ದರ್ಶನ್ ಜೊತೆ ಸಹಚರರಿಗೂ ಬಿಗ್ ರಿಲೀಫ್; ಹೈಕೋರ್ಟ್ನಲ್ಲಿ ಸಿಕ್ತು ಜಾಮೀನು
ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಬಿಗ್ ರಿಲೀಫ್ ಕೊಟ್ಟಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೊತೆ ಅವರ ಸಹಚರರು ಕೂಡ ಅರೆಸ್ಟ್ ಆಗಿದ್ದರು. ಈ ಪೈಕಿ ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿದೆ. ಇಂದು (ಡಿಸೆಂಬರ್ 13) ಕೋರ್ಟ್ ತೀರ್ಪನ್ನು ಪ್ರಕಟಿಸಿದೆ. ಈ ಪೈಕಿ ಯಾರಿಗೆ ಜಾಮೀನು ದೊರೆತಿತು, ಯಾರಿಗೆ ಜಾಮೀನು ಸಿಕ್ಕಿಲ್ಲ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.
ಜೂನ್ನಲ್ಲಿ ರೇಣುಕಾ ಸ್ವಾಮಿ ಕೊಲೆ ನಡೆಯಿತು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿ ಅರೆಸ್ಟ್ ಆಗಿದ್ದರು. ಈ ಪೈಕಿ ಕೆಲವರಿಗೆ ಈಗಾಗಲೇ ಜಾಮೀನು ಸಿಕ್ಕಿತ್ತು. ಆದರೆ, ದರ್ಶನ್ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಕೆಲವರು ಇನ್ನೂ ಜೈಲಿನಲ್ಲೇ ಇದ್ದರು. ಈ ಅವರೆಲ್ಲರಿಗೂ ಜಾಮೀನು ಸಿಕ್ಕಿದೆ. ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಹೊರಡಿಸಿದೆ. ಇದು ಅವರಿಗೆ ಬಿಗ್ ರಿಲೀಫ್ ಕೊಟ್ಟಿದೆ.
ದರ್ಶನ್, ಪವಿತ್ರಾ ಗೌಡ, ಲಕ್ಷ್ಮಣ್, ನಾಗರಾಜ್, ಅನುಕುಮಾರ್, ಜಗದೀಶ್, ಪ್ರದೂಷ್ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಿದ ಎಲ್ಲರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ವಿಚಾರ ಕೇಳಿ ಅವರ ಅಭಿಮಾನಿಗಳು ಖುಷಿಪಟ್ಟಿದ್ದಾರೆ.
ಇದನ್ನೂ ಓದಿ: Darshan Case: ರೇಣುಕಾ ಸ್ವಾಮಿ ಪ್ರಕರಣ: ದರ್ಶನ್ ಸೇರಿ 7 ಆರೋಪಿಗಳಿಗೆ ಜಾಮೀನು
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಪವಿತ್ರಾ ಗೌಡ, ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಕೊಲೆಯಲ್ಲಿ ಸಹಾಯ ಮಾಡಿದ ಆರೋಪ ಇವರ ಸಹಚರರಿಗೆ ಇತ್ತು. ದರ್ಶನ್ ಜೊತೆ ಅವರುಗಳೂ ಬಂಧನಕ್ಕೆ ಒಳಗಾಗಿದ್ದರು. ಈಗ ಅವರು ಆರು ತಿಂಗಳು ಜೈಲಿನಲ್ಲಿ ಇದ್ದು, ಹೊರಕ್ಕೆ ಬರಲಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 2:38 pm, Fri, 13 December 24