AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವಾಗಲೇ, ‘ಬಾಸ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಟೀಸರ್ ರೇಣುಕಾಸ್ವಾಮಿ ಪ್ರಕರಣವನ್ನು ಹೋಲುತ್ತದೆ ಮತ್ತು "ನೈಜ ಘಟನೆ ಆಧಾರಿತ" ಎಂದು ಹೇಳಿಕೊಳ್ಳುವುದರಿಂದ ವಿವಾದ ಸೃಷ್ಟಿಯಾಗಿದೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿರುವುದರಿಂದ, ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿ, ಚಿತ್ರಕ್ಕೆ ಪ್ರಮಾಣೀಕರಣ ನೀಡದಂತೆ ಕೋರಿದ್ದಾರೆ.

‘ಬಾಸ್’ ಸಿನಿಮಾಗೆ ಸಂಕಷ್ಟ; ನೋಟಿಸ್ ಕೊಟ್ಟ ದರ್ಶನ್ ಲಾಯರ್
ದರ್ಶನ್
ಮಂಗಳ ರಾಜ್
| Edited By: |

Updated on: Mar 16, 2026 | 3:12 PM

Share

ನಟ ದರ್ಶನ್ ಅವರು (Darshan) ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ಅರೆಸ್ಟ್ ಆಗಿದ್ದಾರೆ. ಅವರು ಈ ಪ್ರಕರಣದಲ್ಲಿ ಎ2 ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಕರಣದ ವಿವರ ಎಲ್ಲರಿಗೂ ತಿಳಿದಿದೆ. ಚಾರ್ಜ್​​ಶೀಟ್​​​ನಲ್ಲಿ ಎಲ್ಲ ವಿಷಯವನ್ನೂ ವಿವರವಾಗಿ ಬರೆಯಲಾಗಿದೆ. ಹೀಗಿರುವಾಗಲೇ ‘ಬಾಸ್’ ಹೆಸರಿನ ಸಿನಿಮಾ ಸೆಟ್ಟೇರಿ, ರಿಲೀಸ್​​​ಗೆ ರೆಡಿ ಆಗಿದೆ. ಈ ಸಿನಿಮಾ ಟೀಸರ್ ನೋಡಿದರೆ ಇದು ದರ್ಶನ್ ಪ್ರಕರಣವನ್ನೇ ನೆನಪಿಸಿದೆ. ಇದು ಚರ್ಚೆಗೆ ಕಾರಣ ಆಗಿತ್ತು. ಹೀಗಿರುವಾಗಲೇ ದರ್ಶನ್ ಪರ ವಕೀಲರು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ್ದು, ಸಿನಿಮಾಗೆ ಸೆನ್ಸಾರ್ ಮಾಡದಂತೆ ಕೋರಿದೆ.

ರೇಣಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದು ಬೆಂಗಳೂರಿನ ಪಟ್ಟಣಗೆರೆ ಶೆಡ್​ ಅಲ್ಲಿ ಕೊಲೆ ಮಾಡಲಾಯಿತು. ಈ ವೇಳೆ ದರ್ಶನ್ ಹಾಗೂ ಪವಿತ್ರಾ ಕೂಡ ಸ್ಥಳದಲ್ಲಿ ಇದ್ದರು ಎನ್ನುವ ಆರೋಪ ಇದೆ. ಆ ಬಳಿಕ ಹೆಣವನ್ನು ಮೋರಿ ಪಕ್ಕದಲ್ಲಿ ಹಾಕಲಾಯಿತು. ಹೆಣ ಬಿಸಾಕಿದವರು ಸಿಕ್ಕಿ ಬಿದ್ದರು. ನಂತರ ದರ್ಶನ್ ಹೆಸರು ಕೂಡ ಹೊರಬಿತ್ತು. ಅವರನ್ನು ಬಂಧಿಸಲಾಯಿತು. ತಾವು ನಿರಪರಾಧಿ ಎಂದು ಅವರು ಹೇಳುತ್ತಾ ಬರುತ್ತಿದ್ದಾರೆ.

ಈಗ ರಿಲೀಸ್ ಆಗಿರೋ ‘ಬಾಸ್’ ಸಿನಿಮಾ ಟೀಸರ್ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಹೋಲುವ ರೀತಿಯಲ್ಲಿ ಇದೆ. ಟೀಸರ್​​​ನಲ್ಲಿ ಶೆಡ್​, ಮೋರಿಗಳನ್ನು ತೋರಿಸಲಾಗಿದೆ. ಸೆಲೆಬ್ರಿಟಿ ಓರ್ವ ಈ ಪ್ರಕರಣದಲ್ಲಿ ಸಿಲುಕುತ್ತಾನೆ. ತಾನು ನಿರಪರಾಧಿ ಎಂದು ಹೇಳುತ್ತಾನೆ. ಇದು ಕೇವಲ ಕಾಲ್ಪನಿಕ ಕಥೆ ಎಂದರೆ ಪ್ರಕರಣ ಅಷ್ಟು ಚರ್ಚೆಗೆ ಗ್ರಾಸವಾಗುತ್ತಿರಲಿಲ್ಲವೇನೋ. ಆದರೆ, ಇದು ನೈಜ ಘಟನೆ ಆಧಾರಿತ ಕಥೆ ಎಂದು ಹೇಳಿರೋದು ಚರ್ಚೆಗೆ ಕಾರಣ ಆಗಿದೆ.

ಇದನ್ನೂ ಓದಿ: ಮೋರಿ, ಶೆಡ್​, ಸೆಲೆಬ್ರಿಟಿ, ರಾಜಕೀಯ ; ‘ಬಾಸ್’ ಸಿನಿಮಾದಲ್ಲಿ ದರ್ಶನ್ ಕಥೆ? ಈ ಪ್ರಕರಣ ಇನ್ನೂ ಕೋರ್ಟ್​​​ನಲ್ಲಿದೆ. ದರ್ಶನ್ ತಪ್ಪು ಮಾಡಿದ್ದಾನೆ ಅಥವಾ ಮಾಡಿಲ್ಲ ಎಂಬುದನ್ನು ಕೋರ್ಟ್ ನಿರ್ಧರಿಸುತ್ತದೆ. ಅದಕ್ಕೂ ಮೊದಲೇ ಈ ಘಟನೆ ಆಧರಿಸಿ ಸಿನಿಮಾ ಮಾಡೋದು ಎಷ್ಟು ಸರಿ ಎಂಬ ಪ್ರಶ್ನೆ ಕೆಲವರದ್ದು. ಈಗ ದರ್ಶನ್ ಪರ ವಕೀಲರು ಸೆನ್ಸರ್ ಮಂಡಳಿಗೆ ನೋಟೀಸ್ ನೀಡಿ, ಯಾವುದೇ ಕಾರಣಕ್ಕೂ ಸಿನಿಮಾಗೆ ಸೆನ್ಸಾರ್ ಮಾಡಬಾರದು ಎಂದು ಹೇಳಿದ್ದಾರೆ. ನಿರ್ದೇಶಕ ಲವ ಆ್ಯಕ್ಷನ್ ಕಟ್ ಹೇಳಿದ್ದು, ತನುಷ್ ಶಿವಣ್ಣ ನಾಯಕನಾಗಿ ಸಿನಿಮಾದಲ್ಲ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮಂಗಳ ರಾಜ್
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ