ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?

ಸೆಪ್ಟೆಂಬರ್ 17ರಂದು ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಳ್ಳುವುದರಲ್ಲಿ ಇತ್ತು. ಹೀಗಾಗಿ, ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಎದುರು ಅವರನ್ನು ಹಾಜರುಪಡಿಸಲಾಯಿತು. ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡಿ ಜಡ್ಜ್​ ಆದೇಶ ಹೊರಡಿಸಿದ್ದಾರೆ. ಈಗ ದರ್ಶನ್ ಅವರು 100 ದಿನ ಪೂರೈಸಿದ್ದಾರೆ.

ದರ್ಶನ್ ತೂಗುದೀಪ ಬಂಧನವಾಗಿ ಇಂದಿಗೆ 100 ದಿನ; ಜೂನ್​ 11ರಿಂದ ಇಲ್ಲಿಯವರೆಗೆ ಏನೆಲ್ಲ ಆಯ್ತು?
ದರ್ಶನ್
Edited By:

Updated on: Sep 18, 2024 | 9:13 AM

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಅವರು ಬಂಧನಕ್ಕೆ ಒಳಗಾಗಿ ಇಂದಿಗೆ (ಸೆಪ್ಟೆಂಬರ್ 18) ಬರೋಬ್ಬರಿ 100 ದಿನ ತುಂಬಿದೆ. ಹಾಯಾಗಿ ಸಿನಿಮಾ ಶೂಟಿಂಗ್ ಮಾಡಿಕೊಂಡಿರಬೇಕಿದ್ದ ಅವರು ಈಗ ಜೈಲಿನಲ್ಲಿ ಕುಳಿತು ಟಿವಿ, ಕುರ್ಚಿ, ಮನೆಯೂಟ ಸೇರಿ ಅನೇಕ ಸವಲತ್ತಿಗೆ ಬೇಡಿಕೆ ಇಡುತ್ತಾ ಪರಿತಪಿಸಬೇಕಾಗುತ್ತಿದೆ. ದರ್ಶನ್ ಅವರ ಪರವಾಗಿ ಇನ್ನೂ ಜಾಮೀನು ಅರ್ಜಿ ಸಲ್ಲಿಕೆ ಆಗಿಲ್ಲ. ಹೀಗಾಗಿ ಅವರು ಮತ್ತಷ್ಟು ದಿನ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ಇದೆ.

ಜೂನ್ 8ರಂದು ರೇಣುಕಾಸ್ವಾಮಿ ಕೊಲೆ ನಡೆಯಿತು. ಜೂನ್​ 11ರಂದು ಮೈಸೂರಿನ ಹೋಟೆಲ್​ನಲ್ಲಿ ದರ್ಶನ್ ಬಂಧನ ಆಯಿತು. ಕೊಲೆ ನಡೆದ 60 ಗಂಟೆಯೊಳಗೆ ನಟನ ಬಂಧನ ಆಗಿತ್ತು. ಅದೇ ದಿನ ದರ್ಶನ್ ಅವರನ್ನು ಬೆಂಗಳೂರಿಗೆ ಪೊಲೀಸರು ಕರೆತಂದಿದ್ದರು. ಅವರನ್ನು ಪೊಲೀಸ್​ ಕಸ್ಟಡಿಗೆ ನೀಡಲಾಯಿತು. ಆ ಬಳಿಕ ಕೇಸ್​ನಲ್ಲಿ ಭಾಗಿಯಾದ ಇತರ 16 ಆರೋಪಿಗಳನ್ನು ಬಂಧಿಸಲಾಯಿತು. ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದರು. 12 ದಿನ ಕೊಲೆ ಕೇಸ್ ಸಂಬಂಧ ಪೊಲೀಸರು ದರ್ಶನ್​ ವಿಚಾರಣೆ ನಡೆಸಿದ್ದರು. ಈ ಪ್ರಕರಣದಲ್ಲಿ ದರ್ಶನ್ ಎ2 ಆಗಿದ್ದಾರೆ.

ನಂತರ ಕೋರ್ಟ್ ದರ್ಶನ್​ಗೆ ನ್ಯಾಯಾಂಗ ಬಂಧನ ವಿಧಿಸಿತು. ಹೀಗಾಗಿ, ದರ್ಶನ್ ಅವರು ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆದರು. ಅಲ್ಲಿ ಸುಮಾರು ಎರಡು ತಿಂಗಳು ಇದ್ದರು. ಆಗ ಅವರ ಐಷಾರಾಮಿ ಜೀವನದ ಫೋಟೋ ಹೊರಬಿತ್ತು. ರೌಡಿಶೀಟರ್ ನಾಗನ ಜೊತೆ ಸೇರಿ ಸಿಗರೇಟ್ ಸೇದುತ್ತಾ, ಕಾಫಿ ಹೀರುತ್ತಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಯಿತು.

ಇದನ್ನೂ ಓದಿ: ‘ಬೇಸರ ಆಗೇ ಆಗುತ್ತದೆ’; ದರ್ಶನ್ ಕೇಸ್ ಬಗ್ಗೆ ಉಪೇಂದ್ರ ಮಾತು  

ಸದ್ಯ ದರ್ಶನ್ ಅವರು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಇದ್ದಾರೆ. ಸದ್ಯ ಅವರ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಆಗಿದೆ. ಜೈಲಿನಲ್ಲಿ ಸಖತ್ ಹಿಂಸೆ ಆಗುತ್ತಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ. ಆದಾಗ್ಯೂ ಅವರ ಧಿಮಾಕು ಕಡಿಮೆ ಆಗಿಲ್ಲ. ಇತ್ತೀಚೆಗೆ ಮಾಧ್ಯಮಗಳ ಕ್ಯಾಮೆರಾ ಕಂಡಾಗ ಅಸಹ್ಯ ಸನ್ನೆ ಮಾಡಿದ್ದರು.

(ವರದಿ: ಪ್ರದೀಪ್)

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:48 am, Wed, 18 September 24

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us