ದರ್ಶನ್​ಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್; ದಾಸನಿಗೆ ಜೈಲೇ ಗತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ನಲ್ಲಿ ನಡೆಯಿತು. 120ಕ್ಕೂ ಅಧಿಕ ದಿನಗಳ ಕಾಲ ಜೈಲಿನಲ್ಲಿದ್ದ ದರ್ಶನ್​ ಇಂದು (ಅ.14) ಜಾಮೀನು ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಅವರಿಗೆ ನ್ಯಾಯಾಲಯವು ಬೇಲ್​ ನಿರಾಕರಿಸಿದೆ. ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್​ಗೆ ಜಾಮೀನು ಸಿಗದ ಕಾರಣ ಆಪ್ತರಿಗೆ ನಿರಾಸೆ ಆಗಿದೆ.

ದರ್ಶನ್​ಗೆ ಜಾಮೀನು ಕೊಡಲು ನಿರಾಕರಿಸಿದ ಕೋರ್ಟ್; ದಾಸನಿಗೆ ಜೈಲೇ ಗತಿ
ದರ್ಶನ್​, ರೇಣುಕಾ ಸ್ವಾಮಿ
Follow us
ಮದನ್​ ಕುಮಾರ್​
|

Updated on: Oct 14, 2024 | 5:37 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ನಾಲ್ಕು ತಿಂಗಳು ಕಳೆದಿವೆ. ಚಾರ್ಜ್​ಶೀಟ್ ಸಲ್ಲಿಕೆ ಬಳಿಕ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅವರು ಜಾಮೀನಿಗಾಗಿ ಸಾಕಷ್ಟು ಪ್ರಯತ್ನ ಮಾಡುತ್ತಲೇ ಬಂದಿದ್ದರು. ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್​ ಜಾಮೀನು ಕೊಡಲು ನಿರಾಕರಿಸಿದೆ. ಇದರಿಂದ ದರ್ಶನ್ ಜೈಲಿನಲ್ಲೇ ಮುಂದುವರಿಯುವುದು ಅನಿವಾರ್ಯ ಆಗಿದೆ. ಅವರು ಈ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅವರು ಜೂನ್ 11ರಂದು ಅರೆಸ್ಟ್ ಆದರು. ಆ ಬಳಿಕ ಅವರನ್ನು ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿತ್ತು. ಆದರೆ, ಅಲ್ಲಿ ಅವರು ಐಷಾರಾಮಿ ವ್ಯವಸ್ಥೆ ಪಡೆದ ಕಾರಣಕ್ಕೆ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು. ಈಗ ಈ ತೀರ್ಪಿನಿಂದ ಅವರು ಬಳ್ಳಾರಿ ಜೈಲಲ್ಲೇ ಇರಬೇಕಾಗಿದೆ.

ಇದನ್ನೂ ಓದಿ:  ಪ್ರೇಯಸಿ ಪ್ರೀತಿಸಿ ಕೈಕೊಟ್ಟಳು ಅಂತ ಆಕೆಯೊಂದಿಗಿನ ಖಾಸಗಿ ಫೋಟೋ ಹರಿಬಿಟ್ಟ ದರ್ಶನ್​!

ಜಾಮೀನು ಸಿಗದಿರೋ ಕಾರಣ ಅನಾರೋಗ್ಯ ಕಾರಣ ನೀಡಿ ದರ್ಶನ್ ಬೆಂಗಳೂರಿಗೆ ಶಿಫ್ಟ್​ ಆಗುವ ಸಾಧ್ಯತೆ ಇದೆ. ಈಗಾಗಲೇ ದರ್ಶನ್ ಕುಟುಂಬಸ್ಥರು ಮೆಡಿಕಲ್ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಕಾರಣ ನೀಡಿ ಬೆಂಗಳೂರಿಗೆ ಶಿಫ್ಟ್​ ಆಗಲು ಪ್ಲ್ಯಾನ್​ ನಡೆದಿದೆ. ದರ್ಶನ್ ಕಳೆದ ಕೆಲ ದಿನಗಳಿಂದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ನಡೆಯಲು ಕೂಡ ಅವರಿಗೆ ಕಷ್ಟ ಆಗುತ್ತಿದೆ ಎನ್ನಲಾಗಿದೆ.

ಇದನ್ನೂ ಓದಿ: ದರ್ಶನ್ ಕೇಸ್​ ಬಳಿಕವೂ ನಿಲ್ಲದ ರಾಜಾತಿಥ್ಯ: ಜೈಲಿನಿಂದಲೇ ಜೀವ ಬೆದರಿಕೆ ಸಂದೇಶ ರವಾನೆ

ದರ್ಶನ್ ಪರ ಸಿವಿ ನಾಗೇಶ್ ಅವರು ವಾದ ಮಂಡನೆ ಮಾಡಿದ್ದರು. ದರ್ಶನ್ ವಿರುದ್ಧ ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ ಎಂದು ವಾದ ಮಂಡಿಸಿದ್ದರು. ಇದಕ್ಕೆ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ಕೌಂಟರ್ ಕೊಟ್ಟಿದ್ದರು. ಪ್ರಸನ್ನ ಕುಮಾರ್ ಅವರ ವಾದ ಜಡ್ಜ್​ಗೆ ಹೆಚ್ಚು ಸಮಂಜಸ ಎನಿಸಿದೆ. ಹಾಗಾಗಿ ದರ್ಶನ್​ಗೆ ಜಾಮೀನು ನಿರಾಕರಿಸಲಾಗಿದೆ. ಇದರಿಂದ ದರ್ಶನ್​ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ತೀವ್ರ ನಿರಾಸೆಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ