಗೆ ಜಾಮೀನು ಕೊಡಿಸುವ ಅವಿರತ ಪ್ರಯತ್ನ ಮಾಡುತ್ತಿದ್ದಾರೆ.

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆದಿದೆ. ಸಿವಿ ನಾಗೇಶ್ ಅವರು ದರ್ಶನ್ ಪರವಾಗಿ ವಾದ ಮಂಡನೆ ಆರಂಭಿಸಿ, ದರ್ಶನ್​ಗೆ ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದು, ಅವರನ್ನು ನಿನ್ನೆ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ದರ್ಶನ್​ಗೆ ಚಿಕಿತ್ಸೆಯ ಅಗತ್ಯವಿದೆ. ಹಾಗಾಗಿ ಜಾಮೀನು ಕೋರುತ್ತಿದ್ದೇವೆ ಎಂದು ಹೇಳಿದರು. ಸಿವಿ ನಾಗೇಶ್ ಅವರ ಮಾತು ಆಲಿಸಿ, ಜೈಲಧಿಕಾರಿಗಳಿಂದ ದರ್ಶನ್​ರ ಆರೋಗ್ಯ ಸ್ಥಿತಿಯ ವರದಿಯನ್ನು ಕೇಳಿದರು. ಬಳಿಕ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಲಾಯ್ತು.

ಇದನ್ನೂ ಓದಿ:ವೈದ್ಯರ ಕೋರಿಕೆಗೆ ಕೊನೆಗೂ ಮಣಿದ ದರ್ಶನ್; ಹೆಲ್ತ್ ಬಗ್ಗೆ ಗುಡ್​ನ್ಯೂಸ್

ಅಕ್ಟೋಬರ್ 28ರ ಒಳಗಾಗಿ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್​ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್​ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್​ಗೆ ಜಾಮೀನು ನೀಡಬೇಕೊ ಇಲ್ಲವೋ ಅಥವಾ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕೋ ಎಂಬುದನ್ನು ನಿಶ್ಚಯ ಮಾಡಲಾಗುತ್ತದೆ.

ಈ ಹಿಂದೆ ದರ್ಶನ್ ಬೆಂಗಳೂರಿನ ಜೈಲಿನಲ್ಲಿದ್ದಾಗಲೂ ಸಹ ಜೈಲು ಅಧಿಕಾರಿಗಳು ಆರೋಗ್ಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆದರೆ ಆಗ ಜಾಮೀನು ಅರ್ಜಿಗಾಗಿ ಅಲ್ಲದೆ, ದರ್ಶನ್​ಗೆ ಮನೆಯಿಂದ ವಿಶೇಷ ಸೌಲಭ್ಯ ಪಡೆಯಲು ಹಾಕಿದ್ದ ಅರ್ಜಿಯ ವಿಚಾರಣೆ ಸಮಯದಲ್ಲಿ ವರದಿ ನೀಡಲಾಗಿತ್ತು. ಆದರೆ ನ್ಯಾಯಾಲಯವು ಆಗಲೂ ಸಹ ವಿಶೇಷ ಸೌಲಭ್ಯವನ್ನು ಪಡೆಯುವಂತಿಲ್ಲ ಎಂದಿತ್ತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್