AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ; ದಾಸನಿಗೆ ಮತ್ತೆ ನಿರಾಸೆ

ಜಾಮೀನು ಪಡೆದು ಹೊರಗೆ ಬರಬೇಕು ಎಂದು ಕಾಯುತ್ತಿರುವ ನಟ ದರ್ಶನ್​ಗೆ ಮತ್ತೆ ನಿರಾಸೆ ಆಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಮುಂದಕ್ಕೆ ಹಾಕಲಾಗಿದೆ. ಅಕ್ಟೋಬರ್​ 4ರಂದು ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರು ಬಳ್ಳಾರಿ ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ.

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ; ದಾಸನಿಗೆ ಮತ್ತೆ ನಿರಾಸೆ
ದರ್ಶನ್​
Ramesha M
| Edited By: |

Updated on:Sep 30, 2024 | 3:25 PM

Share

ಆದಷ್ಟು ಬೇಗ ದರ್ಶನ್​ ಅವರಿಗೆ ಜಾಮೀನು ಸಿಗಲಿ ಅಂತ ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ದರ್ಶನ್​ಗೆ ಇಂದು (ಸೆಪ್ಟೆಂಬರ್​ 30) ಬೇಲ್​ ಸಿಗಬಹುದು ಎಂದು ಆಪ್ತರು ನಿರೀಕ್ಷಿಸಿದ್ದರು. ಆದರೆ ಅವರ ಜಾಮೀನು ಅರ್ಜಿ ವಿಚಾರಣೆ ದಿನಾಂಕವನ್ನು ಮುಂದೂಡಲಾಗಿದೆ. ಅಕ್ಟೋಬರ್​ 4ರಂದು ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

ಇದನ್ನೂ ಓದಿ: ಬುದ್ಧಿವಾದ ಹೇಳಿದ್ದಕ್ಕೆ ಕತ್ತುಕೊಯ್ದು ಪರಾರಿಯಾದ ದರ್ಶನ್ ಅಭಿಮಾನಿಗಳು

ಸೆಷನ್ಸ್​ ನ್ಯಾಯಾಲಯದಲ್ಲೇ ದರ್ಶನ್​ಗೆ ಜಾಮೀನು ಸಿಗಲಿದೆ ಎಂದು ದರ್ಶನ್​ ಪರ ವಕೀಲರು ಇತ್ತೀಚೆಗೆ ಭರವಸೆ ವ್ಯಕ್ತಪಡಿಸಿದ್ದರು. ಒಂದು ವೇಳೆ ಸೆಷನ್ಸ್​ ಕೋರ್ಟ್​ನಲ್ಲಿ ಬೇಲ್ ಸಿಗದಿದ್ದರೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗುವುದು. ದರ್ಶನ್​ಗೆ ಜಾಮೀನು ಕೊಡಿಸಲು ಪತ್ನಿ ವಿಜಯಲಕ್ಷ್ಮಿ ಅವರು ಕಷ್ಟಪಡುತ್ತಿದ್ದಾರೆ. ದರ್ಶನ್​ ನಟಿಸಬೇಕಿದ್ದ ಸಿನಿಮಾಗಳ ಕೆಲಸಗಳು ನಿಂತಲ್ಲೇ ನಿಂತಿವೆ. ಇತ್ತೀಚೆಗೆ ‘ಡೆವಿಲ್​: ದಿ ಹೀರೋ’ ಸಿನಿಮಾ ತಂಡದವರು ಬಳ್ಳಾರಿ ಜೈಲಿಗೆ ಹೋಗಿ ಬಂದಿದ್ದರು.

ಇದನ್ನೂ ಓದಿ: ದರ್ಶನ್​ಗೆ ಜಾಮೀನು ಕೊಡಬೇಕು ಎಂದು ಕೋರಲು ವಕೀಲರು ನೀಡಿದ ಕಾರಣಗಳೇನು?

ಇದೇ ಪ್ರಕರಣದಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ತುಮಕೂರು ಜೈಲಿನಲ್ಲಿ ಇದ್ದಾರೆ. ಈ ಮೂವರಿಗೆ ಒಂದು ವಾರದ ಹಿಂದೆಯೇ ಜಾಮೀನು ನೀಡಲಾಗಿತ್ತು. ಆದರೆ ಇಷ್ಟು ದಿನ ಕಳೆದರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಈ ಮೂವರು ಇನ್ನೂ ಕೂಡ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಬಿಡುಗಡೆ ಮಾಡಲು ಶ್ಯೂರಿಟಿ ಸಮಸ್ಯೆ ಆಗುತ್ತಿದೆ ಎನ್ನಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:13 pm, Mon, 30 September 24

ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ